ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರೈತ ಸಂಘಟನೆಗಳ ಬೆಂಬಲ; ಬ್ರಿಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

Date:

  • ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶ ರೈತರಿಂದ ಬೆಂಬಲ
  • ಬ್ರಿಜ್ಭೂಷಣ್ರನ್ನು ಮೇ 21ರೊಳಗೆ ಬಂಧಿಸಲು ಗಡುವು ನೀಡಿದ ಕುಸ್ತಿಪಟುಗಳು

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ವಿವಿಧ ರಾಜಕೀಯ ಪಕ್ಷಗಳ ಬೆಂಬಲದ ನಂತರ ಇದೀಗ ಉತ್ತರ ಭಾರತದ ರೈತರೂ ಕೈಜೋಡಿಸಿದ್ದಾರೆ.

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಸುಮಾರು 500ಕ್ಕೂ ಹೆಚ್ಚು ರೈತರು ಸೋಮವಾರ ನವದೆಹಲಿಯ ಜಂತರ್ ಮಂತರ್‌ಗೆ ಆಗಮಿಸಿ ಭಾರತೀಯ ಕುಸ್ತಿ ಫಡರೇಷನ್‌ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಗುಂಪು ಜಂತ​ರ್‌​ಮಂತ​ರ್‌ಗೆ ಮೆರ​ವ​ಣಿಗೆ ಮೂಲಕ ಸಾಗು​ತ್ತಿ​ದ್ದಾ​ಗ ಪೊಲೀ​ಸರು ಬ್ಯಾರಿ​ಕೇ​ಡ್‌ ಅಳ​ವ​ಡಿಸಿ ಅವ​ರನ್ನು ತಡೆ​ದಿ​ದ್ದಾರೆ. ಇದನ್ನು ಲೆಕ್ಕಿ​ಸದ ರೈತರು ಬ್ಯಾರಿ​ಕೇ​ಡ್‌​ಗ​ಳನ್ನು ಕಿತ್ತೆ​ಸೆದು ಪ್ರತಿ​ಭ​ಟ​ನಾ ಸ್ಥಳಕ್ಕೆ ಆಗ​ಮಿ​ಸಿ​ದ್ದು, ಕುಸ್ತಿ​ಪಟುಗಳಿಗೆ ನ್ಯಾಯ ಸಿಗು​ವ​ವ​ರೆಗೂ ಹೋರಾ​ಟ​ದಲ್ಲಿ ಪಾಲ್ಗೊ​ಳ್ಳು​ವು​ದಾಗಿ ತಿಳಿ​ಸಿ​ದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮಾತನಾಡಿದ, ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಅಭಿಮನ್ಯು ಕೊಹಾದ್, ಕುಸ್ತಿಪಟುಗಳು ರೈತರ ಕುಟುಂಬಗಳಿಗೆ ಸೇರಿದವರು, ಆದ್ದರಿಂದ ಅವರನ್ನು ಬೆಂಬಲಿಸುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ. “ಇದು ಮಹಿಳೆಯರಿಗೆ ಸಾಮಾಜಿಕ ನ್ಯಾಯದ ವಿಷಯವಾಗಿದೆ. ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯ ವಿರುದ್ಧ ಪ್ರತಿಭಟಿಸುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ‘ಕೊಲ್ಲಬೇಕೆನಿಸಿದರೆ ನಮ್ಮನ್ನು ಕೊಂದುಬಿಡಿ’; ಪೊಲೀಸರ ಅಮಾನವೀಯ ವರ್ತನೆಗೆ ವಿನೇಶ್ ಫೋಗಟ್ ಆಕ್ರೋಶ

ಪ್ರತಿ​ಭ​ಟ​ನೆಗೆ ವಿವಿಧ ಕಡೆ​ಗ​ಳಿಂದ ಬೆಂಬಲ ವ್ಯಕ್ತ​ವಾ​ಗು​ತ್ತಿರುವ ಬಗ್ಗೆ ಪ್ರತಿ​ಕ್ರಿ​ಯಿ​ಸಿ​ರುವ ಅಂತರರಾಷ್ಟ್ರೀಯ ಖ್ಯಾತಿ ಕುಸ್ತಿಪಟು ವಿನೇಶ್‌ ಫೋಗಟ್‌, `ಪ್ರತಿ​ಭ​ಟ​ನೆ​ಯನ್ನು ಯಾರೂ ಹೈಜಾಕ್‌ ಮಾಡಿಲ್ಲ. ನಾವು ರಾಜ​ಕೀಯ ಮಾಡಲು ಬಂದಿಲ್ಲ. ನಮಗೆ ನ್ಯಾಯ ಸಿಗ​ಬೇಕು. ನಮ್ಮ ಹೋರಾ​ಟ​ಕ್ಕೆ ಯಾರು ಬೇಕಾ​ದರೂ ಬೆಂಬ​ಲಿ​ಸ​ಬ​ಹುದು. ನಾವು ದೇಶ​ಕ್ಕಾಗಿ ಹೋರಾ​ಡು​ತ್ತಿ​ದ್ದೇವೆ. ಇದು ಕುಸ್ತಿ​ಪ​ಟು​ಗ​ಳಿಗೆ ಮಾತ್ರ ಸೀಮಿ​ತ​ವಾ​ಗಿ​ಲ್ಲ’ ಎಂದು ತಿಳಿ​ಸಿ​ದ್ದಾರೆ.

ಬ್ರಿಜ್‌ಭೂಷಣ್‌ರನ್ನು ಮೇ 21ರೊಳಗೆ ಬಂಧಿಸದಿದ್ದರೆ ಪ್ರತಿಭಟನೆಯು ತೀವ್ರಸ್ವರೂಪ ಪಡೆಯಲಿದೆ ಎಂದು ಕುಸ್ತಿಪಟುಗಳು ಎಚ್ಚರಿಸಿದ್ದು, ಮುಂದಿನ ನಡೆ ಬಗ್ಗೆ ನಿರ್ಧರಿಸಲು ರಚಿಸಿದ್ದ 31 ಸದಸ್ಯರ ಸಮಿತಿಯ ಸಲಹೆಯ ಮೇರೆಗೆ ಕುಸ್ತಿಪಟುಗಳು ಈ ಘೋಷಣೆ ಮಾಡಿದ್ದಾರೆ.

ಕಳೆದ ಎರಡು ದಿನಗಳಿಂದ 2000ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಯುತ್ತಿರುವ ಜಂತರ್‌-ಮಂತರ್‌ಗೆ ಭೇಟಿ ನೀಡಿದರು. ರೈತ ಮುಖಂಡ ರಾಕೇಶ್‌ ಟಿಕಾಯತ್‌ ಸೇರಿ ಹಲವರು ಭೇಟಿ ನೀಡಿ ಬ್ರಿಜ್‌ಭೂಷಣ್‌ ವಿರುದ್ಧ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...