ಏಕದಿನ ವಿಶ್ವಕಪ್ 2023 | ಪಾಕಿಸ್ತಾನಕ್ಕೆ ಸುಲಭ ತುತ್ತಾದ ನೆದರ್ಲ್ಯಾಂಡ್ಸ್

Date:

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯ ಎರಡನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡ ಪಾಕಿಸ್ತಾನಕ್ಕೆ ಸುಲಭ ತುತ್ತಾಯಿತು.

ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕ್‌ ನೀಡಿದ್ದ 287 ರನ್‌ಗಳ ಸವಾಲನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್‌ 41 ಓವರ್‌ಗಳಲ್ಲಿ 205 ರನ್‌ಗಳಿಗೆ ಆಲೌಟ್‌ ಆಗಿ 81 ರನ್ನುಗಳ ಸೋಲು ಅನುಭವಿಸಿತು.

ನೆದರ್ಲ್ಯಾಂಡ್ಸ್‌ ಪರ ಆರಂಭಿಕ ಆಟಗಾರ ವಿಕ್ರಂಜಿತ್ ಸಿಂಗ್(52) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಬಾಸ್‌ ಡಿ ಲೀಡೆ 67 ರನ್‌ ಗಳಿಸಿದ್ದು ಹೊರತುಪಡಿಸಿದರೆ ಉಳಿದ ಆಟಗಾರರಿಂದ ಹೆಚ್ಚು ಪ್ರದರ್ಶನ ವ್ಯಕ್ತವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನದ ಪರ ಹಾರಿಸ್‌ ರೌಫ್ 43/3 ಹಾಗೂ ಹಸನ್ ಅಲಿ 33/2 ವಿಕೆಟ್ ಕಬಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇನ್ನುಳಿದಂತೆ ಶಾಹೀನ್ ಶಾ ಆಫ್ರಿದಿ 37/1,  ಇಫ್ತಿಕರ್ ಅಹಮದ್ 16/1, ಮೊಹಮ್ಮದ್ ನವಾಜ್ 31/1 ಹಾಗೂ ಶಾದಾಬ್ ಖಾನ್ 45/1 ವಿಕೆಟ್‌ಗಳನ್ನು ಪಡೆದರು.

ಇದಕ್ಕೂ ಮೊದಲು ಟಾಸ್‌ ಗೆದ್ದ ನೆದೆರ್‌ಲ್ಯಾಂಡ್ಸ್‌ ತಂಡದ ನಾಯಕ ಸ್ಕಾಟ್‌ ಎಡ್ವರ್ಡ್ಸ್‌ ಅವರು ಪಾಕ್‌ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದರು.

ಏಕದಿನ ವಿಶ್ವಕಪ್ 2023 ರ​ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಪಾಕಿಸ್ತಾನ, ಬ್ಯಾಟಿಂಗ್ ಸ್ನೇಹಿ ಪಿಚ್​​ನಲ್ಲಿ ಡಚ್ಚರ ಬೌಲಿಂಗ್​​​​ಗೆ ತತ್ತರಿಸಿತು. ಆದರೆ, ಸಂಘಟಿತ ಬೌಲಿಂಗ್ ದಾಳಿಯ ನಡುವೆ ಮೊಹಮ್ಮದ್ ರಿಜ್ವಾನ್ (68) ಮತ್ತು ಸೌದ್ ಶಕೀಬ್ (68) ತಲಾ ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ಡಚ್ಚರಿಗೆ 287 ರನ್​ಗಳ ಗುರಿ ನೀಡಿತು.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಬೆಂಗಳೂರಿನ ತಮ್ಮ ಪೂರ್ವಜರ ಬಗ್ಗೆ ಮೆಲುಕು ಹಾಕಿದ ರಚಿನ್ ರವೀಂದ್ರ

ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಫಕಾರ್​ ಜಮಾನ್ (12), ಇಮಾಮ್ ಉಲ್ ಹಕ್ (15) ಮತ್ತು ನಾಯಕ ಬಾಬರ್ ಅಜಮ್ (5) ಬೇಗನೇ ವಿಕೆಟ್ ಒಪ್ಪಿಸಿದರು. 38 ರನ್‌ಗಳಿಗೆ 3 ವಿಕೆಟ್ ಪಡೆದು ನೆದರ್ಲೆಂಡ್ಸ್​ ಮೇಲುಗೈ ಸಾಧಿಸಿತು. ಆದರೆ, ಈ ಹಂತದಲ್ಲಿ ಒಂದಾದ ಮೊಹಮ್ಮದ್ ರಿಜ್ವಾನ್ ಮತ್ತು ಸೌದ್ ಶಕೀಲ್ 114 ಎಸೆತಗಳಲ್ಲಿ 120 ರನ್​ಗಳ​​ ಜೊತೆಯಾಟವಾಡಿ ಕುಸಿಯುವ ತಂಡಕ್ಕೆ ಆಸರೆಯಾದರು. ಇಬ್ಬರು ಅರ್ಧಶತಕ ಸಿಡಿಸಿ ಮಿಂಚಿದರು. ರಿಜ್ವಾನ್ 75 ಎಸೆತಗಳಲ್ಲಿ 8 ಬೌಂಡರಿ ಸಹಿತ 68 ರನ್, ಶಕೀಲ್​ 52 ಎಸೆತಗಳಲ್ಲಿ 9 ಬೌಂಡರಿ 1 ಸಿಕ್ಸರ್ ಸಹಿತ 68 ರನ್ ಕಲೆ ಹಾಕಿದರು.

7ನೇ ವಿಕೆಟ್​​ಗೆ ಶಾದಾಬ್ ಖಾನ್(32) ಮತ್ತು ಮೊಹಮ್ಮದ್ ನವಾಜ್(39) 70 ಎಸೆತಗಳಲ್ಲಿ 64 ರನ್​ಗಳ ಜೊತೆಯಾಟವಾಡಿ ತಂಡದ ಮೊತ್ತವನ್ನು 287 ರನ್‌ಗಳಿಗೆ ಕೊಂಡೊಯ್ದರು

ನೆದರ್ಲೆಂಡ್ಸ್​ ಪರ ಬಾಸ್​ ಡಿ ಲೀಡೆ 62/ 4 ವಿಕೆಟ್, ಕಾಲಿನ್ ಅಕರ್ಮನ್ 39/2, ಆರ್ಯನ್ ದತ್, ಲೋಗನ್ ವ್ಯಾನ್ ಬೀಕ್, ಪಾಲ್ ವ್ಯಾನ್ ಮೀಕೆರೆನ್ ತಲಾ 1 ವಿಕೆಟ್ ಪಡೆದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...