147 ವರ್ಷಗಳ ಟೆಸ್ಟ್​ ಇತಿಹಾಸದಲ್ಲೇ ದಾಖಲೆ ಸೋಲು ಕಂಡ ಪಾಕ್: 556 ರನ್ ​ಗಳಿಸಿಯೂ ಹೀನಾಯವಾಗಿ ಇಂಗ್ಲೆಂಡ್‌ ವಿರುದ್ಧ ಪರಾಭವ

Date:

ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ​ ಇನಿಂಗ್ಸ್ ಮತ್ತು 47 ರನ್‌ಗಳಿಂದ ಹೀನಾಯ ಸೋಲನುಭವಿಸಿದೆ. ಸೋಲಿನ ಜೊತೆ ಪಾಕ್‌ ತಂಡ ಕೆಟ್ಟ ದಾಖಲೆಯೊಂದನ್ನು ಬರೆದಿದೆ. 147 ವರ್ಷಗಳ ಟೆಸ್ಟ್​ ಕ್ರಿಕೆಟ್​ ಇತಿಹಾಸದಲ್ಲೆ 550ಕ್ಕೂ ಅಧಿಕ ರನ್​ಗಳಿಸಿ ಸೋಲು ಕಂಡ ಮೊದಲ ತಂಡ ಎಂಬ ಕೆಟ್ಟ ದಾಖಲೆಯನ್ನು ಪಾಕಿಸ್ತಾನ ನಿರ್ಮಿಸಿಕೊಂಡಿತು.

ತವರು ನೆಲದಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ 3 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಇನಿಂಗ್ಸ್​ ಸಮೇತ 47 ರನ್​ಗಳಿಂದ ಹೀನಾಯ ಸೋಲನುಭವಿಸಿದೆ. ಪಾಕಿಸ್ತಾನದ ಮುಲ್ತಾನ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದ್ದ ಪಾಕ್​ ಮೊದಲ ಇನ್ನಿಂಗ್ಸ್​ನಲ್ಲೆ 556/10 ರನ್​ಗಳನ್ನು ಪೇರಿಸಿತ್ತು. ಶಫೀಖ್​ (102), ಶಾನ್​ ಮಸೂದ್​ (151), ಅಘಾ ಸಲ್ಮಾನ್​ (104) ಅವರ ಶತಕದ ನೆರವಿನಿಂದ ಪಾಕ್​ಗೆ ಈ ಬೃಹತ್​ ರನ್‌ಗಳನ್ನು​ ಕಲೆ ಹಾಕಲು ಸಾಧ್ಯವಾಯಿತು.

ಇದಕ್ಕೆ ಉತ್ತರವಾಗಿ ಇಂಗ್ಲೆಂಡ್​ ಕೂಡ 7 ವಿಕೆಟ್​ ಕಳೆದುಕೊಂಡು 823 ರನ್​ಗಳ ದಾಖಲೆ ಮೊತ್ತವನ್ನು ಪೇರಿಸಿ ಡಿಕ್ಲೇರ್​ ಮಾಡಿಕೊಂಡಿತು. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್‌ ತಂಡ 267 ರನ್​ಗಳ ಮುನ್ನಡೆ ಗಳಿಸಿತು.ಎರಡನೇ ಇನಿಂಗ್ಸ್​ಗೆ ಬ್ಯಾಟಿಂಗ್​ಗೆ ಆಗಮಿಸಿದ ಪಾಕ್​ 220 ರನ್​ಗಳಿಗೆ ಸರ್ವಪತನ ಕಂಡು ಹೀನಾಯ ಸೋಲನುಭವಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ

ಇದರೊಂದಿಗೆ ತನ್ನ ಹೆಸರಿಗೆ ಕೆಟ್ಟ ದಾಖಲೆಯೊಂದನ್ನು ಸೇರಿಸಿಕೊಂಡಿದೆ. 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಮೊದಲ ಇನ್ನಿಂಗ್ಸ್‌ನಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ನಂತರವೂ ಇನ್ನಿಂಗ್ಸ್‌ನಿಂದ ಟೆಸ್ಟ್ ಪಂದ್ಯವನ್ನು ಸೋತಿರುವುದು ಇದೇ ಮೊದಲು.

ಹ್ಯಾರಿ ಬ್ರೂಕ್ ತ್ರಿಶತಕ

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್​​ ಪರ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್​ ಸ್ಫೋಟಕ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಜೋರೂಟ್​ 262 ರನ್ ಸಿಡಿಸಿ ದ್ವಿಶತಕ ಪೂರೈಸಿದರು. ಮತ್ತೊಂದೆಡೆ ಹ್ಯಾರಿ ಬ್ರೂಕ್ ಭರ್ಜರಿ 317 ರನ್‌ಗಳಿಸಿ ತ್ರಿಶತಕ ಸಿಡಿಸಿದರು. ಇದರೊಂದಿಗೆ ಇಂಗ್ಲೆಂಡ್ ಪರ ವೇಗದ ತ್ರಿಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎಂಬ ಶ್ರೇಯಕ್ಕೂ ಪಾತ್ರರಾದರು. ಅಲ್ಲದೇ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 454 ರನ್‌ಗಳ ದಾಖಲೆಯ ಜೊತೆಯಾಟವನ್ನು ಆಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆ ರೂಟ್​, ಬ್ರೂಕ್​ ಅವರದ್ದಾಯಿತು.

ಪಾಕ್‌ ವಿರುದ್ಧದ ಗೆಲುವಿನೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ. ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಇದೇ ಮೈದಾನದಲ್ಲಿ ಅಕ್ಟೋಬರ್ 15 ರಂದು ಪ್ರಾರಂಭವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...