ಬಾಂಗ್ಲಾದೇಶಕ್ಕೆ ಬೆಂಬಲ: ಟಿ20 ವಿಶ್ವಕಪ್ ಸಿದ್ಧತೆ ಸ್ಥಗಿತಗೊಳಿಸಿದ ಪಾಕಿಸ್ತಾನ

Date:

ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಭಾಗವಹಿಸುವಿಕೆ ಇನ್ನೂ ಅನಿಶ್ಚಿತವಾಗಿರುವ ನಡುವೆಯೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತನ್ನ ವಿಶ್ವಕಪ್ ಸಿದ್ಧತೆಯನ್ನು ಸ್ಥಗಿತಗೊಳಿಸಿದೆ. ಭಾರತ ಹಾಗೂ ಶ್ರೀಲಂಕಾದಲ್ಲಿ ಮುಂದಿನ ತಿಂಗಳು ಟೂರ್ನಿ ಆರಂಭವಾಗಲಿದ್ದು, ಬಾಂಗ್ಲಾದೇಶ ಆಡಬೇಕಿರುವ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರಿಸಬೇಕು ಎಂಬ ಅದರ ಆಗ್ರಹವನ್ನು ಬೆಂಬಲಿಸಿ ಪಾಕಿಸ್ತಾನ ಈ ಕ್ರಮ ಕೈಗೊಂಡಿದೆ.

ವಿಶ್ವಕಪ್ ಪಂದ್ಯಗಳಿಗಾಗಿ ಭಾರತ ಪ್ರವಾಸ ಕೈಗೊಳ್ಳುವುದಿಲ್ಲ ಎಂಬ ಬಾಂಗ್ಲಾದೇಶದ ನಿಲುವಿಗೆ ಬೆಂಬಲ ಸೂಚಿಸಿರುವ ಪಿಸಿಬಿ, ತನ್ನ ಸಿದ್ಧತೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ. ವಿವಾದಕ್ಕೆ ಶೀಘ್ರ ಇತ್ಯರ್ಥವಾಗದಿದ್ದಲ್ಲಿ, ಭಾರತದಲ್ಲಿ ನಡೆಯುವ ಪಂದ್ಯಗಳಲ್ಲಿ ಪಾಲ್ಗೊಳ್ಳುವ ಕುರಿತು ಪಾಕಿಸ್ತಾನ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕಾಗುತ್ತದೆ ಎಂದು ಪಿಸಿಬಿ ಸ್ಪಷ್ಟಪಡಿಸಿದೆ.

ಇದನ್ನು ಓದಿದ್ದೀರಾ? WPL| ಸತತ 5 ಜಯದೊಂದಿಗೆ ಪ್ಲೇಆಫ್ ಪ್ರವೇಶಿಸಿದ ಆರ್‌ಸಿಬಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಅಧಿಕಾರಿಗಳ ನಡುವೆ ನಡೆದ ಮಾತುಕತೆಗಳ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಭದ್ರತಾ ಕಾರಣಗಳನ್ನು ಮುಂದಿಟ್ಟು ಬಾಂಗ್ಲಾದೇಶದ ನಿಲುವನ್ನು ಪಾಕಿಸ್ತಾನ ಸಂಪೂರ್ಣವಾಗಿ ಬೆಂಬಲಿಸಿದೆ. ಈ ಮಾತುಕತೆಯಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಹಾಗೂ ಪಿಸಿಬಿ ಅಧ್ಯಕ್ಷರಾಗಿರುವ ಮೊಹ್ಸಿನ್ ನಕ್ವಿ ಕೂಡ ಭಾಗವಹಿಸಿದ್ದರು.

ಬಾಂಗ್ಲಾದೇಶಕ್ಕೆ ಸಂಬಂಧಿಸಿದ ವಿವಾದಕ್ಕೆ ಪರಿಹಾರ ಕಂಡುಬರದಿದ್ದರೆ, ಟೂರ್ನಿಯಲ್ಲಿ ಭಾಗವಹಿಸುವ ಬಗ್ಗೆ ಪಾಕಿಸ್ತಾನವೂ ತನ್ನ ನಿಲುವನ್ನು ಮರುಪರಿಶೀಲಿಸಲಿದೆ ಎಂದು ಜಿಯೊ ನ್ಯೂಸ್ ಉನ್ನತ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಸತ್ತತವಾಗಿ ನಡೆಯುತ್ತಿರುವ ಅನಿಶ್ಚಿತ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಬಿಸಿಸಿಐ ಸೂಚನೆಯಂತೆ 2026ರ ಇಂಡಿಯನ್ ಪ್ರಿಮಿಯರ್ ಲೀಗ್‌ನಿಂದ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಫಿಝುರ್ ರಹ್ಮಾನ್ ಹಿಂದೆ ಸರಿದ ನಂತರ ಈ ವಿವಾದ ಆರಂಭವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...