ಏಕದಿನ ವಿಶ್ವಕಪ್ | ಪಾಕಿಸ್ತಾನವನ್ನು ಕಾಪಾಡಿದ ಫಖರ್ ಝಮಾನ್: ಸೆಮಿಫೈನಲ್ ಆಸೆ ಜೀವಂತ

Date:

ಬಹಳ ಕುತೂಹಲ ಮೂಡಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವಿನ ವಿಶ್ವಕಪ್ ಪಂದ್ಯದಲ್ಲಿ, ಡಕ್ ವರ್ಥ್‌ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನವು 21 ರನ್‌ಗಳಿಂದ ಜಯಗಳಿಸಿದೆ.

ಗೆಲ್ಲಲು 402 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ್ದ ಪಾಕಿಸ್ತಾನಕ್ಕೆ ಆರಂಭಿಕ ಆಟಗಾರ ಶಫೀಕ್ ಅವರು 6 ರನ್ ಇರುವಾಗಲೇ ಔಟಾಗಿದ್ದರಿಂದ ಆರಂಭಿಕ ಆಘಾತಕ್ಕೊಳಗಾಗಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಫಖರ್ ಝಮಾನ್‌ಗೆ ಜೊತೆಯಾದ ನಾಯಕ ಬಾಬರ್ ಆಝಂ ತಾಳ್ಮೆಯ ಆಟವಾಡಿದರೆ, ಫಖರ್ ಝಮಾನ್‌ ನ್ಯೂಝಿಲ್ಯಾಂಡ್ ಬೌಲರ್‌ಗಳನ್ನು ಯದ್ವಾತದ್ವಾ ಚಚ್ಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು ಮಳೆ ಬಂದಾಗ, 21 ಓವರ್‌ಗಳಾಗಿತ್ತು. ಈ ವೇಳೆ ಪಾಕಿಸ್ತಾನ ಒಂದು ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತ್ತು. ಮಳೆ ಬಿಡುವು ನೀಡಿದಾಗ ಪಾಕಿಸ್ತಾನಕ್ಕೆ 41 ಓವರ್‌ಗಳಲ್ಲಿ 342 ರನ್‌ ಗಳಿಸಬೇಕಿತ್ತು.

ಈ ನಡುವೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಫಖರ್ ಝಮಾನ್ ಭರ್ಜರಿ ಎರಡು ಸಿಕ್ಸ್‌ಗಳ ಮೂಲಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದ 25.3 ಓವರ್‌ಗಳಲ್ಲಿ 200 ರನ್ ಗಳಿಸಿತು. ಮಳೆಯ ಕಾರಣ ಡಕ್ ವರ್ಥ್‌ ಲೂಯಿಸ್ ನಿಯಮ ಅನ್ವಯಿಸುವಾಗ ಪಾಕಿಸ್ತಾನ 21 ರನ್‌ಗಳ ಮುನ್ನಡೆ ಸಾಧಿಸಿತ್ತು.

ಮತ್ತೆ ಮಳೆ ಬಂದ ಹಿನ್ನೆಲೆಯಲ್ಲಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ 21 ರನ್‌ಗಳ ಜಯಗಳಿಸಿದೆ. ಈ ಗೆಲುವಿನ ಮೂಲಕ ಪಾಕಿಸ್ತಾನವು ಸೆಮಿಫೈನಲ್ ಆಸೆಯನ್ನು ಇನ್ನೂ ಜೀವಂತವಾಗಿರಿಸಿದೆ.

ಕೇವಲ 81 ಎಸೆತದಲ್ಲಿ ಔಟಾಗದೆ 8 ಬೌಂಡರಿ ಹಾಗೂ 11 ಸಿಕ್ಸ್‌ನ ನೆರವಿನಿಂದ 126 ರನ್ ಚಚ್ಚಿದ ಫಖರ್ ಝಮಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಬಾಬರ್ ಅಝಮ್ ಕೂಡ ಅತ್ತ್ಯುತ್ತಮ ಆಟವಾಡಿ 63 ಎಸೆತಕ್ಕೆ 66 ರನ್ ಹೊಡೆದರು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ್ದ ನ್ಯೂಝಿಲ್ಯಾಂಡ್‌ ಪಾಕಿಸ್ತಾನಕ್ಕೆ 402 ರನ್‌ಗಳ ಬೃಹತ್‌ ಗುರಿಯನ್ನು ನೀಡಿತ್ತು. ಇಷ್ಟು ದೊಡ್ಡ ಗುರಿ ನೀಡಿದರೂ, ಮಳೆ ಬಂದ ಹಿನ್ನೆಲೆಯಲ್ಲಿ ಡಕ್ ವರ್ಥ್‌ ಲೂಯಿಸ್ ನಿಯಮ ಅನ್ವಯಿಸಿದ್ದರಿಂದ ಸೋಲನುಭವಿಸಿದ್ದು, ನಿರಾಸೆಗೊಳಗಾದರು. ಈ ಸೋಲಿನ ಮೂಲಕ ನ್ಯೂಝಿಲ್ಯಾಂಡ್‌ ಕಳೆದ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿದಂತಾಗಿದೆ. ಆದರೂ ಸೆಮಿಫೈನಲ್‌ಗೇರುವ ಅವಕಾಶ ಇನ್ನೂ ಕಾಯ್ದುಕೊಂಡಿದೆ.

ಈವರೆಗಿನ ಅಂಕಪಟ್ಟಿಯಲ್ಲಿ ನ್ಯೂಝಿಲ್ಯಾಂಡ್‌ 4ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನವು 5ನೇ ನೇ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...