ಚಾಂಪಿಯನ್ಸ್ ಟ್ರೋಫಿ: ಭಾರತ – ಪಾಕ್‌ ಮುಖಾಮುಖಿಗೆ ಇದೆ ಮತ್ತೊಂದು ಅವಕಾಶ!

Date:

ಭಾರತದ ವಿರುದ್ಧದ ಪಂದ್ಯದಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಪಾಕಿಸ್ತಾನ ತಂಡ ಚಾಂಪಿಯನ್ಸ್ ಟ್ರೋಫಿ-2025ರ ಸೆಮಿಫೈನಲ್ ತಲುಪುವ ಆಸೆಗಳು ಕ್ಷೀಣಿಸುತ್ತಿವೆ. ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕದ ನೆರವಿನಿಂದ ಭಾರತ ತಂಡ ಎ ಗುಂಪಿನ ಪಂದ್ಯದಲ್ಲಿ ಆರು ವಿಕೆಟ್‌ಗಳ ಸುಲಭ ಜಯ ಸಾಧಿಸಿತು. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಪಾಕ್‌ಗೆ ಇದು ಸತತ ಎರಡನೇ ಸೋಲಾಗಿದೆ.

ಮೊಹ್ಮದ್ ರಿಜ್ವಾನ್ ಬಳಗಕ್ಕೆ ಸೆಮಿಫೈನಲ್ ಹಾದಿ ಕಠಿಣವಾದರೂ, ಪಾಕಿಸ್ತಾನ ತಂಡದ ಸೆಮಿಫೈನಲ್ ಬಾಗಿಲು ಇನ್ನೂ ಸಂಪೂರ್ಣ ಮುಚ್ಚಿಲ್ಲ. ಬಾಂಗ್ಲಾದೇಶದ ವಿರುದ್ಧ ಕೊನೆಯ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಜತೆಗೆ ತಂಡದ ಸೆಮಿಫೈನಲ್ ತಲುಪುವ ಅವಕಾಶ ನಾಕೌಟ್ ಹಂತದ ಇತರ ಫಲಿತಾಂಶಗಳನ್ನು ಆಧರಿಸಿದೆ.

ಒಂದು ವೇಳೆ ನ್ಯೂಜಿಲೆಂಡ್ ತಂಡ ಭಾರತ ಹಾಗೂ ಬಾಂಗ್ಲಾದೇಶ ಜತೆಗಿನ ಪಂದ್ಯಗಳನ್ನು ಸೋತಲ್ಲಿ, ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂರು ಪಂದ್ಯಗಳಿಂದ ತಲಾ ಎರಡು ಅಂಕಗಳನ್ನು ಕಲೆ ಹಾಕಿದಂತಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಅತ್ಯುತ್ತಮ ರನ್‌ರೇಟ್ ಹೊಂದಿ ಪಾಕಿಸ್ತಾನಕ್ಕೆ ಸೆಮಿಫೈನಲ್ ತಲುಪುವ ಅವಕಾಶ ಇರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾದಲ್ಲಿ ಪಾಕಿಸ್ತಾನ ತಂಡ ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು. ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

ಈ ಸುದ್ದಿ ಓದಿದ್ದೀರಾ? ವುಮೆನ್ಸ್ ಪ್ರೀಮಿಯರ್‌ ಲೀಗ್‌‌ | ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಹೊಸ ಇತಿಹಾಸ ಸೃಷ್ಟಿ

ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಬಹುದು. ಆದರೆ ಅದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶ ತಂಡದ ಗೆಲುವನ್ನು ಪಾಕಿಸ್ತಾನ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಜಿಲೆಂಡ್ ಗೆದ್ದರೆ, ಪಾಕಿಸ್ತಾನ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ ತಂಡ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಜಯ ಸಾಧಿಸಬೇಕು.

ಪಾಕಿಸ್ತಾನದ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ ಎರಡು ಪಂದ್ಯಗಳಿಂದ ನಾಲ್ಕು ಅಂಕ ಕಲೆಹಾಕಿ ಈಗಾಗಲೇ ಸೆಮಿಫೈನಲ್ ತಲುಪಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಗುರಿ ಮುಟ್ಟಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...