ಚಾಂಪಿಯನ್ಸ್ ಟ್ರೋಫಿಗೆ ತಂಡ ಕಳುಹಿಸಲು ಭಾರತ ನಕಾರ; ಸ್ಪಷ್ಟನೆ ಕೇಳಲು ಪಾಕಿಸ್ತಾನ ನಿರ್ಧಾರ

Date:

ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನಕ್ಕೆ ಭಾರತದ ತಂಡ ಕಳುಹಿಸಲು ಬಿಸಿಸಿಐ ನಿರಾಕರಿಸಿದೆ. ಇದಾದ ಬೆನ್ನಲ್ಲೇ ಈ ಬಗ್ಗೆ ಐಸಿಸಿಯಿಂದ ಸ್ಪಷ್ಟತೆಯನ್ನು ಕೇಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ನಿರ್ಧರಿಸಿದೆ ವರದಿ ವರದಿಯಾಗಿದೆ.

ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸದಿರುವ ಬಗ್ಗೆ ಬಿಸಿಸಿಐ ಐಸಿಸಿಗೆ ತಿಳಿಸಿದೆ. ಅದಾದ ಬಳಿಕ ಐಸಿಸಿ ಈ ಬಗ್ಗೆ ಪಿಸಿಬಿಗೆ ಮಾಹಿತಿ ನೀಡಿದೆ.

ಇನ್ನು “ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ನಡೆಸುವ ಬಗ್ಗೆ ಸದ್ಯಕ್ಕೆ ಯಾವುದೇ ಮಾತುಕತೆ ಇಲ್ಲ” ಎಂದು ಪಿಸಿಬಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟಿ20 ಕ್ರಿಕೆಟ್ ಸರಣಿ | ಹೊಸ ಆಟಗಾರರಿಗೊಂದು ಉತ್ತಮ ಅವಕಾಶ

ಕಳೆದ ವರ್ಷ ಏಷ್ಯಾಕಪ್‌ನಲ್ಲಿ ಹೈಬ್ರಿಡ್ ಮಾದರಿಯನ್ನು ಅನುಸರಿಸಲಾಗಿದೆ. ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದೆ. ಇತರ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದಿದೆ. ಆದರೆ ಈ ಬಾರಿ ಹೈಬ್ರಿಡ್ ಮಾದರಿಯನ್ನು ನಡೆಸುವ ಬಗ್ಗೆ ಪಿಸಿಬಿ ಮಾತುಕತೆ ನಡೆಸಿಲ್ಲ. ಈ ಹಿನ್ನೆಲೆ ಚಾಂಪಿಯನ್ಸ್ ಟ್ರೋಫಿಗೆ ತಂಡ ಕಳುಹಿಸಲು ಭಾರತ ನಿರಾಕಿಸಿದೆ.

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತದ ಪಂದ್ಯಗಳಿಗೆ ದುಬೈ ಆತಿಥ್ಯ ವಹಿಸಬಹುದು ಎಂದು ಊಹಿಸಲಾಗಿದೆ. “ಐಸಿಸಿಗೆ ಅದರ ಕಾನೂನು ವಿಭಾಗದ ಸಲಹೆಯೊಂದಿಗೆ ಇಮೇಲ್ ಕಳುಹಿಸಲಾಗುವುದು. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಭಾರತದ ನಿರ್ಧಾರದ ಬಗ್ಗೆ ಐಸಿಸಿಯಿಂದ ಸ್ಪಷ್ಟೀಕರಣಗಳನ್ನು ಬಯಸಿದೆ” ಎಂದು ವರದಿಯಾಗಿದೆ.

2008ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಎರಡೂ ತಂಡಗಳು ಐಸಿಸಿ ಪಂದ್ಯಾವಳಿಗಳಲ್ಲಿ ಮಾತ್ರ ಪರಸ್ಪರ ಸ್ಪರ್ಧಿಸುತ್ತವೆ. ಆದರೆ ಬೇರೆ ದೇಶದಲ್ಲಿ ಈ ಸ್ಪರ್ಧೆಯನ್ನು ನಡೆಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...