ಟಿ20 ವಿಶ್ವಕಪ್: ಸೋಲಿನ ಸುಳಿಯಿಂದ ಪಾರಾದ ಪಾಕಿಸ್ತಾನ; ನೆದರ್ಲೆಂಡ್ಸ್ ವಿರುದ್ಧ ರೋಚಕ ಜಯ

Date:

ಕೊಲೊಂಬೊದಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನೆದರ್ಲೆಂಡ್ಸ್ ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಸೋಲಿನ ಸುಳಿಯಲ್ಲಿದ್ದ ಪಾಕಿಸ್ತಾನಕ್ಕೆ ಕೊನೆಯ ಕ್ಷಣದಲ್ಲಿ ಫಹೀಮ್ ಅಶ್ರಫ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಾಯಿತು.

ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ, ನೆದರ್ಲೆಂಡ್ಸ್ ತಂಡವನ್ನು 147 ರನ್‌ಗಳಿಗೆ ನಿಯಂತ್ರಿಸಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡವು 19.3 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿ ವಿಜಯದ ನಗೆ ಬೀರಿತು.

ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ ತಂಡಕ್ಕೆ ಆರಂಭಿಕ ಆಟಗಾರ ಮೈಕೆಲ್ ಲೆವಿಟ್ (24) ಮತ್ತು ನಾಯಕ ಸ್ಕಾಟ್ ಎಡ್ವರ್ಡ್ಸ್ (37) ಉತ್ತಮ ಅಡಿಪಾಯ ಹಾಕಿಕೊಟ್ಟರು. ಬಾಸ್ ಡಿ ಲೀಡೆ (30) ಕೂಡ ಉತ್ತಮ ಜೊತೆ ನೀಡಿದರು. ಒಂದು ಹಂತದಲ್ಲಿ ದೊಡ್ಡ ಮೊತ್ತದತ್ತ ಸಾಗುತ್ತಿದ್ದ ನೆದರ್ಲೆಂಡ್ಸ್, ಪಾಕಿಸ್ತಾನದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿ ಅಂತಿಮವಾಗಿ 19.5 ಓವರ್‌ಗಳಲ್ಲಿ 147 ರನ್‌ಗಳಿಗೆ ಆಲೌಟ್ ಆಯಿತು. ಪಾಕ್ ಪರ ಸಲ್ಮಾನ್ ಮಿರ್ಜಾ 3 ವಿಕೆಟ್ ಪಡೆದರೆ, ಅಬ್ರಾರ್ ಅಹ್ಮದ್ ಮತ್ತು ಸೈಮ್ ಆಯೂಬ್ ತಲಾ 2 ವಿಕೆಟ್ ಕಿತ್ತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? U19 ವಿಶ್ವಕಪ್ ಫೈನಲ್ | ಇಂಗ್ಲೆಂಡ್ ವಿರುದ್ಧ ‘ಸೂರ್ಯ’ನ ಸಿಡಿಲಬ್ಬರದ ಶತಕ; ಸಿಕ್ಸರ್, ಬೌಂಡರಿಗಳ ಸುರಿಮಳೆ

ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನಕ್ಕೆ ಸಾಹಿಬ್ಜಾದ ಫರ್ಹಾನ್ (47) ಉತ್ತಮ ಆರಂಭ ನೀಡಿದರೂ, ಮಧ್ಯಮ ಕ್ರಮಾಂಕದ ವೈಫಲ್ಯದಿಂದಾಗಿ ತಂಡ ಸಂಕಷ್ಟಕ್ಕೆ ಸಿಲುಕಿತು. ಬಾಬರ್ ಅಜಂ (15) ಮತ್ತೊಮ್ಮೆ ನಿರಾಸೆ ಮೂಡಿಸಿದರು.

ಪಂದ್ಯದ ಅಂತಿಮ 12 ಎಸೆತಗಳಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 29 ರನ್‌ಗಳ ಅವಶ್ಯಕತೆಯಿತ್ತು. ಈ ವೇಳೆ ಕ್ರೀಸ್‌ಗೆ ಬಂದ ಫಹೀಮ್ ಅಶ್ರಫ್, ಲೋಗನ್ ವ್ಯಾನ್ ಬೀಕ್ ಎಸೆದ 19ನೇ ಓವರ್‌ನಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಸುರಿಮಳೆಗೈದು ಒಂದೇ ಓವರ್‌ನಲ್ಲಿ 24 ರನ್ ದೋಚಿದರು. ಇದರಿಂದ ಪಂದ್ಯದ ಚಿತ್ರಣವೇ ಬದಲಾಯಿತು. ಅಂತಿಮವಾಗಿ ಪಾಕಿಸ್ತಾನ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ಸಂಕ್ಷಿಪ್ತ ಸ್ಕೋರ್:
ನೆದರ್ಲೆಂಡ್ಸ್: 147/10 (19.5 ಓವರ್) (ಸ್ಕಾಟ್ ಎಡ್ವರ್ಡ್ಸ್ 37, ಬಾಸ್ ಡಿ ಲೀಡೆ 30; ಸಲ್ಮಾನ್ ಮಿರ್ಜಾ 3-24).
ಪಾಕಿಸ್ತಾನ: 148/7 (19.3 ಓವರ್) (ಸಾಹಿಬ್ಜಾದ ಫರ್ಹಾನ್ 47, ಫಹೀಮ್ ಅಶ್ರಫ್ ಔಟಾಗದೆ 24; ಸಲ್ಮಾನ್ ಮಿರ್ಜಾ 3 ವಿಕೆಟ್).
ಫಲಿತಾಂಶ: ಪಾಕಿಸ್ತಾನಕ್ಕೆ 3 ವಿಕೆಟ್‌ಗಳ ಜಯ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...