ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಪಾಕ್‌ಗೆ ಜಯ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಟೂರ್ನಿಯ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆದ ರೋಚಕ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಗೆಲುವು ಸಾಧಿಸಿತು.

ರನ್‌ಗಳ ಸುರಿಮಳೆಯೆ ಹರಿದಿದ್ದ ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶ್ರೀಲಂಕಾ ನೀಡಿದ 345 ರನ್‌ಗಳ ಬೃಹತ್ ಸವಾಲನ್ನು ಬೆನ್ನಟ್ಟಿದ ಪಾಕಿಸ್ತಾನ ಅಬ್ದುಲ್ಲಾ ಶಫೀಕ್ (113) ಹಾಗೂ ಮೊಹಮ್ಮದ್ ರಿಜ್ವಾನ್(131) ಆಕರ್ಷಕ ಶತಕಗಳ ನೆರವಿನಿಂದ 48.2 ಓವರ್‌ಗಳಲ್ಲಿ 4 ವಿಕೆಟ್ ನಷ್ಟದೊಂದಿಗೆ ಜಯಗಳಿಸಿತು.

ಸ್ಫೋಟಕ ಆಟಗಾರರಾದ ಇಮಾಮ್-ಉಲ್-ಹಕ್ ಹಾಗೂ ಬಾಬರ್ ಆಜಂ ಔಟಾದ ನಂತರ ಬ್ಯಾಟ್ ಬೀಸ ತೊಡಗಿದ  ಅಬ್ದುಲ್ಲಾ ಶಫೀಕ್ ಹಾಗೂ ಮೊಹಮ್ಮದ್ ರಿಜ್ವಾನ್ 3ನೇ ವಿಕೆಟ್ ಜೊತೆಯಾಟಕ್ಕೆ 176 ರನ್‌ಗಳ ಜೊತೆಯಾಟವಾಡಿದರು. 33.1 ಓವರ್‌ನಲ್ಲಿ ಮಧುಶಂಕ ಬೌಲಿಂಗ್‌ನಲ್ಲಿ ಅಬ್ದುಲ್ಲಾ ಶಫೀಕ್ ಪೆವಿಲಿಯನ್‌ಗೆ ತೆರಳಿದ ನಂತರ ಐದನೇ ಕ್ರಮಾಂಕದ ಆಟಗಾರ ಸೌದ್ ಶಕೀಲ್(31) ಹಾಗೂ ಇಫ್ತಿಕರ್ ಅಹಮದ್ (22 ಅಜೇಯ)  ಅವರ ಜೊತೆಗೂಡಿದ ಮೊಹಮ್ಮದ್ ರಿಜ್ವಾನ್ ತಮ್ಮ ಅಜೇಯ ಆಟದೊಂದಿಗೆ ಪಾಕಿಸ್ತಾನ ತಂಡವನ್ನು ಗೆಲುವಿನ ದಡಕ್ಕೆ ಮುಟ್ಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬ್ದುಲ್ಲಾ ಶಫೀಕ್  103 ಚೆಂಡುಗಳಲ್ಲಿ 10 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 113 ರನ್‌ ಸಿಡಿಸಿದರೆ, ಮೊಹಮ್ಮದ್ ರಿಜ್ವಾನ್ 121 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್‌ಗಳೊಂದಿಗೆ ಅಜೇಯ 131 ರನ್‌ ಬಾರಿಸಿದರು.

ಒಂದೇ ಪಂದ್ಯದಲ್ಲಿ  ತಲಾ ತಂಡದಿಂದ ಎರಡೆರಡು ಶತಕದಂತೆ ನಾಲ್ಕು ಶತಕ ಮೂಡಿ ಬಂದಿದ್ದು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ದಾಖಲೆಯಾಗಿದೆ

ಈ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಕುಶಾಲ್ ಮೆಂಡಿಸ್ ಹಾಗೂ ಸದೀರ ಸಮರವಿಕ್ರಮ ಅವರ ಭರ್ಜರಿ ಶತಕಗಳ ನೆರವಿನಿಂದ  50 ಓವರ್‌ಗಳ 9 ವಿಕೆಟ್ ನಷ್ಟಕ್ಕೆ 344 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು.

ಹಸನ್‌ ಅಲಿ ಎರಡನೇ ಓವರ್‌ನಲ್ಲಿಯೇ ಕುಶಾಲ್‌ ಪೆರೇರಾ ಔಟಾದ ನಂತರ ಪಾತುಂ ನಿಸ್ಸಾಂಕ ಅವರೊಂದಿಗೆ ಜೊತೆಯಾಟವಾಡಿದ ಸ್ಪೋಟಕ ಆಟಗಾರ ಕುಸಾಲ್ ಮೆಂಡಿಸ್ ಸಿಕ್ಸರ್, ಬೌಂಡರಿಗಳ ಸುರಿಮಳೆ ಬಾರಿಸಿದರು.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಬಾಂಗ್ಲಾ ವಿರುದ್ಧ ಇಂಗ್ಲೆಂಡ್‌ಗೆ ಭಾರೀ ಗೆಲುವು

ಪಾಕ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ಕುಸಾಲ್ 77 ಎಸೆತಗಳಲ್ಲಿ 14 ಆಕರ್ಷಕ ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿ 122 ರನ್‌ ಬಾರಿಸಿ 28.5 ಓವರ್‌ನಲ್ಲಿ ಹಸನ್‌ ಅಲಿ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದರು.

ಪಾತುಂ ನಿಸ್ಸಾಂಕ ಕೂಡ 61 ಚೆಂಡುಗಳಲ್ಲಿ ಅರ್ಧ ಶತಕ ಬಾರಿಸಿದರು. ಇವರ ಆಟದಲ್ಲಿ 7 ಬೌಂಡರಿ ಇ ಸಿಕ್ಸರ್‌ ಒಳಗೊಂಡಿತ್ತು.

ಇವರಿಬ್ಬರು ಔಟಾದ ನಂತರ ಕೊನೆಯ ಕ್ರಮಾಂಕದ ಉಳಿದ ಆಟಗಾರರೊಂದಿಗೆ ಆಟವಾಡಿದ ಸದೀರ ಸಮರವಿಕ್ರಮ 89 ಚೆಂಡುಗಳಲ್ಲಿ 11 ಬೌಂಡರಿ ಎರಡು ಸಿಕ್ಸರ್‌ನೊಂದಿಗೆ 108 ರನ್‌ ಸ್ಫೋಟಿಸಿ ತಂಡ 340 ಗಡಿ ದಾಟಲು ಕಾರಣರಾದರು.

ಬಾಂಗ್ಲಾ ಪರ ಹಸನ್‌ ಅಲಿ 71/4, ಹಾರಿಸ್ ರೌಫ್ 64/2 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ಗಳೆನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...