ಪ್ಯಾರಿಸ್ ಒಲಿಂಪಿಕ್ಸ್ 2024: ಮತ್ತೊಂದು ಪದಕ ಗೆಲುವಿನತ್ತ ಮನು ಭಾಕರ್‌ !

Date:

ಪ್ಯಾರಿಸ್ ಒಲಿಂಪಿಕ್ಸ್‌ 2024ರಲ್ಲಿ 10 ಮೀಟರ್‌ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಮನು ಭಾಕರ್‌ ಮತ್ತೊಂದು ಪದಕದ ನಿರೀಕ್ಷೆಯಲ್ಲಿದ್ದಾರೆ. ಇಂದು ನಡೆದ 10 ಮೀಟರ್‌ ಏರ್‌ ಪಿಸ್ತೂಲ್‌ ವಿಭಾಗದ ಮಿಶ್ರ ವಿಭಾಗದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್ ಹಾಗೂ ಸರ್ಬಜೋತ್‌ ಸಿಂಗ್‌ ಜೋಡಿ ಕಂಚಿನ ಪದಕಕ್ಕೆ ಅರ್ಹತೆ ಪಡೆದಿದ್ದಾರೆ.

ಇದೇ ವಿಭಾಗದಲ್ಲಿ ಮತ್ತೊಂದು ಜೋಡಿ ಸಗ್ವಾನ್ ಮತ್ತು ಅರ್ಜುನ್ ಸಿಂಗ್‌ ಚೀಮಾ ಅವರು 10ನೇ ಸ್ಥಾನ ಪಡೆದರು. ವೈಯಕ್ತಿಕ ವಿಭಾಗದಲ್ಲಿ ಮತ್ತೊಬ್ಬ ಶೂಟರ್‌ ಆದ ರಮಿತಾ ಜಿಂದಾಲ್ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ಅರ್ಹತಾ ವಿಭಾಗದಲ್ಲಿ ಮನು ಭಾಕರ್ ಹಾಗೂ ಸರ್ಬಜೋತ್‌ ಸಿಂಗ್‌ ಜೋಡಿ 193,195 ಹಾಗೂ 192 ಅಂಕಗಳಿಸಿ ಜುಲೈ 30 ರಂದು ನಡೆಯುವ ಕಂಚಿನ ಪದಕದ ಪಂದ್ಯದಲ್ಲಿ ದಕ್ಷಿಣ ಕೊರಿಯಾದ ಜಿನ್‌ ಯೆ ಹೊ ಹಾಗೂ ವೊನ್ನೊ ಲೀ ವಿರುದ್ಧ ಸ್ಪರ್ಧಿಸಲಿದ್ದಾರೆ. ಟರ್ಕಿ ಹಾಗೂ ಸರ್ಬಿಯಾದ ಸ್ಪರ್ಧಿಗಳು ಚಿನ್ನ ಹಾಗೂ ಬೆಳ್ಳಿ ಪದಕದ ಪಂದ್ಯಕ್ಕೆ ಪೈಪೋಟಿ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024 | ವಿಶ್ವ ಕ್ರೀಡಾ ಹಬ್ಬಕ್ಕೆ ಕ್ಷಣಗಣನೆ ಆರಂಭ; ದಾಖಲೆ ಬರೆಯುವರೆ ಭಾರತದ ಕ್ರೀಡಾಪಟುಗಳು?

ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಹಾಗೂ ತನಿಸಾ ಕ್ರಸ್ಟೋ ಎರಡನೇ ಪಂದ್ಯದಲ್ಲಿಯೂ ಸೋಲು ಅನುಭವಿಸಿದರು.

10 ಮೀಟರ್ ಏರ್‌ ರೈಫಲ್‌ ವಿಭಾಗದಲ್ಲಿ ಪೃಥ್ವಿರಾಜ್‌ ತೊಂಡೈಮನ್‌ ಅರ್ಹತಾ ಸುತ್ತಿನಲ್ಲಿಯೇ 28ನೇ ಸ್ಥಾನಗಳಿಸಿ ಸ್ಪರ್ಧೆಯಿಂದ ನಿರ್ಗಮಿಸಿದರು.

ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಎರಡನೇ ದಿನದಾಟದ ಮಹಿಳೆಯರ 10 ಮೀಟರ್‌ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಭಾರತದ ಮನು ಭಾಕರ್‌ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದರು. 22 ವರ್ಷ ವಯಸ್ಸಿನ ಭಾಕರ್‌ ಫೈನಲ್‌ನಲ್ಲಿ 221.7 ಅಂಕಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದರು. ದಕ್ಷಿಣ ಕೊರಿಯಾದ ಒಯೇ ಜಿನ್‌ ಹಾಗೂ ಕಿಮ್‌ ಯೆಜಿ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಜಯಿಸಿದರು.

ಒಲಿಂಪಿಕ್ಸ್‌ನ ಶೂಟಿಂಗ್‌ ವಿಭಾಗದಲ್ಲಿ 10 ವರ್ಷದ ನಂತರ ಭಾರತಕ್ಕೆ ಪದಕ ಒಲಿದಿದೆ. ಇದಕ್ಕೂ ಮೊದಲು ರಾಜ್ಯವರ್ಧನ್‌ ಸಿಂಗ್‌ ರಾಥೋರ್(ಬೆಳ್ಳಿ , 2004ರ ಅಥೆನ್ಸ್  ಒಲಿಂಪಿಕ್ಸ್), ಅಭಿನವ್‌ ಬಿಂದ್ರ(ಚಿನ್ನ, 2008ರ ಬೀಜಿಂಗ್‌ ಒಲಿಂಪಿಕ್ಸ್),  ವಿಜಯ್‌ ಕುಮಾರ್‌(ಬೆಳ್ಳಿ, 2012ರ ಲಂಡನ್‌ ಒಲಿಂಪಿಕ್ಸ್ ) ಹಾಗೂ ಗಗನ್‌ ನರಾಂಗ್‌(ಕಂಚು, 2012ರ ಲಂಡನ್‌ ಒಲಿಂಪಿಕ್ಸ್) ಪದಕ ಗೆದ್ದಿದ್ದರು.

ಮಹಿಳೆಯರ ಶೂಟಿಂಗ್‌ ವಿಭಾಗದಲ್ಲಿ ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತಕ್ಕೆ ಇದೇ ಮೊದಲ ಬಾರಿಗೆ ಪದಕ ಲಭಿಸಿದೆ. ಹರಿಯಾಣದ ಜಜ್ಜಾರ್‌ನವರಾದ ಮನು ಭಾಕರ್ ವಿಶ್ವಕಪ್‌ನಲ್ಲಿ 9 ಚಿನ್ನ, 2 ಬೆಳ್ಳಿ, ಯುವ ಒಲಿಂಪಿಕ್ಸ್‌ನಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಒಂದು ಚಿನ್ನವನ್ನು ಮುಡಿಗೇರಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...