ಒಲಿಂಪಿಕ್ಸ್ | ಪುರುಷರ ಜಾವೆಲಿನ್ ಥ್ರೋ: ಪಾಕ್‌‌ನ ನದೀಮ್‌ಗೆ ಚಿನ್ನ, ಭಾರತದ ನೀರಜ್‌ಗೆ ಬೆಳ್ಳಿ

Date:

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ನೀರಜ್ ಚೋಪ್ರಾರ ಮೂಲಕ ಬೆಳ್ಳಿ ಪದಕ ಲಭಿಸಿದೆ.

ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ 92.97 ಮೀಟರ್ ದೂರ ಎಸೆಯುವ ಮೂಲಕ ಚಿನ್ನಕ್ಕೆ ಕೊರಳೊಡ್ಡಿದರೆ, ಭಾರತದ ಸ್ಟಾರ್ ಅಥ್ಲೀಟ್ ಆಗಿರುವ ನೀರಜ್‌ ಚೋಪ್ರಾ 89.45 ದೂರ ಎಸೆಯುವ ಮೂಲಕ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. 88.54 ಎಸೆದಿದ್ದ ಗ್ರೆನೇಡಾ ದೇಶದ ಅಥ್ಲೀಟ್ ಎ ಪೀಟರ್ಸ್ ಮೂರನೇ ಸ್ಥಾನ ಪಡೆದುಕೊಂಡರು.

ಪಾಕಿಸ್ತಾನದ ಅರ್ಷದ್ ನದೀಮ್ ಎಸೆದ 92.97 ಮೀಟರ್ ದೂರದ ಜಾವೆಲಿನ್ ಥ್ರೋ ಒಲಿಂಪಿಕ್ಸ್‌ನಲ್ಲಿ ಹೊಸ ದಾಖಲೆಯಾಗಿದೆ. ಟ್ರ್ಯಾಕ್ & ಫೀಲ್ಡ್ ನಲ್ಲಿ ಪಾಕಿಸ್ತಾನದ ಪರ ಚೊಚ್ಚಲ ಚಿನ್ನ ಗೆದ್ದ ಸಾಧನೆಗೆ ನದೀಮ್ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದರು. ಪ್ಯಾರಿಸ್‌ನಲ್ಲಿ ಕೂಡ ಬೆಳ್ಳಿ ಪದಕ ಗಳಿಸುವ ಮೂಲಕ ನಿರಂತರವಾಗಿ ಎರಡು ಒಲಿಂಪಿಕ್ಸ್‌ನಲ್ಲಿ ಪದಕಕ್ಕೆ ಮುತ್ತಿಡುವ ಮೂಲಕ ವಿಶೇಷ ಸಾಧನೆಗೆ ಪಾತ್ರರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...