ಪ್ಯಾರಾಲಿಂಪಿಕ್ಸ್ | ಹೈಜಂಪ್; ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟ ನಿಶಾದ್ ಕುಮಾರ್

Date:

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸೆಪ್ಟೆಂಬರ್ 2ರಂದು ನಡೆದ ಪುರುಷರ ಹೈಜಂಪ್ – T47 ವಿಭಾಗದ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದಿದ್ದಾರೆ.

ನಿಶಾದ್ ಕುಮಾರ್ 2.04 ಮೀಟರ್‌ ಜಿಗಿತದೊಂದಿಗೆ ಎರಡನೇ ಸ್ಥಾನ ಪಡೆದಿದ್ದು, ಇದು ಈ ಸೀಸನ್‌ನಲ್ಲೇ ನಿಶಾದ್ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ನಿಶಾದ್ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿಯೂ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದರು.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ಅಥ್ಲೀಟ್ ರೋಡ್ರಿಕ್ ಟೌನ್ಸೆಂಡ್-ರಾಬರ್ಟ್ಸ್ 2.08 ಮೀ ಜಿಗತದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಚಿನ್ನ ಗೆದ್ದಿದ್ದಾರೆ. ರಷ್ಯಾದ ಜಾರ್ಜಿ ಮಾರ್ಗೀವ್ ಕಂಚಿನ ಪದಕ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಅಥ್ಲೀಟ್

ಸೆಪ್ಟೆಂಬರ್ 1 ರಂದು (ಭಾನುವಾರ), ಭಾರತದ ಪ್ಯಾರಾಸ್ಪ್ರಿಂಟರ್ ಪ್ರೀತಿ ಪಾಲ್ 200 ಮೀಟರ್ ಟಿ -35 ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದರು. 30.01 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಅಥ್ಲೀಟ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಭಾರತಕ್ಕೆ ನಾಲ್ಕನೇ ಪದಕ; ಬೆಳ್ಳಿಗೆ ಗುರಿಯಿಟ್ಟ ಶೂಟರ್ ಮನೀಶ್ ನರ್ವಾಲ್‌

2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಒಟ್ಟು ಏಳು ಪದಕಗಳನ್ನು ಪಡೆದುಕೊಂಡಿದೆ. ಒಂದು ಚಿನ್ನ, ಎರಡು ಬೆಳ್ಳಿ ಮತ್ತು ಮೂರು ಕಂಚು ಭಾರತದ ಪಾಲಾಗಿದೆ.

ಪ್ರೀತಿ ಪಾಲ್ ಎರಡು ಪದಕಗಳನ್ನು ಗೆದ್ದರೆ, ಆಗಸ್ಟ್ 31ರಂದು, ರುಬಿನಾ ಫ್ರಾನ್ಸಿಸ್ ಪಿ2 ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್‌-1 ಫೈನಲ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು.

ಆಗಸ್ಟ್ 30 ರಂದು (ಶುಕ್ರವಾರ), ಹಾಲಿ ಪ್ಯಾರಾಲಿಂಪಿಕ್ ಚಾಂಪಿಯನ್ ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ ಚಿನ್ನ ಗೆದ್ದರು. ಇದೇ ಸ್ಪರ್ಧೆಯಲ್ಲಿ ಶೂಟರ್ ಮೋನಾ ಅಗರ್ವಾಲ್ ಕಂಚಿನ ಪದಕವನ್ನು ಪಡೆದರು.

ಆಗಸ್ಟ್ 30 ರಂದು ನಡೆದ ಪುರುಷರ ಪಿ1 10 ಮೀ ಏರ್ ಪಿಸ್ತೂಲ್ ಎಸ್‌ಎಚ್ 1 ಸ್ಪರ್ಧೆಯಲ್ಲಿ ಮನೀಷ್ ನರ್ವಾಲ್ ಎರಡನೇ ಸ್ಥಾನ ಪಡೆದು ಭಾರತಕ್ಕೆ ಮೊದಲ ಬೆಳ್ಳಿ ಪದಕ ತಂದುಕೊಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...