ಅಫ್ಘಾನ್ ವಿರುದ್ಧ ಏಕದಿನ ಪಂದ್ಯ | ಶ್ರೀಲಂಕಾ ಪರ ಮೊದಲ ದ್ವಿಶತಕ ದಾಖಲಿಸಿದ ಪಾತುಮ್ ನಿಸ್ಸಾಂಕ

Date:

ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲೇ ಲಂಕಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪಾತುಮ್ ನಿಸ್ಸಾಂಕ ದ್ವಿಶತಕ ಬಾರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಬ್ಯಾಟ್ಸ್‌ಮನ್ ಪಾತುಮ್ ನಿಸ್ಸಾಂಕ ಅಜೇಯ 210 ರನ್‌ಗಳ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದು ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿದ್ದಾರೆ. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಶ್ರೀಲಂಕಾ ಪರ ಮೊದಲ ದ್ವಿಶತಕ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 50 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು ಬರೋಬ್ಬರಿ 381 ರನ್ ಕಲೆಹಾಕಿದೆ. ತಂಡದ ಪರ ಕೇವಲ 139 ಎಸೆತಗಳನ್ನು ಎದುರಿಸಿದ ನಿಸ್ಸಾಂಕ 20 ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಿತ ಅಜೇಯ ದ್ವಿಶತಕದ ಇನ್ನಿಂಗ್ಸ್ ಆಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯಸೂರ್ಯ ದಾಖಲೆ ಪತನ
ಇಂದಿನ ಪಂದ್ಯದಲ್ಲಿ ಅಜೇಯ 210 ರನ್​ಗಳ ಇನ್ನಿಂಗ್ಸ್ ಆಡಿದ ನಿಸ್ಸಾಂಕ, ಈ ದ್ವಿಶತಕದ ಇನ್ನಿಂಗ್ಸ್ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲಿ ಲಂಕಾ ತಂಡದ ಮಾಜಿ ಆಟಗಾರ ಸನತ್ ಜಯಸೂರ್ಯ ಅವರ 24 ವರ್ಷಗಳ ಹಳೆಯ ದಾಖಲೆಯೂ ಸೇರಿದೆ.

ನಿಸ್ಸಾಂಕಗೂ ಮೊದಲು ಸನತ್ ಜಯಸೂರ್ಯ ಸಿಡಿಸಿದ್ದ 189 ರನ್‌ಗಳು ಏಕದಿನದಲ್ಲಿ ಶ್ರೀಲಂಕಾದ ಯಾವುದೇ ಬ್ಯಾಟ್ಸ್‌ಮನ್‌ ಕಲೆಹಾಕಿದ್ದ ಅತ್ಯುತ್ತಮ ಸ್ಕೋರ್ ಆಗಿತ್ತು. ಇದೀಗ ಆ ದಾಖಲೆಯನ್ನು ನಿಸ್ಸಾಂಕ ಮುರಿದಿದ್ದಾರೆ.

2000ರಲ್ಲಿ ನಡೆದ ಭಾರತದ ವಿರುದ್ಧದ ಏಕದಿನ ಪಂದ್ಯದಲ್ಲಿ ಲಂಕಾ ತಂಡದ ಮಾಜಿ ಆಟಗಾರ ಜಯಸೂರ್ಯ 189 ರನ್‌ಗಳ ಇನಿಂಗ್ಸ್‌ ಆಡಿದ್ದರು. 24 ವರ್ಷಗಳ ನಂತರ ಅಫ್ಘಾನಿಸ್ತಾನ ವಿರುದ್ಧ 210 ರನ್ ಬಾರಿಸುವ ಮೂಲಕ ನಿಸ್ಸಾಂಕ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. ನಿಸ್ಸಾಂಕ ದಾಖಲೆಗೆ ಮೈದಾನದಲ್ಲಿ ಸನತ್ ಜಯಸೂರ್ಯ ಕೂಡ ಸಾಕ್ಷಿಯಾದರು.

ಏಕದಿನದಲ್ಲಿ ದ್ವಿಶತಕ ಸಿಡಿಸಿದ 10ನೇ ಬ್ಯಾಟ್ಸ್‌ಮನ್ ನಿಸ್ಸಾಂಕ
ಪಾತುಮ್ ನಿಸ್ಸಾಂಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ 10ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಭಾರತದ ರೋಹಿತ್ ಶರ್ಮಾ, ಇಶಾನ್ ಕಿಶನ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ಶುಭ್​ಮನ್ ಗಿಲ್ ಈ ಸಾಧನೆ ಮಾಡಿದ್ದರು. ಇವರಲ್ಲದೇ ಕ್ರಿಸ್ ಗೇಲ್, ಮಾರ್ಟಿನ್ ಗಪ್ಟಿಲ್, ಗ್ಲೆನ್ ಮ್ಯಾಕ್ಸ್​ವೆಲ್, ಫಖರ್ ಜಮಾನ್ ಕೂಡ ಏಕದಿನದಲ್ಲಿ ದ್ವಿಶತಕ ಸಿಡಿಸಿದ್ದರು.

ರೋಹಿತ್ ಶರ್ಮಾ ಒಬ್ಬರೇ ಏಕದಿನ ಕ್ರಿಕೆಟ್‌ನಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ್ದು, ಈ ಸಾಧನೆ ಮಾಡಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಬಿಟ್ಟರೆ ಏಕದಿನ ಕ್ರಿಕೆಟ್‌ನಲ್ಲಿ ಯಾರೂ ಒಂದಕ್ಕಿಂತ ಹೆಚ್ಚು ದ್ವಿಶತಕ ಸಿಡಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...