NOC ಬಳಿಕವಷ್ಟೇ ಲೀಗ್‌ಗಳಲ್ಲಿ ಅವಕಾಶ: T20 ವಿಶ್ವಕಪ್‌ನಿಂದ ಪಾಕಿಸ್ತಾನ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ

Date:

ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಇದು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೇ, ಕ್ರಿಕೆಟ್ ಮಂಡಳಿಯನ್ನೂ ಕೂಡ ಕೆರಳಿಸಿದೆ.

ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು, ಬದ್ಧ ಎದುರಾಳಿ ಭಾರತದ ವಿರುದ್ಧ ಮಾತ್ರವಲ್ಲದೆ, ‘ಕ್ರಿಕೆಟ್ ಶಿಶು’ ಅಮೆರಿಕ ಎದುರೂ ಸೋಲು ಅನುಭವಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ ಹೊಸ ನಿಯಮ ರೂಪಿಸಿದೆ.

ಪಿಸಿಬಿಯ ಹೊಸ ನಿಯಮದ ಪ್ರಕಾರ, “ದೇಶಿ ಕ್ರಿಕೆಟ್ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಲು ಅವಕಾಶ ನೀಡಲಿದೆ. ವಿದೇಶಗಳಲ್ಲಿ ನಡೆಯುವ ಲೀಗ್‌ಗಳಿಗೆ ಸಂಬಂಧಿಸಿದಂತೆ ಮಂಡಳಿಯು ಎರಡು ಎನ್‌ಒಸಿಗಳನ್ನು ನೀಡುತ್ತದೆ. ಈ ನಿಯಮಕ್ಕೆ ಎಲ್ಲ ಆಟಗಾರರು ಬದ್ಧರಾಗಿರಬೇಕು” ಎಂದು ಪಿಸಿಬಿ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶಿ ಕ್ರಿಕೆಟ್ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಉಳಿದೆಲ್ಲ ಆಟಗಾರರಿಗೆ ಎರಡು ಎನ್‌ಒಸಿ(No Objection Certificate) ನಿಯಮ ಅನ್ವಯವಾಗುತ್ತದೆ. ದೇಶಿ ಕ್ರಿಕೆಟ್ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಉಳಿದೆಲ್ಲ ಆಟಗಾರರಿಗೆ ಎರಡು ಎನ್‌ಒಸಿ ನಿಯಮ ಅನ್ವಯವಾಗುತ್ತದೆ. ಅಷ್ಟೇ ಅಲ್ಲದೆ, ಯಾವುದೇ ಆಟಗಾರ ಎನ್‌ಒಸಿಗಾಗಿ ಸಲ್ಲಿಸುವ ಮನವಿಯನ್ನು ತಡೆ ಹಿಡಿಯುವ ಹಕ್ಕು ಕೂಡ ಪಿಸಿಬಿಗೆ ಇದೆ” ಎಂದು ವರದಿಯಾಗಿದೆ.

ಯಾವುದೇ ಆಟಗಾರನಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ, ಲೀಗ್‌ನಲ್ಲಿ ಆಡುವುದರಿಂದ ಫಿಟ್‌ನೆಸ್ ಮೇಲೆ ಪರಿಣಾಮ ಉಂಟಾಗಲಿದೆ ಎಂದಾದರೆ ಇಲ್ಲವೇ, ತವರಿನಲ್ಲಿ ಆಡುವ ಅಗತ್ಯವಿದೆ ಎನಿಸಿದರೆ ಪಿಸಿಬಿಯು, ಎನ್‌ಸಿ ಮನವಿಯನ್ನು ತಿರಸ್ಕರಿಸಲಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ನಿಂದ ಪಡೆದ ಎನ್‌ಒಸಿ ನೀಡಿದರಷ್ಟೇ ಪಾಕ್ ಆಟಗಾರರಿಗೆ ತಮ್ಮ ಲೀಗ್‌ಗಳಲ್ಲಿ ಆಡಲು ಅವಕಾಶ ನೀಡಬೇಕು ಎಂದು ಪಿಸಿಬಿಯು ಈಗಾಗಲೇ ಎಲ್ಲ ಕ್ರಿಕೆಟ್ ಮಂಡಳಿಗಳು ಮತ್ತು ಫ್ರಾಂಚೈಸ್‌ಗಳಿಗೆ ಸ್ಪಷ್ಟವಾಗಿ ತಿಳಿಸಿರುವುದಾಗಿ ವರದಿಯಾಗಿದೆ.

ಹೀನಾಯ ಪ್ರದರ್ಶನ ನೀಡಿರುವ ಬಾಬರ್ ಆಝಂ ಬಳಗ

ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು, ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ನೀಡಿರುವುದರಿಂದ ಭಾರೀ ವಿರೋಧ, ಟೀಕೆಗಳು ಕೇಳಿ ಬರುತ್ತಿವೆ. ಪಾಕಿಸ್ತಾನ ತಂಡವು ಲೀಗ್ ಹಂತದ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಈವರೆಗೆ ಆಡಿದೆ. ಇದರಲ್ಲಿ ಒಂದು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ.

ಮೊದಲ ಪಂದ್ಯದಲ್ಲಿ (ಜೂನ್ 6) ಆತಿಥೇಯ ಅಮೆರಿಕ ವಿರುದ್ಧ ಸೂಪ‌ರ್ ಓವರ್‌ನಲ್ಲಿ ಮುಗ್ಗರಿಸಿದ ಬಾಬ‌ರ್ ಬಳಗ, ಎರಡನೇ ಪಂದ್ಯದಲ್ಲಿ (ಜೂನ್ 9) ಭಾರತದ ವಿರುದ್ಧ ಸೋತಿತ್ತು. ಟೀಮ್ ಇಂಡಿಯಾ ವಿರುದ್ಧ ಗೆಲ್ಲಲು ಅವಕಾಶ ಇದ್ದರೂ ಕೂಡ 6 ರನ್‌ಗಳಿಂದ ವಿರೋಚಿತವಾಗಿ ಸೋಲನುಭವಿಸಿತ್ತು.

ಮೂರನೇ ಪಂದ್ಯದಲ್ಲಿ (ಜೂನ್ 11) ಕೆನಡಾ ವಿರುದ್ಧ ಗೆದ್ದಿದೆ. ಅಂತಿಮ ಪಂದ್ಯವು ಜೂನ್ 16ರಂದು ಐರ್ಲೆಂಡ್ ವಿರುದ್ಧ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದರೂ, ಪಾಕ್ ಪಡೆ ಪ್ರಶಸ್ತಿ ರೇಸ್‌ನಲ್ಲಿ ಉಳಿಯುವ ಅವಕಾಶ ಈಗಾಗಲೇ ಕಳೆದುಕೊಂಡಿದೆ.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ, ಪಾಕಿಸ್ತಾನ, ಅಮೆರಿಕ, ಕೆನಡಾ ಹಾಗೂ ಐರ್ಲ್ಯಾಂಡ್ ತಂಡಗಳು ಎ ಗ್ರೂಪ್‌ನಲ್ಲಿ ಆಡುತ್ತಿವೆ. ಈ ಪೈಕಿ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಮತ್ತು 4 ಪಂದ್ಯಗಳಿಂದ ಎರಡು ಗೆಲುವು, ಒಂದು ಸೋಲು, ಒಂದು ಡ್ರಾ ಆದ್ದರಿಂದ 5 ಪಾಯಿಂಟ್ ಕಲೆಹಾಕಿರುವ ಅಮೆರಿಕ ‘ಸೂಪರ್ 8’ ಹಂತಕ್ಕೆ ಸ್ಥಾನ ಖಚಿತಪಡಿಸಿಕೊಂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...