ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಕೆ

Date:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಕೆಎಸ್‌ಸಿಎ ನೂತನ ಅಧ್ಯಕ್ಷ ಬಿ ಕೆ ವೆಂಕಟೇಶ್ ಪ್ರಸಾದ್ ಅವರು ತಮ್ಮನ್ನು ಭೇಟಿ ಮಾಡಿದ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

“ನಮಗೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸಬೇಕು ಎನ್ನುವ ಯಾವುದೇ ಉದ್ದೇಶವಿಲ್ಲ. ಆದರೆ ಜನಜಂಗುಳಿಯ ನಿಯಂತ್ರಣ ಕ್ರಮಗಳ ಬಗ್ಗೆ ಆಲೋಚಿಸಬೇಕು. ಜೊತೆಗೆ ಮೈಕಲ್ ಡಿ ಕುನ್ಹಾ ಸಮಿತಿ ನೀಡಿರುವ ಸಲಹೆಗಳನ್ನು ಹಂತ, ಹಂತವಾಗಿ ಪಾಲನೆ ಮಾಡುವುದು ನಮ್ಮ ಆಲೋಚನೆ. ಇದನ್ನು ವೆಂಕಟೇಶ್ ಪ್ರಸಾದ್ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದರು. “ನಮ್ಮ ರಾಜ್ಯದ ಗೌರವ, ಸ್ವಾಭಿಮಾನಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ದವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಗಳು ಬದಲಾದರೂ ಉತ್ತರ ಕರ್ನಾಟಕದ ಜನರ ಬದುಕು ಬದಲಾಗಲಿಲ್ಲವೇಕೆ?

“ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಒಗ್ಗೂಡಿ ‌ಕೆಲಸ ಮಾಡೋಣ ಎಂದು ತಿಳಿಸಿದ್ದೇನೆ. ನೂತನ ಸ್ಟೇಡಿಯಂಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದರ ಬಗ್ಗೆಯೂ ಚರ್ಚೆ ನಡೆಸಲಾಗುವುದು” ಎಂದರು.

“ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದೆ ನಡೆಯುವ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಬೇಕು ಎಂದು ನೂತನವಾಗಿ ಕೆಎಸ್ ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ತಂಡದವರು ಮುಖ್ಯಮಂತ್ರಿಯವರು ಹಾಗೂ ನನ್ನನ್ನು ಭೇಟಿ ಮಾಡಿ ಸರ್ಕಾರದ ಸಹಕಾರ ಕೋರಿದ್ದಾರೆ” ಎಂದರು.

“ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಅನಿಲ್ ಕುಂಬ್ಳೆ ಅವರ ಬೆಂಬಲ ಹೊಂದಿರುವ ಹಾಗೂ ನೂತನ ಜವಾಬ್ದಾರಿ ಹೊತ್ತಿರುವ ವೆಂಕಟೇಶ್ ಪ್ರಸಾದ್ ಅವರ ತಂಡ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ.‌ ಇವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದೇನೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...