ಐಪಿಎಲ್‌ 2023 | ಪ್ಲೇ ಆಫ್‌ ಅಂಚಿನಲ್ಲಿ ಎಡವಿದ ಪಂಜಾಬ್‌!

Date:

ಐಪಿಎಲ್‌ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಮುಗ್ಗರಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಪಂಜಾಬ್‌ ತಂಡ, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 15 ರನ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಕ್ಯಾಪಿಟಲ್ಸ್‌, ಪಂಜಾಬ್‌ ಬೌಲರ್‌ಗಳ ಬೆವರಿಳಿಸಿತ್ತು. ಕೇವಲ 2 ವಿಕೆಟ್‌ ನಷ್ಟದಲ್ಲಿ ನಿಗದಿತ 20 ಓವರ್‌ಗಳಲ್ಲಿ 213 ರನ್‌ಗಳಿಸಿತ್ತು. ಕ್ವಾಲಿಫೈಯರ್‌ ಆಸೆಯನ್ನು ಜೀವಂತವಾಗಿರಿಸಿದ್ದ ಶಿಖರ್‌ ಧವನ್‌ ಪಡೆ ಡೆಲ್ಲಿ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಚೇಸಿಂಗ್‌ ವೇಳೆ ಲಿವಿಂಗ್‌ಸ್ಟನ್‌ (94*) ಮತ್ತು ಅಥರ್ವ ತೈಡೆ (55) ಹೊರತು ಪಡಿಸಿ, ಇನ್ನುಳಿದ ಬ್ಯಾಟರ್‌ಗಳು ತಂಡದ ನೆರವಿಗೆ ನಿಲ್ಲಲಿಲ್ಲ.

ನಾಯಕ ಶಿಖರ್‌ ಧವನ್‌ ತಾನೆದುರಿಸಿದ ಮೊದ ಎಸೆತದಲ್ಲೇ ಸ್ಲಿಪ್‌ನಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಪ್ರಭಾಸಿಮ್ರನ್‌ ಸಿಂಗ್‌ 22 ರನ್‌ಗಳಿಸಿದರು. ಬಳಿಕ ಜೊತೆಯಾದ ಲಿವಿಂಗ್‌ಸ್ಟನ್‌ ಮತ್ತು ಥೈಡೆ, ಪಂಜಾಬ್‌ ತಂಡಕ್ಕೆ ಆಸರೆಯಾದರು. 48 ಎಸೆತಗಳನ್ನು ಎದುರಿಸಿದ ಲಿವಿಂಗ್‌ಸ್ಟನ್‌ 9 ಸಿಕ್ಸರ್‌ ಮತ್ತು 5 ಬೌಂಡರಿಗಳ ನೆರವಿನಿಂದ ಅಜೇಯ 94 ರನ್‌ಗಳಿಸಿದರೆ, ತೈಡೆ 55 ರನ್‌ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿತೇಶ್‌ ಶರ್ಮಾ (0), ಶಾರೂಖ್‌ ಖಾನ್‌ (6), ಸ್ಯಾಮ್‌ ಕರನ್‌ (11), ಗೆಲುವಿಗಾಗಿ ಹೋರಾಟ ಪ್ರದರ್ಶಿಸಲಿಲ್ಲ . ಅಂತಿಮವಾಗಿ 8 ವಿಕೆಟ್‌ ನಷ್ಟದಲ್ಲಿ 198 ರನ್‌ಗಳಿಸಲಷ್ಟೇ ಕಿಂಗ್ಸ್‌  ಶಕ್ತವಾಯಿತು. ಆ ಮೂಲಕ  ಪ್ಲೇ ಆಫ್‌ ಅಂಚಿನಲ್ಲಿ ಪಂಜಾಬ್‌ ಎಡವಿದೆ.

ಟೂರ್ನಿಯಲ್ಲಿ ತನ್ನ 5ನೇ ಜಯದೊಂದಿಗೆ ಡೆಲ್ಲಿ ತಂಡ ಕೊನೇ ಸ್ಥಾನದಿಂದ ಮೇಲೆದ್ದು 9ನೇ ಸ್ಥಾನಕ್ಕೇರಿದರೆ, ಪಂಜಾಬ್‌ ಕಿಂಗ್ಸ್ 8ನೇ ಸ್ಥಾನದಲ್ಲೇ ಉಳಿದುಕೊಂಡಿದೆ.

ಡೆಲ್ಲಿ ಪರ ಅಬ್ಬರಿಸಿದ ರೊಸೊವ್!

ಅಂಕ ಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದ್ದ ಡೆಲ್ಲಿ, ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲಿ ಇದೇ ಮೊದಲ ಬಾರಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ಕ್ಯಾಪಿಟಲ್ಸ್‌ ಪರ ಬಿರುಸಿನ ಬ್ಯಾಟಿಂಗ್‌ ನಡೆಸಿದ ಪೃಥ್ವಿ ಶಾ (54), ಡೇವಿಡ್‌ ವಾರ್ನರ್‌ (46), ರೈಲೀ ರೊಸೊವ್ (82*) ಮತ್ತು ಫಿಲಿಪ್ ಸಾಲ್ಟ್ (26*) ಪಂಜಾಬ್ ಬೌಲರ್‌ಗಳನ್ನು ಬಡಿದು ಬೆಂಡೆತ್ತಿದರು. ಪರಿಣಾಮ ಕ್ಯಾಪಿಟಲ್ಸ್‌, 20 ಓವರ್‌ಗಳಲ್ಲಿ 213/2 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...