ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

Date:

ʻನನ್ನ ಕುರಿತು ಹೊರಗಡೆ ಯಾರು ಏನು ಮಾತನಾಡುತ್ತಾರೆ ಎಂಬುದರ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲʼ ಎಂದು ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ್ದ ಕೊಹ್ಲಿ, ಆರ್‌ಸಿಬಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಆ ಮೂಲಕ  ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿ ಅತಿಹೆಚ್ಚು ಶತಕದ ದಾಖಲೆ (6), ಹೊಂದಿದ್ದ ಕ್ರಿಸ್ ಗೇಲ್ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದರು.

ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯಿಸಿದ ಕೊಹ್ಲಿ, ʻನಾನು ಎಂದಿಗೂ ಹಿಂದಿನ ಅಂಕಿ-ಅಂಶಗಳನ್ನು ಗಮನಿಸುವುದಿಲ್ಲ. ನಾನು ಈಗಾಗಲೇ ತುಂಬಾ ಒತ್ತಡಕ್ಕೆ ಒಳಗಾಗಿದ್ದೇನೆ. ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರೂ ಸಹ ಕೆಲವೊಮ್ಮೆ ನನಗೆ ಸಲ್ಲಬೇಕಾದ ಗೌರವ ನೀಡುವುದಿಲ್ಲ. ಹೀಗಾಗಿ  ಹೊರಗೆ ಯಾರಾದರೂ ಏನಾದರೂ ಮಾತನಾಡಿಕೊಳ್ಳುತ್ತಾರೆ ಎಂಬುದಕ್ಕೆ ನಾನು ಹೆದರುವುದಿಲ್ಲ. ಅದು ಅವರವರ ಅಭಿಪ್ರಾಯವಾಗಿದೆʼ ಕಿಂಗ್‌ ಕೊಹ್ಲಿ ಮಾರ್ಮಿಕವಾಗಿ ನುಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಹೈದರಾಬಾದ್‌ನ ರಾಜೀವ್‌ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಹೈದರಬಾದ್‌, ಹೆನ್ರಿಕ್ ಕ್ಲಾಸೆನ್ ಅಬ್ಬರದ ಶತಕದ ಬಲದಲ್ಲಿ 5 ವಿಕೆಟ್‌ ನಷ್ಟದಲ್ಲಿ 186 ರನ್‌ಗಳಿಸಿತ್ತು. 51 ಎಸೆತಗಳನ್ನು ಎದುರಿಸಿದ ಕ್ಲಾಸೆನ್‌ 6 ಸಿಕ್ಸರ್‌ ಮತ್ತು 8 ಬೌಂಡರಿಗಳ ನೆರವಿನಿಂದ 104 ರನ್‌ಗಳಿಸಿದ್ದರು.

ದಾಖಲೆ ಸರಿಗಟ್ಟಿದ ಕೊಹ್ಲಿ!

187 ರನ್‌ ಚೇಸಿಂಗ್‌ ವೇಳೆ ʻಕಿಂಗ್ ಕೊಹ್ಲಿʼ ದಾಖಲಿಸಿದ ಅಮೋಘ ಶತಕ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಅವರ ʻಕ್ಲಾಸಿಕ್‌ ಫಿಫ್ಟಿʼ ನೆರವಿನಿಂದ ಆರ್‌ಸಿಬಿ, ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತ್ತು.

ಕೊಹ್ಲಿ 63 ಎಸೆತಗಳಲ್ಲಿ  ಭರ್ತಿ 100 ರನ್ ಗಳಿಸಿದರೆ, ನಾಯಕ ಫಾಫ್ ಡು ಪ್ಲೆಸಿಸ್ 47 ಎಸೆತಗಳಲ್ಲಿ 71 ರನ್ ಗಳಿಸಿದರು. 108 ಎಸೆತಗಳಲ್ಲಿ 172 ರನ್‌ಗಳ ಜೊತೆಯಾದಲ್ಲಿ ಭಾಗಿಯಾದ ಈ ಜೋಡಿ ತಂಡವನ್ನು ಸುಲಭ ಗೆಲುವಿನತ್ತ ಮುನ್ನಡೆಸಿದರು. ಆ ಮೂಲಕ ಪ್ಲೇಆಫ್‌ ಆಸೆಯನ್ನು ಜೀವಂತವಾಗಿರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...