ವಿಶ್ವಕಪ್ ಫೈನಲ್‌ಗೂ ತಟ್ಟಿದ ಪ್ಯಾಲೆಸ್ತೀನ್ ಪರ ಹೋರಾಟ: ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ತಬ್ಬಿಕೊಂಡ ಯುವಕ

Date:

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಡುವೆ ನಡೆಯುತ್ತಿರುವ ಸಂಘರ್ಷದ ಬಿಸಿ ಗುಜರಾತಿನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ ಪಂದ್ಯಕ್ಕೂ ತಟ್ಟಿದೆ.

ಇಂದಿನ ಫೈನಲ್ ಪಂದ್ಯದ ವೇಳೆ ಕೊಹ್ಲಿ ಅಭಿಮಾನಿ ಹಾಗೂ ಪ್ಯಾಲೆಸ್ತೀನ್ ಪರ ಪ್ರತಿಭಟನಾಕಾರನೋರ್ವ ಇದ್ದಕ್ಕಿದ್ದಂತೆ ಮೈದಾನಕ್ಕೆ ನುಗ್ಗಿದ್ದಾನೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಪಿಚ್ ಹತ್ತಿರಕ್ಕೆ ಧಾವಿಸಿ, ಕ್ರೀಸ್‌ನಲ್ಲಿದ್ದ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ ‘ಪ್ಯಾಲೆಸ್ತೀನ್ ಮೇಲೆ ಬಾಂಬ್ ದಾಳಿ ನಿಲ್ಲಿಸಿ’ ಎಂದು ಬರೆದಿದ್ದ ಟೀ ಶರ್ಟ್‌ ಕೂಡ ಧರಿಸಿದ್ದಲ್ಲದೇ, . ಪ್ಯಾಲೆಸ್ತೀನ್ ಧ್ವಜ ಸಹ ಆತನ ಕೈಯಲ್ಲಿತ್ತು. ಅಲ್ಲದೇ, ಧ್ವಜದ ಬಣ್ಣವನ್ನು ಹೊಂದಿರುವ ಮಾಸ್ಕ್ ಕೂಡ ಧರಿಸಿದ್ದ. ಇದ್ದಕ್ಕಿದ್ದಂತೆ ಮೈದಾನಕ್ಕೆ ನುಗ್ಗಿದ ಪರಿಣಾಮ ಪಂದ್ಯಕ್ಕೆ ಸ್ವಲ್ಪ ಹೊತ್ತು ಅಡ್ಡಿಯಾಯಿತು.

ಬಳಿಕ ಭದ್ರತಾ ಲೋಪ ಗಮನಿಸಿ ಕ್ರೀಡಾಂಗಣಕ್ಕೆ ಓಡೋಡಿ ಬಂದ ಭದ್ರತಾ ಸಿಬ್ಬಂದಿಗಳು ಹಾಗೂ ಗುಜರಾತ್‌ನ ಕ್ರೈಂ ಬ್ರಾಂಚ್‌ನ ಪೊಲೀಸರು, ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೈದಾನಕ್ಕೆ ನುಗ್ಗಿದ ಯುವಕ ಯಾರು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇನ್ನು ಯುವಕನ ಸಾಹಸಕ್ಕೆ ನೂರಾರು ಮಂದಿ ನೆಟ್ಟಿಗರು ಬೆಂಬಲ ವ್ಯಕ್ತಪಡಿಸಿದರೆ, ಭದ್ರತಾ ಲೋಪಕ್ಕೆ ಕಾರಣರಾದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ....

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...