ಆಸ್ಟ್ರೀಯನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌: ಚಿನ್ನ ಗೆದ್ದ ಪ್ರಿಯಾಂಕಾ ಗೋಸ್ವಾಮಿ

Date:

ಆಸ್ಟ್ರೀಯನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಕಿ.ಮೀ. ಸ್ಪರ್ಧೆಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತದ ರೇಸ್ ವಾಕರ್ ಪ್ರಿಯಾಂಕಾ ಗೋಸ್ವಾಮಿ ಈ ವರ್ಷ ಮೊದಲ ಚಿನ್ನದ ಪದಕ ತನ್ನದಾಗಿಸಿಕೊಂಡರು.

ನವದೆಹಲಿಯಲ್ಲಿ ನಡೆದ 10 ಕಿ.ಮೀ. ರೇಸ್ ವಾಕ್‌ನಲ್ಲಿ ಗೋಸ್ವಾಮಿ ಅವರು 47 ನಿಮಿಷ ಹಾಗೂ 54 ಸೆಕೆಂಡ್‌ನಲ್ಲಿ ಗುರಿ ತಲುಪಿ ಮೊದಲ ಸ್ಥಾನ ಪಡೆದರು. ತನ್ನ ನೆಚ್ಚಿನ ಸ್ಪರ್ಧೆ 20 ಕಿ.ಮೀ. ರೇಸ್ ವಾಕ್‌ನಲ್ಲಿ ಗೋಸ್ವಾಮಿ ರಾಷ್ಟ್ರೀಯ ದಾಖಲೆ(1:28.45)ನಿರ್ಮಿಸಿದ್ದಾರೆ.

ಗೋಸ್ವಾಮಿ 10 ಕಿ.ಮೀ. ಸ್ಪರ್ಧೆಯಲ್ಲಿ 2022ರಲ್ಲಿ 45 ನಿಮಿಷ, 47 ಸೆಕೆಂಡ್‌ನಲ್ಲಿ ಗುರಿ ತಲುಪಿ ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಪ್ಲಾಸ್ಟಿಕ್: ಮನ್ಸೂರ್ ಮಾತುಗಳನ್ನು ಸರ್ಕಾರ-ಜನ ಆಲಿಸುವರೇ?

‘‘ನನಗೆ ಒಂದು ನಿಮಿಷದ ಪೆನಾಲ್ಟಿ ವಿಧಿಸಿದ ನಂತರವೂ ಸ್ಪರ್ಧೆಯನ್ನು ಕೊನೆಗೊಳಿಸಿರುವೆ. ಪೆನಾಲ್ಟಿ ಹಾಗೂ ಜ್ವರದ ನಡುವೆ ಚಿನ್ನದ ಪದಕ ಗೆಲ್ಲುವುದು ಸುಲಭವಲ್ಲ’’ ಎಂದು 29ರ ಹರೆಯದ ಗೋಸ್ವಾಮಿ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಗೋಸ್ವಾಮಿ ಅವರು ದೀರ್ಘ ಅಂತರದ ಸ್ಪರ್ಧೆಗಳಲ್ಲೂ ಭಾಗವಹಿಸಿದ್ದಾರೆ. ಮೇನಲ್ಲಿ ಮೆಲ್ಬರ್ನ್‌ನಲ್ಲಿ ನಡೆದಿದ್ದ ಅಥ್ಲೆಟಿಕ್ಸ್ ವಿಕ್ಟೋರಿಯ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ 2 ಗಂಟೆ, 26 ನಿಮಿಷ ಹಾಗೂ 54 ಸೆಕೆಂಡ್‌ನಲ್ಲಿ ಗುರಿ ತಲುಪಿ 2ನೇ ಸ್ಥಾನ ಪಡೆದಿದ್ದರು.

ಆಸ್ಟ್ರೀಯನ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 35 ಕಿ.ಮೀ. ರೇಸ್ ವಾಕ್ ಸ್ಪರ್ಧೆಯಲ್ಲಿ ಸಂದೀಪ್ ಕುಮಾರ್ 2:38:45 ಸೆಕೆಂಡ್‌ನಲ್ಲಿ ಗುರಿ ತಲುಪಿ 2ನೇ ಸ್ಥಾನ ಪಡೆದರು. ರಾಮ್ ಬಾಬೂ(2:41:47 ಸೆ.)3ನೇ ಸ್ಥಾನ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...