ಧರ್ಮಶಾಲಾದಲ್ಲಿ ಅರ್ಧದಲ್ಲೇ ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ರದ್ದು: ಕಾರಣ ಏನು?

Date:

ಗುರುವಾರ ಸಂಜೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಐಪಿಎಲ್ ಪಂದ್ಯವನ್ನು ಅರ್ಧದಲ್ಲೇ ನಿಲ್ಲಿಸಿದ ಬೆಳವಣಿಗೆ ನಡೆದಿದೆ.

ಕ್ರೀಡಾಂಗಣದಲ್ಲಿ ಗಮನಾರ್ಹವಾದ ತಾಂತ್ರಿಕ ವೈಫಲ್ಯದಿಂದಾಗಿ ಅರ್ಧಕ್ಕೆ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.

“ಈ ಪ್ರದೇಶದಲ್ಲಿ ವಿದ್ಯುತ್ ಕಡಿತದಿಂದಾಗಿ, ಎಚ್‌ಪಿಸಿಎ ಕ್ರೀಡಾಂಗಣದ ಒಂದು ಫ್ಲಡ್ ಲೈಟಿನ ಗೋಪುರವು ಸರಿಯಾಗಿ ಕಾರ್ಯ ನಿರ್ವಹಿಸಲಿಲ್ಲ. ಕ್ರೀಡಾಂಗಣದಲ್ಲಿ ಹಾಜರಿದ್ದವರಿಗೆ ಉಂಟಾದ ಅನಾನುಕೂಲತೆಗೆ ಬಿಸಿಸಿಐ ವಿಷಾದಿಸುತ್ತದೆ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿರಿಸಿ ದಾಳಿ ನಡೆಸಿದ. ಆ ಬಳಿಕ ಸಂಘರ್ಷ ಆರಂಭವಾಗಿದೆ. ಈ‌ ನಡುವೆಯೂ ಐಪಿಎಲ್ ಪಂದ್ಯಾವಳಿಯು‌ ಮುಂದುವರಿದಿತ್ತು.

ಮಳೆಯಿಂದಾಗಿ ಇಂದಿನ ಪಂದ್ಯ ತಡವಾಗಿ ಆರಂಭವಾಗಿತ್ತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಆರಂಭಿಕ ಆಟಗಾರರಾದ ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರನ್ ಸಿಂಗ್ ಸ್ಫೋಟಕ ಆರಂಭ ಒದಗಿಸಿದರು. ಈ ಜೋಡಿ 10.1 ಓವರ್ ಗಳಲ್ಲೇ ಮೊದಲ ವಿಕೆಟ್‌ಗೆ 122 ರನ್ ಕಲೆಹಾಕಿ ಬೃಹತ್ ಮೊತ್ತ ಗಳಿಸುವ ಲೆಕ್ಕಾಚಾರದಲ್ಲಿದೆ. 10.1ನೇ ಓವರ್ ನಲ್ಲಿ 34 ಎಸೆತಗಳಲ್ಲಿ 5 ಬೌಂಡರಿ 6 ಸಿಕ್ಸರ್ ಸಹಿತ 70 ರನ್ ಗಳಿಸಿದ್ದ ಪ್ರಿಯಾಂಶ್ ಆರ್ಯ ಔಟಾದರು. ಈ ಸಂದರ್ಭದಲ್ಲೇ ಮೈದಾನದಲ್ಲಿ ಏಕಾಏಕಿ ಎರಡು ದೊಡ್ಡ ವಿದ್ಯುತ್ ದೀಪಗಳು ಸ್ಥಗಿತಗೊಂಡವು.

ಅಪಾಯದ ಮುನ್ಸೂಚನೆ ಬೆನ್ನಲ್ಲೇ ತಕ್ಷಣ ಕಾರ್ಯಪ್ರವೃತ್ತರಾದ ಮೈದಾನದ ಸಿಬ್ಬಂದಿ ಪ್ರೇಕ್ಷಕರನ್ನು ಮೈದಾನದಿಂದ ಹೊರಕಳಿಸಿದರು. ತುರ್ತು ಬಾಗಿಲುಗಳನ್ನು ತೆರೆಯುವ ಮೂಲಕ ಕಡಿಮೆ ಸಮಯದಲ್ಲಿ ಮೈದಾನದಲ್ಲಿ ಪ್ರೇಕ್ಷಕರನ್ನು ಸಂಪೂರ್ಣವಾಗಿ ಹೊರಕಳಿಸಲಾಯಿತು. ಕೂಡಲೇ ಆಟಗಾರರನ್ನು ಸುರಕ್ಷತಾ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...