ಐಸಿಸಿ ವಿಶ್ವಕಪ್ ಆತಿಥ್ಯ ನೀಡಲು ‘ಮೊಹಾಲಿ’ಗಿಲ್ಲ ಅವಕಾಶ : ‘ರಾಜಕೀಯ’ ಎಂದ ಪಂಜಾಬ್

Date:

  • ಪಂಜಾಬಿಗರ ಆಕ್ರೋಶಕ್ಕೆ ಕಾರಣವಾದ ವಿಶ್ವಕಪ್ ವೇಳಾಪಟ್ಟಿ
  • ಲೀಗ್ ಪಂದ್ಯಾವಳಿಯ ಅವಕಾಶವೂ ಪಡೆಯದ ಮೊಹಾಲಿ ಕ್ರೀಡಾಂಗಣ

ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ನ ಸಂಪೂರ್ಣ ಪಂದ್ಯಗಳನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ. ಆದರೆ, ಆತಿಥ್ಯ ವಹಿಸುವ ನಗರಗಳ ಪಟ್ಟಿಯಿಂದ ‘ಮೊಹಾಲಿ ಕ್ರೀಡಾಂಗಣ’ವನ್ನು ಹೊರಗಿಟ್ಟಿರುವುದು ಪಂಜಾಬಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಪಟ್ಟಿಯಿಂದ ಮೊಹಾಲಿಯನ್ನು ಹೊರಗಿಟ್ಟಿರುವುದನ್ನು ಖಂಡಿಸಿರುವ ಪಂಜಾಬ್ ಕ್ರೀಡಾ ಸಚಿವ ಗುರ್ಮೀತ್ ಸಿಂಗ್ ಮೀಟ್ ಹೇಯರ್, ” ವಿಶ್ವಕಪ್ ಪಟ್ಟಿಯಿಂದ ಮೊಹಾಲಿಯನ್ನು ಹೊರಗಿಟ್ಟಿರುವುದಕ್ಕೆ ರಾಜಕೀಯ ಹಸ್ತಕ್ಷೇಪವೇ ಕಾರಣ. ಇದು ಸಲ್ಲದು. ಈ ಬಗ್ಗೆ ಪಂಜಾಬ್ ಸರ್ಕಾರವು ಬಿಸಿಸಿಐ ಜೊತೆ ಮಾತನಾಡಲಿದೆ” ಎಂದು ಹೇಳಿದ್ದಾರೆ.

‘1996 ಮತ್ತು 2011ರಲ್ಲಿ ಮೊಹಾಲಿಯಲ್ಲಿ ವಿಶ್ವಕಪ್ ಸೆಮಿಫೈನಲ್ ಪಂದ್ಯಗಳು ನಡೆದಿದ್ದವು. ಆದರೆ ಈ ಬಾರಿ ಪಂಜಾಬ್‌ಗೆ ಒಂದೇ ಒಂದು ಲೀಗ್ ಪಂದ್ಯವನ್ನಾಡಿಸಲು ಅವಕಾಶ ನೀಡಲಾಗಿಲ್ಲ. ಉದ್ಘಾಟನಾ ಹಾಗೂ ಫೈನಲ್ ಪಂದ್ಯಗಳ ಹೊರತಾಗಿಯೂ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಪಂದ್ಯಕ್ಕೂ ಆತಿಥ್ಯ ನೀಡಲಾಗಿದೆ. ಇದರಲ್ಲಿ ರಾಜಕೀಯ ಇರುವುದು ಸ್ಪಷ್ಟ’ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಹಾಲಿಯ ಪಿಸಿಎ ಸ್ಟೇಡಿಯಂ ಭಾರತದ ಪ್ರಮುಖ ಐದು ಕ್ರೀಡಾಂಗಣಗಳಲ್ಲಿ ಒಂದಾಗಿದೆ. ಮಾತ್ರವಲ್ಲದೆ ವಿಶ್ವದ ಪ್ರಮುಖ ಕ್ರೀಡಾಂಗಣಗಳ ಪಟ್ಟಿಯಲ್ಲಿಯೂ ಇದೆ ಎಂದು ಉಲ್ಲೇಖಿಸಿದ ಪಂಜಾಬ್ ಕ್ರೀಡಾ ಸಚಿವ, ಮೊಹಾಲಿ ಕ್ರಿಕೆಟ್ ಅಭಿಮಾನಿಗಳ ಮೊದಲ ಆಯ್ಕೆ. ಪಂಜಾಬ್ ವಿರುದ್ಧದ ಈ ತಾರತಮ್ಯವನ್ನು ನಾವು ಸಹಿಸುವುದಿಲ್ಲ. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ಈ ತಾರತಮ್ಯದ ವಿಷಯವನ್ನು ಬಿಸಿಸಿಐ ಜೊತೆಗೆ ಪ್ರಸ್ತಾಪಿಸಲಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೋದಿಯವರನ್ನು ಪ್ರಶ್ನಿಸಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ಕಿರುಕುಳ : ವೈಟ್‌ಹೌಸ್ ಖಂಡನೆ

ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್‌ನ ಸಂಪೂರ್ಣ ಪಂದ್ಯಾವಳಿಗಳ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ್ದು, ಅಕ್ಟೋಬರ್ 5ರಂದು ಚಾಲನೆಗೊಳ್ಳಲಿದೆ. ವಿಶ್ವಕಪ್ ಟೂರ್ನಿಯು ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿದೆ.

ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮೊದಲ ಪಂದ್ಯವನ್ನು ಆಡಲಿದೆ. ಭಾರತವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ. ಭಾರತ-ಪಾಕ್ ನಡುವಿನ ಹೈ ವೋಲ್ಟೇಜ್ ಪಂದ್ಯ ಅ.15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...