ಸಾಲ ತೀರಿಸಲು ಪೂರಿ-ಸಬ್ಜಿ ಮಾರಾಟ ಮಾಡಿದ್ದೇನೆ: ಟೀಮ್ ಇಂಡಿಯಾ ಮಾಜಿ ಆಟಗಾರ

Date:

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಸೇರಿ, ಯಾವುದಾದರು ಒಂದು ಸರನಿಯಲ್ಲಿ ಆಟವಾಡಿದರೆ ಸಾಕು ತಮ್ಮ ಇಡೀ ಜೀವನವೇ ಸೆಟಲ್ ಆಗಿಬಿಡುತ್ತದೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ, ಹಲವಾರು ವರ್ಷಗಳ ಕಾಲ ಟೀಮ್‌ ಇಂಡಿಯಾದಲ್ಲಿ ಆಟವಾಡಿದರೂ, ಉತ್ತಮ ಬದುಕು ಕಟ್ಟಿಕೊಳ್ಳಲಾಗದೆ, ಮಾಡಿದ್ದ ಸಾಲ ತೀರಿಸಲು ಪೂರಿ-ಸಬ್ಜಿ ವ್ಯಾಪಾರ ಮಾಡಿರುವ ಕತೆ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮನೋಜ್ ತಿವಾರಿ ಅವರದ್ದು.

ಮನೋಜ್‌ ತಿವಾರಿ ಅವರು ಟೀಮ್‌ ಇಂಡಿಯಾದಲ್ಲಿ ಉತ್ತಮ ನೆಲೆಯನ್ನೂ ಕಂಡಿದ್ದ ಆಟಗಾರ. ಅವರು ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಗೌತಮ್ ಗಂಭೀರ್‌ ಸೇರಿದಂತೆ ಹಲವು ಸ್ಟಾರ್‌ ಆಟಗಾರರೊಂದಿಗೆ ಸ್ಕ್ರೀಸ್‌ ಹಂಚಿಕೊಂಡಿದ್ದಾರೆ. ಟೀಮ್‌ ಇಂಡಿಯಾದಲ್ಲಿ 12 ಏಕದಿನ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳನ್ನು ಆಡಿದ್ದಾರೆ. ದಿಗ್ಗಜ ಆಟಗಾರರೊಂದಿಗೆ ಕ್ರೀಸ್ ಶೇರ್ ಮಾಡಿಕೊಂಡಿದ್ದ ಮನೋಜ್ ತಿವಾರಿ ತಮ್ಮ ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಮನೋಜ್ ತಿವಾರಿ ಭಾರತದ ಪರ 12 ಏಕದಿನ ಮತ್ತು ಮೂರು ಟಿ 20 ಪಂದ್ಯಗಳನ್ನು ಆಡಿದ್ದಾರೆ. ಮಾತ್ರವಲ್ಲದೆ, 2006-07ರ ರಣಜಿ ಟ್ರೋಫಿ ಸರಣಿಯಲ್ಲಿ ಬಂಗಾಳ ತಂಡವನ್ನು ಮುನ್ನಡೆಸುವ ಜೊತೆಗೆ 99.50 ಸರಾಸರಿಯಲ್ಲಿ 796 ರನ್ ಗಳಿಸಿದ್ದರು.

ಆದರೂ, ಹೆಚ್ಚು ಸಮಯ ಭಾರತೀಯ ತಂಡದಲ್ಲಿ ಉಳಿಯದ ತಿವಾರಿ, ತಮ್ಮ ಮತ್ತು ಕುಟುಂಬದ ಸಾಲವನ್ನು ತೀರಿಸಲು ಕ್ರಿಕೆಟ್‌ ಆಡುವುದರ ಜೊತೆಗೆ ಪೂರಿ-ಸಬ್ಜಿಯನ್ನು ಮಾರಾಟ ಮಾಡಿದ್ದೇನೆಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖಾಸಗಿ ಯೂಟ್ಯೂಬ್ ಚಾನೆಲ್‌ ಜೊತೆ ತಮ್ಮ ಜೀವನ ಬಗ್ಗೆ ಮಾತನಾಡಿರುವ ತಿವಾರಿ, ”ಅವು ಕಷ್ಟಕರ ದಿನಗಳಾಗಿದ್ದವು. ನಾನು ಸಾಲ ತೀರಿಸಬೇಕೆಂಬುದು ಯಾವಾಗಲೂ ಮನಸ್ಸಿನಲ್ಲಿತ್ತು. ಕೋಲ್ಕತ್ತಾದಲ್ಲಿ ನಮ್ಮ ಹೋಟೆಲ್ ಇದೆ. ಅಲ್ಲಿ ನಾನು ಪೂರಿ-ಸಬ್ಜಿ ಮಾರಾಟ ಮಾಡುತ್ತಿದ್ದೆ. ಕೆಲವೊಮ್ಮೆ ಜನರು ಆಹಾರ ತಿಂದು, ಹಣ ಕೊಡದೆ ಹೋಗಿಬಿಡುತ್ತಿದ್ದರು” ಎಂದು ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...