ಐಪಿಎಲ್ | ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ; 4ನೇ ಬಾರಿಗೆ ಫೈನಲ್ ಪ್ರವೇಶಿಸಿದ ಕೋಲ್ಕತ್ತಾ ನೈಟ್ ರೈಡರ್ಸ್‌

Date:

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಭರ್ಜರಿ ಜಯಗಳಿಸಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ, 4ನೇ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿದೆ.

ಟಾಸ್ ಗೆದ್ದಿದ್ದ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ, ಕೆಕೆಆರ್‌ನ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ನಡುವೆಯೂ ಕೂಡ ರಾಹುಲ್ ತ್ರಿಪಾಠಿಯವರ ಅರ್ಧಶತಕದ ನೆರವಿನಿಂದ 19.3 ಓವರ್‌ಗಳಲ್ಲಿ ಕೇವಲ 159 ರನ್ ಗಳಿಸುವಷ್ಟರಲ್ಲಿ ಆಲೌಟ್‌ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ತಂಡವು, ವೆಂಕಟೇಶ್ ಅಯ್ಯರ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 13.4 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 164 ರನ್ ಬಾರಿಸುವ ಮೂಲಕ ಗುರಿ ತಲುಪಿತು.

ಶ್ರೇಯಸ್ ಅಯ್ಯರ್ ಅವರು 24 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸ್‌ನ ನೆರವಿನಿಂದ 58 ರನ್ ಗಳಿಸಿದರೆ, ವೆಂಕಟೇಶ್ ಅಯ್ಯರ್ 28 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸ್‌ನ ನೆರವಿನಿಂದ 51 ರನ್ ಗಳಿಸಿ, ಔಟಾಗದೇ ಉಳಿದರು. ಉಳಿದಂತೆ ಕೆಕೆಆರ್ ಪರ ಇನ್ನಿಂಗ್ಸ್‌ ಆರಂಭಿಸಿದ ಸುನಿಲ್ ನರೇನ್ 21 ರನ್ ಹಾಗೂ ರಹ್ಮತುಲ್ಲಾ ಗುರ್ಬಾಝ್ 23 ರನ್ ಗಳಿಸಿದರು.

ಸನ್‌ರೈಸರ್ಸ್‌ ಹೈದರಾಬಾದ್ ಪರ ಬೌಲಿಂಗ್‌ನಲ್ಲಿ ಟಿ ನಟರಾಜನ್ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್‌ ತಲಾ ಒಂದೊಂದು ವಿಕೆಟ್ ಗಳಿಸಿದರು.

ಈ ಗೆಲುವಿನೊಂದಿಗೆ ಬಾಲಿವುಡ್‌ ನಟ ಶಾರೂಖ್ ಖಾನ್ ಮಾಲೀಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು, 4ನೇ ಬಾರಿಗೆ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಈ ಮೊದಲು 2012, 2014 ಹಾಗೂ 2021ರಲ್ಲಿ ಫೈನಲ್ ಪ್ರವೇಶಿಸಿತ್ತು. ಈ ಪೈಕಿ 2012ರಲ್ಲಿ ಚೆನ್ನೈಯನ್ನು ಹಾಗೂ 2014ರಲ್ಲಿ ಕಿಂಗ್ಸ್ ಎಲೆವೆನ್ ಪಂಜಾಬ್ ಅನ್ನು ಸೋಲಿಸಿ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ, ಚಾಂಪಿಯನ್ ಆಗಿತ್ತು.

2021ರಲ್ಲಿ ಕೂಡ ಫೈನಲ್ ಪ್ರವೇಶಿಸಿದ್ದರೂ ಕೂಡ, ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು 27 ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲನುಭವಿಸಿ, ರನ್ನರ್ ಅಪ್ ಆಗಿತ್ತು. ಮೇ 26ರ ಭಾನುವಾರದಂದು ಚೆನ್ನೈಯ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಅದಕ್ಕೂ ಮೊದಲು ನಾಳೆ(ಮೇ 22) ಇದೇ ಮೈದಾನದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್‌ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಜಯ ಗಳಿಸಿದವರು, ಮೇ 24ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ, ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ಹೈದರಾಬಾದ್ ತಂಡವನ್ನು ಎದುರಿಸಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...