ಏಕದಿನ ವಿಶ್ವಕಪ್ 2023 | ಬೆಂಗಳೂರಿನ ತಮ್ಮ ಪೂರ್ವಜರ ಬಗ್ಗೆ ಮೆಲುಕು ಹಾಕಿದ ರಚಿನ್ ರವೀಂದ್ರ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್‌ ಇಂಗ್ಲೆಂಡ್‌  ವಿರುದ್ಧ ಅಮೋಘ ಶತಕ ಬಾರಿಸಿ ತಂಡದ ಗೆಲುವಿಗೆ ಕಾರಾಣರಾದ ನ್ಯೂಜಿಲೆಂಡ್‌ನ ಉದಯೋನ್ಮುಖ ಆಟಗಾರ ರಚಿನ್‌ ರವೀಂದ್ರ ಪಂದ್ಯ ಗೆಲುವು ಸಾಧಿಸಿದ ನಂತರ ತಮ್ಮ ಪೂರ್ವಜರ ನಾಡು ಬೆಂಗಳೂರಿನ ಬಗ್ಗೆ ಮೆಲುಕು ಹಾಕಿದರು.

ಮಾಧ್ಯಮವೊಂದರ ಜೊತೆ ಮಾತನಾಡಿದ ರಚಿನ್‌, ವಿಶ್ವಕಪ್‌ನಲ್ಲಿ ಅವಕಾಶ ನೀಡಿದ್ದಕ್ಕೆ ಖಂಡಿತಾ ನನಗೆ ಸಂತೋಷವಾಗುತ್ತದೆ. ನನ್ನ ಆಟದ ಬಗ್ಗೆ ಆಟಗಾರರು ಹಾಗೂ ಪ್ರೇಕ್ಷಕರು ಪ್ರೋತ್ಸಾಹ ನೀಡಿದ್ದಕ್ಕೆ ಖುಷಿ ಆಗುತ್ತಿದೆ. ಪೂರ್ಣ ಟೂರ್ನಮೆಂಟ್‌ನಲ್ಲೂ ಇದೇ ರೀತಿಯ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದರು.

“ಇಂಗ್ಲೆಂಡ್ ಚಾಂಪಿಯನ್‌ ಹಾಗೂ ಪ್ರಬಲ ತಂಡವಾಗಿದ್ದು, ನಾವು ಆ ತಂಡದ ವಿರುದ್ಧ ಗೆದ್ದಿದ್ದಕ್ಕೆ ಹೆಮ್ಮೆಯಿದೆ. ಕೆಲವು ಬಾರಿ ನಾವು ಮೇಲುಗೈ ಸಾಧಿಸಿದರೆ, ಇನ್ನುಳಿದ ಸಂದರ್ಭದಲ್ಲಿ ಇಂಗ್ಲೆಂಡ್ ಜಯ ಸಾಧಿಸುತ್ತದೆ. ನನಗೆ ಸೂಪರ್ ಸ್ಟಾರ್ ಆಟಗಾರ ಆಗುವ ಆಸೆಯಿಲ್ಲ. ತಂಡದ ಆಟಗಾರನಾಗಿ ನನ್ನ ಆಟವನ್ನು ಆಡುತ್ತೇನೆ. ತಂಡದಲ್ಲಿ ಕೇನ್‌ ವಿಲಿಯಮ್ಸ್‌ನ್ ಹಾಗೂ ಟಾಮ್‌ ಲಾಥಂ ಅವರಂಥ ಆಟಗಾರರು ಸೂಪರ್‌ ಸ್ಟಾರ್‌ ಆಟಗಾರರಾಗಿದ್ದಾರೆ. ನಾನು ಬೆಂಗಳೂರಿಗೆ ಬಂದಾಗ ನನ್ನ ಪುರ್ವಜರಾದ ಅಜ್ಜ-ಅಜ್ಜಿಯವರ ಮನೆಗೆ ಭೇಟಿ ನೀಡುತ್ತೇನೆ. ಇಲ್ಲಿನ ದಿನಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ” ಎಂದು ರಚಿನ್‌ ರವೀಂದ್ರ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಬೆಂಗಳೂರಿನವರಾದ ರಚಿನ್ ರವೀಂದ್ರ ಅವರ ಪೋಷಕರು 90 ರ ದಶಕದಲ್ಲಿ ಕೆಲಸದ ನಿಮಿತ್ತ ನ್ಯೂಜಿಲೆಂಡ್‌ಗೆ ತೆರಳಿ ಸದ್ಯ ಅಲ್ಲಿನ ನಾಗರಿಕರಾಗಿದ್ದಾರೆ.

ನವೆಂಬರ್‌ 4ನೇ ತಾರೀಖಿನಂದು ಬೆಂಗಳೂರಿನಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್‌ ಆಡಲಿದೆ. ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ(ಅ.05) ಇಂಗ್ಲೆಂಡ್‌ ವಿರುದ್ಧ ಕಿವೀಸ್ ತಂಡ 9 ವಿಕೆಟ್‌ಗಳ ಜಯ ಸಾಧಿಸಿತ್ತು.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಕನ್ನಡಿಗ ರಚಿನ್ ರವೀಂದ್ರ ಶತಕ ವೈಭವ; ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್‌ಗೆ ಗೆಲುವು

ಮೊದಲ ಕ್ರಮಾಂಕದಲ್ಲಿ ಬಂದು ಆಟವಾಡಿದ್ದ ರಚಿನ್ ರವೀಂದ್ರ 96 ಚೆಂಡುಗಳಲ್ಲಿ 5 ಭರ್ಜರಿ ಸಿಕ್ಸರ್‌ಗಳು ಹಾಗೂ 11 ಬೌಂಡರಿಗಳೊಂದಿಗೆ 123ರನ್‌ ಬಾರಿಸಿ ಅಜೇಯರಾಗಿ ಉಳಿದರು. ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿದ್ದಕ್ಕಾಗಿ ಪಂದ್ಯ ಶ್ರೇಷ್ಠ ಪುರಸ್ಕಾರಕ್ಕೂ ಭಾಜನರಾಗಿದ್ದರು. ಬೌಲಿಂಗ್‌ನಲ್ಲೂ ಕೂಡ ಒಂದು ವಿಕೆಟ್ ಕಬಳಿಸಿ ಯಶಸ್ವಿಯಾಗಿದ್ದರು.

ರಚಿನ್‌ಗೆ ಉತ್ತಮ ಜೊತೆಯಾಟ ನೀಡಿದ ಡೆವೊನ್ ಕಾನ್ವೇ 121 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 19 ಬೌಂಡರಿಗಳೊಂದಿಗೆ 152 ರನ್‌ ಪೇರಿಸಿ ಅಜೇಯರಾದರು. ಇವರಿಬ್ಬರು ಮುರಿಯದ ಎರಡನೇ ವಿಕೆಟ್ ಜೊತೆಯಾಟಕ್ಕೆ 272 ರನ್‌ ಕಲೆ ಹಾಕಿದರು.

ಇಂಗ್ಲೆಂಡ್‌ ನೀಡಿದ್ದ 283 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ ತಂಡ 36.2 ಓವರ್‌ಗಳಲ್ಲಿ ಜಯ ತನ್ನದಾಗಿಸಿಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...