ಐಪಿಎಲ್ : ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 6 ರನ್‌ಗಳ ರೋಚಕ ಜಯ

Date:

ಕೊನೆಯ ಓವರ್‌ನವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡವು 6 ರನ್‌ಗಳಿಂದ ರೋಚಕವಾಗಿ ಗೆದ್ದು ಬೀಗಿದೆ

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ತಂಡವು 9 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತ್ತು. ಬಳಿಕ ಈ ಗುರಿಯನ್ನು ಸಾಧಿಸಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ, 6 ರನ್‌ಗಳ ಅಂತರದಿಂದ ಸೋಲು ಒಪ್ಪಿಕೊಂಡಿದೆ.

ಕೊನೆಯ ಓವರ್‌ನಲ್ಲಿ ಚೆನ್ನೈಗೆ ಗೆಲ್ಲಲು 20 ರನ್‌ಗಳ ಅವಶ್ಯಕತೆ ಇದ್ದಾಗ ರಾಜಸ್ಥಾನ ರಾಯಲ್ಸ್ ತಂಡದ ಪರವಾಗಿ ಕೊನೆಯ ಓವರ್ ಎಸೆದ ಸಂದೀಪ್ ಶರ್ಮಾ ಕೇವಲ 14 ರನ್‌ ಮಾತ್ರ ನೀಡಿ, ತಮ್ಮ ತಂಡದ ಪರ ಹೀರೋ ಎನಿಸಿಕೊಂಡರು. ಕೊನೆಯ ಓವರ್‌ನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ವಿಕೆಟ್ ಪಡೆದದ್ದು, ಪಂದ್ಯವು ರಾಜಸ್ಥಾನದ ಗೆಲುವಿಗೆ ಕಾರಣವಾಯಿತು. ಬೌಂಡರಿ ಗೆರೆಯ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಶಿಮ್ರಾನ್ ಹೆಟ್ಮಾಯರ್ ಅದ್ಭುತ ಕ್ಯಾಚ್ ಪಂದ್ಯದ ಗತಿಯನ್ನೇ ಬದಲಿಸಿತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿರುದ್ಧ ನಡೆದಿದ್ದ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ರನ್‌ಗಳ‌ ಅಂತರದಿಂದ ಸೋಲುವ ಮೂಲಕ, ತವರಿನ ಮೈದಾನದಲ್ಲಿ ತೀವ್ರ ಮುಖಭಂಗ ಅನುಭವಿಸಿತ್ತು. ಈ ಪಂದ್ಯದಲ್ಲಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸುಮಾರು 17 ವರ್ಷಗಳ ನಂತರ ಚೆನ್ನೈನಲ್ಲಿ ಗೆಲುವು ಸಾಧಿಸಿತ್ತು.

ಗುವಾಹಟಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ ಗೆಲುವು ಸಾಧಿಸುವ ಮೂಲಕ ಕೊನೆಗೂ ಈ ಬಾರಿಯ ಸೀಸನ್‌ನ ಮೊದಲ ಗೆಲುವನ್ನು ದಾಖಲಿಸಿಕೊಂಡಿದೆ. ಈವರೆಗೆ ರಾಜಸ್ಥಾನ ಮೂರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಸೋಲು ಅನುಭವಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...