ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

Date:

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ವಿರೋಚಿತವಾಗಿ ಸೋಲನುಭವಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ ತಂಡ ಯಾವುದೇ ಬ್ಯಾಟರ್‌ಗಳ ಅರ್ಧಶತಕವಿಲ್ಲದೇ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್‌ಗಳ ಸಾಧಾರಣ ಮೊತ್ತ ಗಳಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 148 ರನ್‌ಗಳ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನತ್ತಿದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವು, 19.5 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡರೂ ಕೂಡ, ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.

ಕೊನೆಯ ಓವರ್‌ನಲ್ಲಿ ಗೆಲುವಿಗೆ 10 ರನ್‌ಗಳ ಅವಶ್ಯಕತೆ ಇದ್ದಾಗ ಶಿಮ್ರಾನ್ ಹೆಟ್ಮಾಯರ್ ಎರಡು ಸಿಕ್ಸರ್ ಬಾರಿಸುವ ಮೂಲಕ ರೋಚಕ ಗೆಲುವಿಗೆ ಕಾರಣರಾದರು. ಶಿಮ್ರಾನ್ ಹೆಟ್ಮಾಯರ್ ಕೇವಲ 10 ಎಸೆತಗಳಲ್ಲಿ ಅಮೂಲ್ಯ 27 ರನ್‌ಗಳನ್ನು ಬಾರಿಸುವ ಮೂಲಕ ಮಿಂಚಿದರು.

ಪಂಜಾಬ್ ನೀಡಿದ್ದ ಗುರಿ ಸಾಧಾರಣವಾಗಿದ್ದರೂ ಕೂಡ ರಾಜಸ್ಥಾನ್‌ನ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು. ಕೊನೆಯ ಮೂರು ಓವರ್‌ಗಳಲ್ಲಿ ಪಂಜಾಬ್ ಬಿಗು ಬೌಲಿಂಗ್ ನಡೆಸಿದ ಹಿನ್ನೆಲೆಯಲ್ಲಿ ಪಂದ್ಯವು ರೋಚಕತೆಯ ಕಡೆಗೆ ಸಾಗಿತಾದರೂ, ಕೊನೆಯಲ್ಲಿ ಗೆಲುವು ರಾಜಸ್ಥಾನದ್ದಾಯಿತು.

ರಾಜಸ್ಥಾನ ಪರ ಬ್ಯಾಟಿಂಗ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ 39 ರನ್, ತನುಷ್ ಕೋಟ್ಯಾನ್ 24, ರಿಯಾನ್ ಪರಾಗ್ 23, ಸಂಜು ಸ್ಯಾಮ್ಸನ್ 18, ರೋವ್‌ಮನ್ ಪೊವೆಲ್ 11 ಹಾಗೂ ಧ್ರುವ್ ಜುರೆಲ್ 6 ರನ್ ಗಳಿಸಿದರು.

ಪಂಜಾಬ್ ಪರ ಬೌಲಿಂಗ್‌ನಲ್ಲಿ ರಬಾಡಾ ಹಾಗೂ ಸ್ಯಾಮ್ ಕರನ್ 2 ವಿಕೆಟ್ ಪಡೆದರೆ, ಅರ್ಷ್‌ದೀಪ್ ಸಿಂಗ್, ಲಿವಿಂಗ್‌ಸ್ಟನ್, ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ ಆಡಿರುವ ಆರು ಪಂದ್ಯಗಳ ಪೈಕಿ ಒಂದು ಸೋಲು ಹಾಗೂ ಐದು ಗೆಲುವಿನೊಂದಿಗೆ 10 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...