ಐಪಿಎಲ್ 2023 | ಬೌಲ್ಟ್, ಅಶ್ವಿನ್‌ ದಾಳಿಗೆ ಡೆಲ್ಲಿ ಪತನ; ವಾರ್ನರ್‌ ಪಡೆಗೆ ಸತತ ಮೂರನೇ ಸೋಲು

Date:

ವೇಗದ ಬೌಲರ್‌ ಟ್ರೆಂಟ್ ಬೌಲ್ಟ್ ಹಾಗೂ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್‌, ಆರ್‌ ಚಾಹಲ್ ಅವರ ದಾಳಿಗೆ ಸಿಲುಕಿದ ಡೆಲ್ಲಿ ಕ್ಯಾಪಿಟಲ್ಸ್ 57 ರನ್‌ಗಳ ಅಂತರದಲ್ಲಿ ಸೋಲಿಗೆ ಶರಣಾಯಿತು.

ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 16ನೇ ಆವೃತ್ತಿಯ 11ನೇ ಪಂದ್ಯದಲ್ಲಿ ರಾಜಸ್ಥಾನ್‌ ನೀಡಿದ 200 ನ್‌ಗಳ ಸವಾಲನ್ನು ಬೆನ್ನಟ್ಟಿದ ಡೆಲ್ಲಿ ತಂಡ 9 ವಿಕೆಟ್ ನಷ್ಟಕ್ಕೆ 142 ರನ್‌ಗಳಷ್ಟೆ ಗಳಿಸಲು ಶಕ್ತವಾಯಿತು. ಇದರೊಂದಿಗೆ ಡೆಲ್ಲಿ ಟೂರ್ನಿಯಲ್ಲಿ ಸತತ ಮೂರು ಸೋಲು ಕಂಡಿತು.

ನಾಯಕ ಡೇವಿಡ್ ವಾರ್ನರ್‌ ಅರ್ಧ ಶತಕ 65 (55 ಎಸೆತ, 7 ಬೌಂಡರಿ) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಲಿತ್‌ ಯಾದವ್ 38 (24 ಎಸೆತ, 5 ಬೌಂಡರಿ) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸಮನ್‌ಗಳ್ಯಾರೂ ಪ್ರತಿರೋಧ ತೋರದೆ ಪೆವಿಲಿಯನ್‌ ಕಡೆ ಹೆಜ್ಜೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರೆಂಟ್ ಬೌಲ್ಟ್ 29/3, ಆರ್‌ ಚಾಹಲ್ 27/3 ಹಾಗೂ ಆರ್‌ ಅಶ್ವಿನ್ 25/2 ವಿಕೆಟ್ ಕಬಳಿಸಿ ರಾಜಸ್ಥಾನ ಗೆಲುವಿನ ರೂವಾರಿಯಾದರು.

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್‌, ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಅವರ ಅರ್ಧ ಶತಕದ ಬಲದಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ ಕಲೆ ಹಾಕಿತು. ಇವರಿಬ್ಬರು ಯಶಸ್ವಿ ಜೈಸ್ವಾಲ್‌ 60 ರನ್‌ (31 ಚೆಂಡು,11 ಬೌಂಡರಿ, 1 ಸಿಕ್ಸರ್) ಮತ್ತು ಜಾಸ್‌ ಬಟ್ಲರ್‌ 79 ರನ್‌ (51 ಎಸೆತ, 11 ಬೌಂಡರಿ, 1 ಸಿಕ್ಸರ್) ಪೇರಿಸುವ ಮೂಲಕ ಮೊದಲ ವಿಕೆಟ್‌ಗೆ 8.3 ಓವರ್‌ಗಳಲ್ಲೇ 98 ರನ್‌ ಗಳಿಸಿದ್ದರು.

ಕೊನೆಯಲ್ಲಿ ಶಿಮ್ರಾನ್ ಹೆಟ್ಮೆಯರ್ 21 ಎಸೆತಗಳಲ್ಲಿ 4 ಸಿಕ್ಸರ್‌ ಮತ್ತು ಒಂದು ಬೌಂಡರಿ ಮೂಲಕ 39 ರನ್‌ ಗಳಿಸಿ ರಾಯಲ್ಸ್‌ ಮೊತ್ತವನ್ನು 199ಕ್ಕೆ ಕೊಂಡೊಯ್ದರು. ಡೆಲ್ಲಿ ಪರ ಮುಕೇಶ್‌ ಕುಮಾರ್‌ 2 ಮತ್ತು ಕುಲ್‌ದೀಪ್‌ ಯಾದವ್‌ ಮತ್ತು ರೋವ್‌ಮನ್‌ ಪೊವೆಲ್‌ ತಲಾ ಒಂದು ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...