ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

Date:

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡವು ಭರ್ಜರಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಸಂಜು ಸ್ಯಾಮ್ಸನ್ ಮತ್ತು ಧ್ರುವ್ ಜುರೆಲ್ ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ಮತ್ತೊಂದು ಗೆಲುವು ಸಾಧಿಸಿದ್ದು, ಆಡಿದ 9 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿ 16 ಅಂಕ ಸಂಪಾದಿಸುವುದರ ಜೊತೆಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡಿದೆ. ಸಂಜು ಸ್ಯಾಮ್ಸನ್ ನೇತೃತ್ವದ ತಂಡವು 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿಯೇ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ, ನಾಯಕ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಅವರ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ ಐದು ವಿಕೆಟ್‌ಗೆ 196 ರನ್ ಗಳಿಸಿತ್ತು. 197 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡವು, ನಾಲ್ಕನೇ ವಿಕೆಟ್‌ಗೆ ಸ್ಯಾಮ್ಸನ್ ಮತ್ತು ಜುರೆಲ್ ಅವರ ಶತಕದ ಜೊತೆಯಾಟದಿಂದಾಗಿ ಒಂದು ಓವರ್ ಬಾಕಿ ಇರುವಂತೆಯೇ ಮೂರು ವಿಕೆಟ್‌ಗಳಿಗೆ 199 ರನ್ ಗಳಿಸಿ ಜಯಗಳಿಸಿತು.

ಸ್ಮರ್ಧಾತ್ಮಕ ಮೊತ್ತದ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ 24 ರನ್ ಮತ್ತು ಜೋಸ್ ಬಟ್ಲರ್​ 34 ರನ್ ಗಳಿಸಿದರೆ, ರಿಯಾನ್ ಪರಾಗ್​ 14 ರನ್ ಮಾತ್ರ ಗಳಿಸಲಷ್ಟೇ ಶಕ್ತವಾದರು. ಪರಾಗ್​ ವಿಕೆಟ್ ಕಳೆದುಕೊಂಡ ಬಳಿಕ ಜೊತೆಯಾದ ನಾಯಕ ಸಂಜು ಸ್ಯಾಮ್ಸನ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್, ಅಗತ್ಯಕ್ಕೆ ತಕ್ಕಂತೆ ರನ್ ಕಸಿದರು.

ಈ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 121 ರನ್‌ಗಳ ಜೊತೆಯಾಟವಾಡಿದರು. ಇದಲ್ಲದೆ, ಇಬ್ಬರು ಸಹ ತಲಾ ಅರ್ಧಶತಕ ಬಾರಿಸಿದರು. ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಜುರೆಲ್ (52*), ಸೆಲ್ಯೂಟ್​ ಸೆಲೆಬ್ರೇಷನ್ ಮಾಡಿ ಗಮನ ಸೆಳೆದರು. ಸಂಜು ಇದೇ ಟೂರ್ನಿಯಲ್ಲಿ 4ನೇ ಅರ್ಧಶತಕ (71*) ಸಿಡಿಸಿದರು.

ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಯಶ್ ಠಾಕೂರ್, ಮಾರ್ಕಸ್ ಸ್ಟೋಯಿನಿಸ್ ಮತ್ತು ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಮಾತ್ರ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...