ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್

Date:

ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಒಸಿಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 44ನೇ ಸಾಮಾನ್ಯ ಸಭೆಯ ಸಮಯದಲ್ಲಿ ಚುನಾವಣೆ ನಡೆದು ರಣಧೀರ್ ಸಿಂಗ್ ಆಯ್ಕೆಯಾಗಿದ್ದಾರೆ.

ಐದು ಬಾರಿ ಒಲಿಂಪಿಕ್‌ನಲ್ಲಿ ಸ್ಪರ್ಧಿಸಿರುವ ಶೂಟರ್ ಸಿಂಗ್ ಅವರು ಅಧ್ಯಕ್ಷ ಸ್ಥಾನಕ್ಕೆ ಅರ್ಹತೆ ಪಡೆದ ಏಕೈಕ ಅಭ್ಯರ್ಥಿಯಾಗಿದ್ದರು. ಆದ್ದರಿಂದ ಅವರ ಆಯ್ಕೆಯು ಸರ್ವಾನುಮತದಿಂದ ನಡೆದಿದೆ. 2024ರಿಂದ 2028ರವರೆಗೆ ಅವರ ಅಧಿಕಾರವಧಿ ಇರಲಿದೆ.

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಇತಿಹಾಸ ಬರೆದ ಬಿಲ್ಲುಗಾರ ಹರ್ವಿಂದರ್ ಸಿಂಗ್; ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಗ್ ಅವರು 2021ರಿಂದ ಒಸಿಎಯ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಎಲ್ಲಾ 45 ಏಷ್ಯಾದ ರಾಷ್ಟ್ರಗಳ ಉನ್ನತ ಕ್ರೀಡಾ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಒಸಿಎ ಅಧ್ಯಕ್ಷರಾಗಿ ಸಿಂಗ್ ಅವರ ಅಧಿಕಾರ ಸ್ವೀಕಾರಕ್ಕೆ ಸಾಕ್ಷಿಯಾದರು.

ಪಂಜಾಬ್‌ನ ಪಟಿಯಾಲ ಮೂಲದವರಾದ ರಣಧೀರ್ ಸಿಂಗ್ ಕ್ರೀಡಾ ಕ್ಷೇತ್ರದಲ್ಲಿ ಹಲವಾರು ಸಾಧನೆಯನ್ನು ಮಾಡಿದ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಸಿಂಗ್ ಚಿಕ್ಕಪ್ಪ ಮಹಾರಾಜ ಯಾದವೀಂದ್ರ ಸಿಂಗ್ ಟೆಸ್ಟ್ ಕ್ರಿಕೆಟಿಗ ಮತ್ತು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸದಸ್ಯರಾಗಿದ್ದರು.

ಸಿಂಗ್ ಅವರ ತಂದೆ ಭಲೀಂದ್ರ ಸಿಂಗ್ ಕೂಡಾ ಕ್ರಿಕೆಟಿಗರಾಗಿದ್ದು 1947ರಿಂದ 1992ರವರೆಗೆ ಐಒಸಿ ಸದಸ್ಯರಾಗಿ ಸೇವೆ ಸಲ್ಲಿಸಿದರು. ರಣಧೀರ್ ಸ್ವತಃ 2001ರಿಂದ 2014ರವರೆಗೆ ಐಒಸಿ ಸದಸ್ಯರಾಗಿದ್ದರು. ಗೌರವ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...