ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ ಆರ್‌ಸಿಬಿ

Date:

ಆರ್‌ಸಿಬಿ ಐಪಿಎಲ್ ಗೆಲುವಿನ ಬಳಿಕ ನಡೆದ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಇತ್ತೀಚೆಗಷ್ಟೇ ಮೌನ ಮುರಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇದೀಗ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ನೆರವು ಘೋಷಿಸಿದೆ.

ಜೂನ್ 4ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪ್ರಶಸ್ತಿ ಆಚರಣೆಯ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು ಒಟ್ಟು ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಎಕ್ಸ್‌ನಲ್ಲಿ ಮೂರು ತಿಂಗಳ ಬಳಿಕ ಪೋಸ್ಟ್ ಮಾಡಿದ್ದು, ಆರ್‌ಸಿಬಿ ಕೇರ್ಸ್‌ ಬಗ್ಗೆ ಘೋಷಣೆ ಮಾಡಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಎಕ್ಸ್‌ನಲ್ಲಿ ಮತ್ತೆ ಪೋಸ್ಟ್ ಮಾಡಿರುವ ಆರ್‌ಸಿಬಿ, “ಜೂನ್ 4 ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ” ಎಂದು ಹೇಳಿದೆ.

ಹಾಗೆಯೇ, “ನಾವು ನೀಡುವ ಯಾವುದೇ ಸಹಾಯ ಅವರನ್ನು ಹಿಂದಿರುಗಿಸಿಕೊಟ್ಟಂತೆ ಆಗದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ” ಎಂದಿದೆ.

“ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯಾಗಿರುತ್ತದೆ. ಆರ್‌ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...