ಚೆನ್ನೈ ಸೋಲಿಸಿ ಆರ್‌ಸಿಬಿ ಪ್ಲೇ ಆಫ್‌ಗೆ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ

Date:

ಪ್ಲೇ-ಆಫ್‌ ಪ್ರವೇಶ ಕಾರಣಕ್ಕೆ ಕೊನೆ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ ಸಲ ಕಪ್‌ ನಮ್ದು ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ 27 ರನ್‌ಗಳ ಗೆಲುವು ದಾಖಲಿಸಿತು. ಒಂದು ವೇಳೆ ಪಂದ್ಯ ಸೋತು 201 ರನ್‌ ಗಳಿಸಿದ್ದರೂ ಚೆನ್ನೈ ಪ್ಲೇ-ಆಫ್‌ ಪ್ರವೇಶಿಸಲು ಸಾಧ್ಯವಾಗುತ್ತಿತ್ತು. ಆದರೆ ಆರ್‌ಸಿಬಿ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಚೆನ್ನೈ ಪ್ಲೇ-ಆಫ್‌ ಕನಸಿಗೂ ತಣ್ಣೀರು ಬಿದ್ದಿತು. ಕೇವಲ 10 ರನ್‌ಗಳ ಅಂತರದಲ್ಲಿ ಗಾಯಕ್‌ವಾಡ್‌ ಪಡೆ ಪ್ಲೇ-ಆಫ್‌ನಿಂದ ಮುಗ್ಗರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುತ್ತಿದ್ದಂತೆಯೇ ರಸ್ತೆಗಿಳಿದಿರುವ ಅಭಿಮಾನಿಗಳು, ಪಟಾಕಿಗಳನ್ನು ಸಿಡಿಸುವ ಮೂಲಕ ಕಪ್ ಗೆದ್ದಷ್ಟೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಮಂಗಳೂರು ಸೇರಿದಂತೆ ದೇಶ ಹಾಗೂ ಕರ್ನಾಟಕದ ಹಲವೆಡೆ ಅಭಿಮಾನಿಗಳು ರಸ್ತೆಗೆ ಇಳಿದು, ಖುಷಿಯಿಂದ ನೃತ್ಯ ಮಾಡಿ, ಸಂಭ್ರಮಿಸಿದರು. ಒಂದು ಕಡೆ ಆರ್‌ಸಿಬಿ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದರೆ, ಚೆನ್ನೈ ಹಾಗೂ ಧೋನಿ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನು ಓದಿದ್ದೀರಾ? ಫೀನಿಕ್ಸ್‌ನಂತೆ ಎದ್ದು ಬಂದ ಆರ್‌ಸಿಬಿ ಪ್ಲೇ-ಆಫ್‌ಗೆ; ಸಿಎಸ್‌ಕೆ ಮನೆಗೆ

ಕೆಲವು ಮಂದಿ ಸಂಭ್ರಮಾಚರಣೆಯ ವಿಡಿಯೋಗಳನ್ನು ಪೋಸ್ಟ್ ಮಾಡಿ, ಆರ್‌ಸಿಬಿಯ ಅಭಿಮಾನಿಗಳು ಪ್ಲೇ ಆಫ್‌ಗೆ ಹೋದದ್ದನ್ನು ಇಷ್ಟೊಂದು ಸಂಭ್ರಮಾಚರಣೆ ಮಾಡುತ್ತಿರುವುದನ್ನು ನೋಡಿದರೆ, ಒಂದು ವೇಳೆ ಫೈನಲ್ ಪ್ರವೇಶಿಸಿ, ಕಪ್ ಗೆದ್ದರೆ ಹೇಗಿರಬಹುದು” ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಇಂದಿನ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿ, ವೀಕ್ಷಿಸಿದ್ದರು. ಆರ್‌ಸಿಬಿ ಗೆದ್ದು, ಪ್ಲೇ ಆಫ್‌ ಪ್ರವೇಶಿಸುತ್ತಿದ್ದಂತೆಯೇ ಅಭಿನಂದನೆ ಸಲ್ಲಿಸಿದರಲ್ಲದೇ, ‘ಇದು ಆರ್‌ಸಿಬಿಯ ಹೊಸ ಅಧ್ಯಾಯ’ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

 

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...