ಐಪಿಎಲ್ | 17 ವರ್ಷಗಳ ‘ಚೆನ್ನೈ ವನವಾಸ’ ಅಂತ್ಯ: ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

Date:

ಚೆನ್ನೈನ ಎಂ.ಎಂ. ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 17 ವರ್ಷಗಳಿಂದ ಅನುಭವಿಸುತ್ತಿದ್ದ ಸೋಲಿನ ವನವಾಸದಿಂದ ಕೊನೆಗೂ ಮುಕ್ತಿ ಪಡೆದಿದೆ. ಜಯ ದಾಖಲಿಸಿ ಯಶಸ್ವಿಯಾಗಿದೆ.

ಚಿದಂಬರಂ ಸ್ಟೇಡಿಯಂನಲ್ಲಿ ಇಂದು(ಮಾ.28) ನಡೆದ ಐಪಿಎಲ್ ಪಂದ್ಯದಲ್ಲಿ ರುತುರಾಜ್ ಗಾಯಕ್‌ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 50 ರನ್‌ಗಳ ಅಂತರದಿಂದ ಭರ್ಜರಿಯಾಗಿ ಸೋಲಿಸುವ ಮೂಲಕ ಕೊನೆಗೂ ಸುದೀರ್ಘ 17 ವರ್ಷಗಳ ಬಳಿಕ ಗೆಲುವಿನ ಲಯಕ್ಕೆ ಮರಳಿದೆ. ಐಪಿಎಲ್ ಆರಂಭವಾಗಿದ್ದ 2008ರಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಕೊನೆಯ ಬಾರಿಗೆ ಗೆದ್ದಿತ್ತು. ಆ ಬಳಿಕ ಯಾವುದೇ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ, ನೂತನ ನಾಯಕ ರಜತ್ ಪಾಟೀದಾರ್ ಅವರ ಅರ್ಧಶತಕದ ನೆರವಿನಿಂದ 197 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ, ಈ ಗುರಿಯನ್ನು ತಲುಪಲು ವಿಫಲವಾದ ಸಿಎಸ್‌ಕೆ, ಆರ್‌ಸಿಬಿಯ ಕರಾರುವಾಕ್ಕಾದ ಬೌಲಿಂಗ್ ದಾಳಿಗೆ ತುತ್ತಾಗಿ 146 ರನ್‌‌‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಆರ್‌ಸಿಬಿ 50 ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟಿತವಾದ ಬೌಲಿಂಗ್ ನಡೆಸಿದ ಆರ್‌ಸಿಬಿ ಬೌಲಿಂಗ್ ವಿಭಾಗವು, ಸಿಎಸ್‌ಕೆಯ ಬ್ಯಾಟರ್‌ಗಳು ರನ್ ಗಳಿಸಲು ಪರದಾಡುವಂತೆ ಮಾಡಿದರು. ತವರಿನ ಮೈದಾನ ಮತ್ತು ಅಭಿಮಾನಿಗಳ ಪ್ರೋತ್ಸಾಹದ ಬಲದಿಂದ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಚೆನ್ನೈ, 50 ರನ್‌ಗಳ ಅಂತರದಿಂದ ಸೋಲೊಪ್ಪುವ ಮೂಲಕ ಹಿನ್ನಡೆ ಅನುಭವಿಸಿತು. ಗೆಲುವು ಸಾಧಿಸುವ ಹಂಬಲದಿಂದ ಮೈದಾನಕ್ಕೆ ಕಿಕ್ಕಿರಿದು ಬಂದಿದ್ದ ಚೆನ್ನೈ ಅಭಿಮಾನಿಗಳು, ಸಪ್ಪೆ ಮೋರೆ ಹಾಕಿಕೊಂಡು ಮನೆಗೆ ತೆರಳಿದರು.

ಸಿಎಸ್‌ಕೆ ಪರ ರಚಿನ್ ರವೀಂದ್ರ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದ ರಾಹುಲ್ ತ್ರಿಪಾಠಿ, ಜೋಶ್ ಹ್ಯಾಝಲ್‌ವುಡ್ ಎಸೆದ ಮೊದಲ ಓವರ್‌‌ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ ನಾಯಕ ರುತುರಾಜ್ ಕೂಡ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿ, ಪೆವಿಲಿಯನ್ ಕಡೆಗೆ ಮರಳಿದರು. ಆ ಬಳಿಕ ಕ್ರೀಸ್‌ಗೆ ಬಂದ ಸ್ಯಾಮ್ ಕರನ್, ದೀಪಕ್ ಹೂಡಾ, ಶಿವಂ ದುಬೆ, ಅಶ್ವಿನ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಕೊನೆಯಲ್ಲಿ ರವೀಂದ್ರ ಜಡೇಜಾ 25 ರನ್, ಮಹೇಂದ್ರ ಸಿಂಗ್ ಧೋನಿ 30 ರನ್ ಗಳಿಸಿದರು. ರಚಿನ್ ರವೀಂದ್ರ 41 ರನ್ ಗಳಿಸುವ ಮೂಲಕ ಚೆನ್ನೈ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ಆರ್‌ಸಿಬಿ ಪರ ಬೌಲಿಂಗ್‌ನಲ್ಲಿ ಜೋಶ್ ಹ್ಯಾಝಲ್‌ವುಡ್ 3, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟನ್ ತಲಾ ಎರಡು ವಿಕೆಟ್ ಪಡೆದುಕೊಂಡರೆ, ಭುವನೇಶ್ವರ್ ಕುಮಾರ್ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು. ಸತತವಾಗಿ ಎರಡು ಪಂದ್ಯದಲ್ಲಿ ಗೆದ್ದಿರುವ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...