ಫೀನಿಕ್ಸ್‌ನಂತೆ ಎದ್ದು ಬಂದ ಆರ್‌ಸಿಬಿ ಪ್ಲೇ-ಆಫ್‌ಗೆ: ಚೆನ್ನೈ ಸೂಪರ್ ಕಿಂಗ್ಸ್‌ ಮನೆಗೆ

Date:

ಸರ್ವಾಂಗೀಣ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿ ಪ್ಲೇ-ಆಫ್‌ಗೆ ಪ್ರವೇಶಿಸಿದೆ. ಕೊನೆಯವರೆಗೂ ಹೋರಾಟ ನಡೆಸಿದರೂ ಕೂಡ ಚೆನ್ನೈ ಸೂಪರ್ ಕಿಂಗ್ಸ್‌ ಮನೆಗೆ ಹೋಗಿದೆ. ಆ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಇತಿಹಾಸ ಬರೆದಿದೆ. ಕೇವಲ 0.07 ರನ್‌ರೇಟ್ ಅಂತರದಲ್ಲಿ ಫೀನಿಕ್ಸ್‌ನಂತೆ ಎದ್ದು ಬರುವ ಮೂಲಕ ಪ್ಲೇ-ಆಫ್‌ ಪ್ರವೇಶಿಸಿದ್ದಲ್ಲದೇ, ಹೊಸ ಅಧ್ಯಾಯ ಬರೆದಿದೆ.

ಐಪಿಎಲ್‌ನ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ‘ಮಾಡು ಇಲ್ಲವೇ ಮಡಿ’ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈಗೆ 219 ರನ್‌ಗಳ ಸವಾಲಿನ ಗುರಿ ನೀಡಿತ್ತು. ಈ ಪಂದ್ಯವನ್ನು ಆರ್‌ಸಿಬಿ ಗೆಲ್ಲಬೇಕಿತ್ತಲ್ಲದೇ, ಚೆನ್ನೈ ತಂಡವನ್ನು 200 ರನ್‌ ಗಡಿ ದಾಟದಂತೆ ನೋಡಿಕೊಳ್ಳಬೇಕಿತ್ತು. ಅದನ್ನು ಕೊನೆಗೂ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಅಭಿಮಾನಿಗಳ ಬೃಹತ್ ದಂಡೇ ಹೊತ್ತುಕೊಂಡಿರುವ ಆರ್‌ಸಿಬಿಯು, ರನ್‌ರೇಟ್ ಆಧಾರದಲ್ಲಿ ಪ್ಲೇ-ಆಫ್ ಪ್ರವೇಶಿಸಿದೆ. ಸತತ 6ನೇ ಗೆಲುವಿನೊಂದಿಗೆ ಆರ್‌ಸಿಬಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡುವ ಮೂಲಕ, ಯಾರೂ ಕೂಡ ನಿರೀಕ್ಷಿಸದ್ದನ್ನು ಅಕ್ಷರಶಃ ಸಾಧಿಸಿ ತೋರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಕೊನೆಯ ಓವರ್‌ನಲ್ಲಿ ಪ್ಲೇ-ಆಫ್ ಪ್ರವೇಶಿಸಲು ಕೇವಲ 17 ರನ್ ಬೇಕಿತ್ತು. ಈ ವೇಳೆ ಆರ್‌ಸಿಬಿ ಬೌಲರ್ ಯಶ್ ದಯಾಳ್ ಬೌಲಿಂಗ್ ದಾಳಿಗಿಳಿದರು. ಕ್ರೀಸ್‌ನಲ್ಲಿದ್ದ ಮಹೇಂದ್ರ ಸಿಂಗ್ ಧೋನಿ, ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸುವ ಮೂಲಕ ಆರ್‌ಸಿಬಿ ಕನಸಿಗೆ ತಣ್ಣೀರೆರಚಿದರು. ಮುಂದಿನ ಎಸೆತದಲ್ಲಿ ಧೋನಿ ವಿಕೆಟ್ ಪಡೆಯುವಲ್ಲಿ ಯಶ್ ದಯಾಳ್ ಯಶಸ್ವಿಯಾದರು.

ಬಳಿಕದ ನಾಲ್ಕು ಎಸೆತದಲ್ಲಿ ಕೇವಲ 7 ರನ್ ನೀಡಿ ಸಿಎಸ್‌ಕೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಪ್ರಮುಖ ಫಿನಿಶರ್ ಎನಿಸಿಕೊಂಡಿದ್ದ ಧೋನಿ ಅವರ ವಿಕೆಟ್‌ ಅನ್ನು ಪಡೆದುಕೊಂಡಿದ್ದು, ಪಂದ್ಯದಲ್ಲಿ ಪ್ರಮುಖ ತಿರುವು ಪಡೆಯಿತು.

ಚೆನ್ನೈ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್ ಗಳಿಸಲು ಶಕ್ತವಾಯಿತಲ್ಲದೇ, 27 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಪಂದ್ಯ ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಫಾಫ್ ಡು ಪ್ಲೆಸಿ ಅತ್ಯದ್ಭುತ ಕ್ಯಾಚ್

15ನೇ ಓವರ್‌ ಎಸೆದ ಮೊಹಮ್ಮದ್ ಸಿರಾಜ್ ಅವರ ಕೊನೆಯ ಎಸೆತದಲ್ಲಿ ಮಿಚೆಲ್ ಸ್ಯಾಂಟ್ನರ್ ಬೌಂಡರಿ ಕಡೆಗೆ ಬಾರಿಸಿದ್ದ ಬಾಲನ್ನು ಅತ್ಯದ್ಭುತ ಕ್ಯಾಚ್ ಆಗಿ ಪರಿವರ್ತಿಸುವಲ್ಲಿ ಯಶಸ್ವಿಯಾದ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿ, ಪಂದ್ಯದಲ್ಲಿ ಪ್ರಮುಖ ತಿರುವಿಗೆ ಕಾರಣವಾದರು.

ಆರ್‌ಸಿಬಿ ನೀಡಿದ್ದ 219 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್, ಎರಡನೇ ಇನಿಂಗ್ಸ್‌ನ ಮೊದಲ ಓವರ್‌ನ ಮೊದಲ ಎಸೆತದಲ್ಲಿ ನಾಯಕ ಋತುರಾಜ್ ಗಾಯಕ್ವಾಡ್ ವಿಕೆಟನ್ನು ಕಳೆದುಕೊಂಡು ಆಘಾತಕಾರಿ ಆರಂಭ ಪಡೆದಿತ್ತು.‌ ಆರ್‌ಸಿಬಿ ಪರ ಮೊದಲ ಓವರ್ ಅನ್ನು ಆಲರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಎಸೆದಿದ್ದರು.

ಆ ಬಳಿಕ ರಚಿನ್ ರವೀಂದ್ರ(61 ರನ್, 37 ಎಸೆತ, 5 ಬೌಂಡರಿ, 3 ಸಿಕ್ಸರ್)ಸರ್ವಾಧಿಕ ಸ್ಕೋರ್ ಗಳಿಸಿದರು.

ರವೀಂದ್ರ ಜಡೇಜ ಔಟಾಗದೆ 42 ರನ್, (22 ಎಸೆತ, 3 ಬೌಂಡರಿ, 3 ಸಿಕ್ಸರ್), ಅಜಿಂಕ್ಯ ರಹಾನೆ 33 ರನ್, ಹಾಗೂ ಧೋನಿ 25 ರನ್ ಗಳಿಸುವ ಮೂಲಕ ಎರಡಂಕೆಯ ಸ್ಕೋರ್ ಗಳಿಸಿದರು.

ಆರ್‌ಸಿಬಿ ಪರವಾಗಿ ಬೌಲಿಂಗ್‌ನಲ್ಲಿ ಯಶ್ ದಯಾಳ್ 2 ವಿಕೆಟ್, ಕ್ಯಾಮರೂನ್ ಗ್ರೀನ್, ಫರ್ಗೂಸನ್, ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಮೊದಲ ಎಸೆತದಿಂದ ಕೊನೆಯ ಎಸೆತದಿಂದ ಕೊನೆಯ ಎಸೆತದವರೆಗೂ ಬಹಳ ಕುತೂಹಲದಿಂದ ಕೂಡಿದ್ದ ಈ ನಾಕೌಟ್ ಪಂದ್ಯದಲ್ಲಿ, ರೋಚಕವಾಗಿ ಗೆದ್ದ ಆರ್‌ಸಿಬಿ ತಂಡ ಪ್ಲೇ-ಆಫ್ ಪ್ರವೇಶಿಸಿದರೆ, ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸೋಲಿನೊಂದಿಗೆ 2024ರ ಐಪಿಎಲ್ ಅಭಿಯಾನವನ್ನು ಕೊನೆಗೊಳಿಸಿತು.

ಚೆನ್ನೈಯ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ, ಈ ಬಾರಿ ಕೊನೆಯದಾಗಿ ಆಡುತ್ತಿರುವುದಾಗಿ ಹೇಳಲಾಗುತ್ತಿದೆಯಾದರೂ, ಈ ಬಗ್ಗೆ ಧೋನಿಯವರು ಅಧಿಕೃತವಾಗಿ ಎಲ್ಲೂ ಹೇಳಿಕೆ ನೀಡಿಲ್ಲ. ಕಾದುನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...