18 ವರ್ಷಗಳ ಕಪ್ ಬರದಿಂದ ಮುಕ್ತಿ: ಅಂತೂ ಆರ್‌ಸಿಬಿ ಚಾಂಪಿಯನ್

Date:

ಐಪಿಎಲ್‌ನ ಹಾಟ್ ಫೇವರೀಟ್, ಅಭಿಮಾನಿಗಳ ಅಚ್ಚುಮೆಚ್ಚಿನ ತಂಡ ಆರ್‌ಸಿಬಿ ಕೊನೆಗೂ ಚಾಂಪಿಯನ್ ಆಗಿದೆ.

18 ವರ್ಷಗಳ ಕಾಲ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕನಸು ಕೊನೆಗೂ ನನಸಾಗಿದೆ. ಅಹ್ಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 18ನೇ ಸೀಸನ್‌ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ರೋಚಕವಾಗಿ ಸೋಲಿಸುವ ಮೂಲಕ ಚಾಂಪಿಯನ್ ಆಗಿದೆ.

ಆರ್‌ಸಿಬಿ ಚಾಂಪಿಯನ್ ಆಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಆನಂದ ಬಾಷ್ಪದಿಂದ ಮುಳುಗೇಳತೊಡಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ಸಂಘಟಿತ ಪ್ರದರ್ಶನ ನೀಡಿ, ಪಂಜಾಬ್‌ ಕಿಂಗ್ಸ್ ತಂಡವನ್ನು ಮಣಿಸಿ, ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ದಾಖಲೆಯನ್ನು ಬರೆಯಿತು. ಮೂರು ಐಪಿಎಲ್‌ ಫೈನಲ್‌ನಲ್ಲಿ ನಿರಾಸೆ ಹೊಂದಿದ್ದ ಆರ್‌ಸಿಬಿ, ನಾಲ್ಕನೇ ಪ್ರಯತ್ನದಲ್ಲಿ ಯಶಸ್ವಿಯಾಗಿ ಟ್ರೋಫಿ ಎತ್ತುವಲ್ಲಿ ಸಫಲವಾಯಿತು. ಈ ಮೂಲಕ ರಜತ್‌ ಪಾಟಿದಾರ್‌ ಮುಂದಾಳತ್ವದ ಆರ್‌ಸಿಬಿ ಐಪಿಎಲ್ ದಾಖಲೆಯ ಪುಟಕ್ಕೆ ದಾಪುಗಾಲು ಹಾಕಿತು.

ಗೆಲ್ಲಲು 191 ರನ್‌ಗಳ ಸವಾಲಿನ ಗುರಿಯನ್ನು ಪಡೆದಿದ್ದ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್‌, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕೈಕೊಟ್ಟ ಪರಿಣಾಮ ಅಂತಿಮವಾಗಿ 6 ರನ್‌ಗಳ ಅಂತರದಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗವು ಸಂಘಟಿತ ದಾಳಿಗೆ ತುತ್ತಾದ ಪಂಜಾಬ್ ಬ್ಯಾಟಿಂಗ್, ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 184 ರನ್ ಗಳಿಸಲಷ್ಟೇ ಶಕ್ತವಾಯಿತು.

ಆರ್‌ಸಿಬಿ ಪರ ಉತ್ತಮ ಬೌಲಿಂಗ್ ನಡೆಸಿದ ಕೃನಾಲ್ ಪಾಂಡ್ಯ ಫೈನಲ್ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...