WPL ಫೈನಲ್ | ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ: 113 ರನ್‌ಗಳಿಗೆ ಆಲೌಟ್

Date:

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ತಂಡದ ನಡುವೆ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್(WPL 2024) ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ, 114 ರನ್‌ಗಳ ಸಾಧಾರಣ ಸವಾಲು ನೀಡಿದೆ. ಆರ್‌ಸಿಬಿ ಫೈನಲ್‌ ಪಂದ್ಯವನ್ನು ಗೆದ್ದರೆ, ಈ ಬಾರಿ ಕಪ್ ನಮ್ದೇ ಆಗಲಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆರ್​ಸಿಬಿ ಆರಂಭದಲ್ಲಿ ಬೌಲಿಂಗ್‌ನಲ್ಲಿ ವಿಫಲವಾಯಿತಾದರೂ, ಎಂಟನೇ ಓವರ್ ಎಸೆದ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತ ಬಳಿಕ ಡೆಲ್ಲಿ 113 ರನ್‌ಗಳಿಗೆ ಆಲೌಟ್‌ ಆಗಿದೆ. 64 ರನ್‌ ವೇಳೆ ಶೂನ್ಯ ವಿಕೆಟ್ ಕಳೆದುಕೊಂಡಿದ್ದ ಡೆಲ್ಲಿ ತಂಡ, 18.3 ಓವರ್‌ಗಳಲ್ಲಿ ಆಲೌಟ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ ಪರವಾಗಿ ಶಫಾಲಿ ವರ್ಮಾ, 44 ರನ್‌ ಗಳಿಸಿ ಮಿಂಚಿದರು. ಬೌಲಿಂಗ್‌ನಲ್ಲಿ ಶ್ರೇಯಾಂಕ ಪಾಟೀಲ್ 4 ವಿಕೆಟ್, ಸೋಫಿ ಮೋಲಿನೆಕ್ಸ್‌ 3 ವಿಕೆಟ್ ಕಿತ್ತರೆ, ಆಶಾ ಶೋಭನ 2 ವಿಕೆಟ್ ಗಳಿಸುವಲ್ಲಿ ಸಫಲರಾದರು.

ಪಂದ್ಯ ತಿರುಗಿಸಿದ ಸೋಪಿ ಮೋಲಿನೆಕ್ಸ್ ಎಸೆದ 8ನೇ ಓವರ್

ಸೋಫಿ ಮೋಲಿನೆಕ್ಸ್‌ ಎಸೆದ ಎಂಟನೇ ಓವರ್‌ ಪಂದ್ಯವು ಆರ್‌ಸಿಬಿ ಪರವಾಗಿ ವಾಲಲು ನೆರವಾಯಿತು. ಮೊದಲ ಎಸೆತದ ಎದುರಿಸಿದ ದೆಹಲಿ ತಂಡದ ಶಫಾಲಿ ವರ್ಮಾ ಅವರು ದೊಡ್ಡ ಹೊಡೆತಕ್ಕೆ ಯತ್ನಿಸಿ, ಕ್ಯಾಚಿತ್ತು ನಿರ್ಗಮಿಸಿದರು. ಆ ಬಳಿಕ ಕ್ರೀಸ್‌ಗೆ ಬಂದ ಜೆಮೀಮಾ ರೋಡ್ರಿಗಸ್ ತಾನೆದುರಿಸಿದ ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ನಂತರ ಕ್ರೀಸ್‌ಗೆ ಬಂದ ಕ್ಯಾಪ್ಸೆ ಕೂಡ ಕ್ಲೀನ್ ಬೌಲ್ಡ್ ಆದರು. ಆ ಮೂಲಕ ಆರ್‌ಸಿಬಿ ಬೌಲರ್ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತು ದೆಹಲಿ ತಂಡಕ್ಕೆ ಆಘಾತ ನೀಡಿದರು.

 

 

ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಆರ್‌ಸಿಬಿ

ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಎಲಿಮಿನೇಟರ್​ ಪಂಡ್ಯ ಆಡಿದ್ದ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು.

ಇದನ್ನು ಓದಿದ್ದೀರಾ? WPL ಫೈನಲ್ | 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌

ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಈ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಅಂದರೆ ಆರ್​ಸಿಬಿ ತಂಡ ಡೆಲ್ಲಿ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆರ್‌ಸಿಬಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...