ಹಿಂದಿ ಭಾಷಿಕರಿಗೆ ಆರ್‌ಸಿಬಿ ಟ್ವಿಟ್ಟರ್ ಖಾತೆ; ಕನ್ನಡಿಗರಿಂದ ತೀವ್ರ ಆಕ್ರೋಶ

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್‌ನಲ್ಲಿ ಹಿಂದಿ ಖಾತೆಯನ್ನು ಪ್ರಾರಂಭಿಸಿದ್ದು ಇದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಐಪಿಎಲ್ ಫ್ರಾಂಚೈಸಿ ಕನ್ನಡ ಮಾತನಾಡುವವರ ಮೇಲೆ ಹಿಂದಿಯನ್ನು ಹೇರುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

ಆದರೆ ಕೆಲವು ಅಭಿಮಾನಿಗಳು ಆರ್‌ಸಿಬಿಯ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆರ್‌ಸಿಬಿ ಜಾಗತಿಕವಾಗಿ ಅಭಿಮಾನಿಗಳನ್ನು ಹೊಂದಿದೆ. ಹಾಗಾಗಿ ಹಿಂದಿ ಖಾತೆಯು ಆ ಭಾಷೆಯ ಬೆಂಬಲಿಗರಿಗೆ ಮಾಹಿತಿ ನೀಡುತ್ತದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಇಂಗ್ಲಿಷ್ ಮತ್ತು ಕನ್ನಡ ಖಾತೆಗಳನ್ನು ಹೊಂದಿರುವ ಆರ್ ಸಿಬಿ ಭಾನುವಾರ ಹಿಂದಿ ಖಾತೆ ಆರಂಭಿಸಿದೆ. ಈ ಖಾತೆ ಪ್ರಸ್ತುತ 2,600ಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿದೆ. ಈ ಖಾತೆಯ ಮೊದಲ ಪೋಸ್ಟ್‌ನಲ್ಲಿ ವಿರಾಟ್ ಕೊಹ್ಲಿಯ ವಿಡಿಯೋವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆರ್​ಸಿಬಿ ತಂಡಕ್ಕೆ ಬಂದ ಹೊಡಿ ಬಡಿ ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್, ಇವರ ಬ್ಯಾಟಿಂಗ್ ಅಬ್ಬರ ಹೇಗಿದೆ ಗೊತ್ತಾ?

ಆದರೆ ಆರ್‌ಸಿಬಿಐ ಈ ನಡೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. “ಇದು ಕನ್ನಡ ಸಂಸ್ಕೃತಿಗೆ ಅಗೌರವ ತಂದಿದೆ” ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ಆರ್‌ಸಿಬಿಯನ್ನು ಉತ್ತರ ಭಾರತಕ್ಕೆ ತೆರಳಲು ಹೇಳಿದ್ದಾರೆ. ಇನ್ನು ಕೆಲವರು ಆರ್‌ಸಿಬಿ ಹೆಸರಿಂದ ಬೆಂಗಳೂರು ಎಂಬ ಪದವನ್ನು ತೆಗೆದುಹಾಕಬೇಕು ಎಂದಿದ್ದಾರೆ. ಇನ್ನು ಕೆಲವರು ಇತರರಿಗೆ ಯಾಕೆ ಹಿಂದಿ ಖಾತೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದೆಡೆ ಕೆಲವು ಆರ್‌ಸಿಬಿಯ ಕ್ರಮವನ್ನು ಸ್ವಾಗತಿಸಿದ್ದಾರೆ. ಕೆಲವರು ಅಭಿಮಾನಿಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಹೆಚ್ಚಿನ ರಾಜ್ಯದಲ್ಲಿ ಹಿಂದಿ ಮಾತನಾಡಲಾಗುತ್ತದೆ. ಹಾಗಾಗಿ ಈ ಕ್ರಮವು ಹಿಂದಿ ಮಾತನಾಡುವ ಅಭಿಮಾನಿಗಳಿಗೆ ಆರ್‌ಸಿಬಿಯನ್ನು ಹತ್ತಿರಕ್ಕೆ ತರುತ್ತದೆ ಎಂದು ಇನ್ನೂ ಕೆಲವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...