ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡಕ್ಕೆ ಸಿಎಂ, ಡಿಸಿಎಂ ಅವರಿಂದ ಸನ್ಮಾನ

Date:

ನಮ್ಮ ರಾಜ್ಯಕ್ಕೆ ಆರ್‌ಸಿಬಿ ತಂಡದ ಹುಡುಗರು ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, “ಪಂಜಾಬ್ ಕಿಂಗ್ಸ್ ವಿರುದ್ದ ಅಭೂತಪೂರ್ವ ಗೆಲುವು ಸಾಧಿಸಿದ ಆರ್‌ ಸಿ ಬಿ ತಂಡಕ್ಕೆ ಗೌರವ ಸಲ್ಲಿಸಲು ಸರ್ಕಾರ ಯೋಚಿಸುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

“ಆರ್ ಸಿ ಬಿ ತಂಡಕ್ಕೆ ನಾವು ಗೌರವ ಸಲ್ಲಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಗೆ ಯಾವ ರೀತಿಯಲ್ಲಿ ಸಮಸ್ಯೆ ಆಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆ ಮಾಡುವ ಬಗ್ಗೆ ಆರ್ ಸಿ ಬಿ ತಂಡದವರು ಶೆಡ್ಯೂಲ್ಡ್ ಹಾಕಿಕೊಂಡಿರಬಹುದು. ಆದರೆ, ಪರಿಸ್ಥಿತಿಯನ್ನು ಇಲ್ಲಿ ನಿಯಂತ್ರಣ ಮಾಡುವವರು ನಾವಲ್ಲವೇ? ಗೃಹ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಮಂಗಳವಾರ ರಾತ್ರಿಯೇ ಆರ್ ಸಿ ಬಿ ಗೆಲುವನ್ನು ಜನರು ಸಂಭ್ರಮದಿಂದ ಆಚರಿಸಿದ್ದರು. ಇಂದು ವಿಕ್ಟರಿ ಪರೇಡ್ ಮೂಲಕ ಬೆಂಗಳೂರಿನ ಬೀದಿಗಳಲ್ಲಿ ಆರ್ ಸಿ ಬಿ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಲು ಸರ್ಕಾರ ಅವಕಾಶ ನೀಡುತ್ತಾರೋ ಇಲ್ಲವೋ ಎಂಬುವುದು ಇನ್ನು ಅಧಿಕೃತವಾಗಿಲ್ಲ.

ಆರ್.ಸಿ.ಬಿ ತಂಡಕ್ಕೆ ಮುಖ್ಯಮಂತ್ರಿಗಳ ಅಭಿನಂದನೆ

ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...