ಐಪಿಎಲ್ 2025 | ಇಂದು ಆರ್‌ಸಿಬಿ – ಆರ್‌ಆರ್‌ ಪಂದ್ಯ; ತವರಿನಲ್ಲಿ ಈ ಬಾರಿ ಬೆಂಗಳೂರಿಗೆ ಒಲಿಯುತ್ತಾ ಗೆಲುವು?

Date:

ಐಪಿಎಲ್ 18ನೇ ಆವೃತ್ತಿಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇದುವರೆಗೆ ಆರ್‍‌ಸಿಬಿ ತವರಿನಲ್ಲಿ ಆಡಿದ ಮೂರು ಪಂದ್ಯಗಳನ್ನು ಸೋತಿದೆ. ಹೀಗಾಗಿ ಈ ಪಂದ್ಯ ರೋಚಕತೆ ಪಡೆದಿದೆ.

ಜೈಪುರದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಆರ್‍‌ಸಿಬಿ 9 ವಿಕೆಟ್‌ಗಳ ಭಾರಿ ಅಂತರದಿಂದ ಸೋಲಿಸುವ ಮೂಲಕ ಅದ್ಭುತ ಗೆಲುವು ದಾಖಲಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ ರಾಜಸ್ಥಾನ ವಿರುದ್ಧ ಆರ್‍‌ಸಿಬಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಕಳೆದ ಪಂದ್ಯದ ಸೋಲಿಗೆ ರಾಜಸ್ಥಾನ ತಂಡ ಕೂಡ ಸೇಡು ತಿರಿಸಿಕೊಳ್ಳಲು ಸಜ್ಜಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಇಲ್ಲಿವರೆಗೆ ಉತ್ತಮವಾಗಿದೆ. ತಂಡದ ಏಕೈಕ ಚಿಂತೆಯೆಂದರೆ ತವರಿನಲ್ಲಿ ಗೆಲುವು ಕಾಣದಿರುವುದು. ಐಪಿಎಲ್ 2025 ರಲ್ಲಿ ಆರ್‍‌ಸಿಬಿ 8 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಜಯಗಳಿಸಿದೆ. ಈ ಎಲ್ಲ ವಿಜಯಗಳು ತವರಿನ ಹೊರಗೆ ದೊರಕಿವೆ. ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ತಂಡದ ಪ್ರದರ್ಶನ ತವರು ಮತ್ತು ಹೊರಗೆ ಎರಡರಲ್ಲೂ ಉತ್ತಮವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್‌ನಲ್ಲಿ ಕೆ ಎಲ್ ರಾಹುಲ್ ದಾಖಲೆ ಮುರಿದ ಶುಭಮನ್‌ ಗಿಲ್‌

ರಾಜಸ್ಥಾನ ಇದುವರೆಗೆ 8 ಪಂದ್ಯಗಳಲ್ಲಿ 2 ರಲ್ಲಿ ಮಾತ್ರ ಗೆದ್ದಿದ್ದು, 6 ರಲ್ಲಿ ಸೋಲನ್ನು ಕಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂದ್ಯಕ್ಕೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಗಾಯದ ಕಾರಣ ಹೊರಗುಳಿದಿದ್ದಾರೆ. ಇದು ತಂಡಕ್ಕೆ ಹಿನ್ನಡೆ ಉಂಟು ಮಾಡಲಿದೆ. ಕಳೆದ ಎರಡು ಪಂದ್ಯಗಳಲ್ಲಿ ರಾಜಸ್ಥಾನ ಕೊನೆಯ ಓವರ್‍‌ಗಳಲ್ಲಿ ಸೋತಿದೆ. ಆರ್‍‌ಸಿಬಿ ಒಂದು ಪಂದ್ಯವನ್ನು ಸೋತು ಇನ್ನೊಂದರಲ್ಲಿ ಗೆಲುವು ಸಾಧಿಸಿದೆ.

ಐಪಿಎಲ್ ಇತಿಹಾಸದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ತೀವ್ರ ಪೈಪೋಟಿ ನಡೆದಿವೆ. ಆದಾಗ್ಯೂ, ಬೆಂಗಳೂರು ತಂಡ ಮೇಲುಗೈ ಸಾಧಿಸಿದೆ. ಉಭಯ ತಂಡಗಳ ನಡುವೆ ಒಟ್ಟು 33 ಪಂದ್ಯಗಳು ನಡೆದಿವೆ. ಇದರಲ್ಲಿ ಬೆಂಗಳೂರು 16 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ ರಾಯಲ್ಸ್ 14 ರಲ್ಲಿ ಜಯ ಕಂಡಿದೆ. 3 ಪಂದ್ಯಗಳು ಯಾವುದೇ ಫಲಿತಾಂಶ ಬಂದಿಲ್ಲ.

ಇತ್ತೀಚಿನ ದಿನಗಳಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬದಲಾಗಿದೆ. ಮೊದಲು ಈ ಪಿಚ್‌ನಲ್ಲಿ ಬಿಗ್ ಸ್ಕೋರ್ ಪಂದ್ಯಗಳು ನಡೆಯುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಪಿಚ್ ಬೌಲರ್ಸ್‌ಗೆ ಹೆಚ್ಚು ಅನುಕೂಲವಾಗಿದೆ. ಪಂದ್ಯದಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡುವುದು ಸೂಕ್ತವಾಗಿದೆ. ಈ ಪಿಚ್‌ನಲ್ಲಿ 175 ಕ್ಕಿಂತ ಹೆಚ್ಚಿನ ರನ್‌ಗಳನ್ನು ಉತ್ತಮ ಮೊತ್ತವೆಂದು ಪರಿಗಣಿಸಬಹುದು.

ಉಭಯ ತಂಡಗಳ ಬಳಗ:

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ರಾಜಸ್ಥಾನ ರಾಯಲ್ಸ್: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಶುಭಂ ದುಬೆ, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ.

ಪಂದ್ಯದ ಸಮಯ: ಸಂಜೆ 7.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...