ಐಪಿಎಲ್ | ಬೆಂಗಳೂರಿನ ಸೋಲಿಗೆ ದೆಹಲಿಯಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

Date:

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೆಂಗಳೂರಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲಿಸಿದ್ದಕ್ಕೆ ಪ್ರತಿಯಾಗಿ ಆರ್‌ಸಿಬಿ ತಂಡವು ಡೆಲ್ಲಿಯನ್ನು ಅವರ ತವರು ಮೈದಾನದಲ್ಲೇ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದೆ.

ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದಿದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡು, ಡೆಲ್ಲಿ ತಂಡವನ್ನು 162 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದರು.

ಬಳಿಕ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ ತಂಡವು, 26 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಕ್ರೀಸ್‌ನಲ್ಲಿದ್ದ ‘ದೆಹಲಿಯ ಮನೆಮಗ’ ವಿರಾಟ್ ಕೊಹ್ಲಿಯವರಿಗೆ ಜೊತೆಯಾದ ಕೃನಾಲ್ ಪಾಂಡ್ಯ, ಉತ್ತಮ ಜೊತೆಯಾದ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಸಫಲರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರಾಟ್ ಕೊಹ್ಲಿ ಹಾಗೂ ಕೃನಾಲ್ ಪಾಂಡ್ಯ ಜೋಡಿಯು 119 ರನ್‌ಗಳ ಜೊತೆಯಾದ ನಡೆಸಿದರು. ವಿರಾಟ್ ಕೊಹ್ಲಿ 51 ರನ್ ಗಳಿಸಿ, ಮಿಂಚಿದರು. ಕೃನಾಲ್ ಪಾಂಡ್ಯ ಔಟಾಗದೇ 73 ರನ್ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಇಂದಿನ ಪಂದ್ಯದಲ್ಲಿನ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ತಂಡವು, 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...