ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ನಿರ್ವಹಿಸಿದ್ದು ‘DNA’ ಕಂಪನಿ: ₹15 ಕೋಟಿ ಖರ್ಚು?

Date:

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದದ್ದು ‘ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ ಪ್ರೈವೆಟ್‌ ಲಿಮಿಟೆಡ್‌’ ಕಂಪನಿ. ಈ ಕಂಪನಿಗೆ ಕಾರ್ಯಕ್ರಮ ನಿರ್ವಹಣೆಗಾಗಿ ಸರ್ಕಾರವು 15 ಕೋಟಿ ರೂ. ಪಾವತಿಸಿತ್ತು ಎಂದು ವರದಿಯಾಗಿದೆ.

‘ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ ಪ್ರೈವೆಟ್‌ ಲಿಮಿಟೆಡ್‌’ ಕಂಪನಿಯನ್ನು ಡಾ. ಟಿ. ವೆಂಕಟ್ ವರ್ಧನ್ ಅವರು ಆರಂಭಿಸಿದ್ದರು. ಪ್ರಸ್ತುತ ಅವರೇ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರೂ ಆಗಿದ್ದಾರೆ. ಅಲ್ಲದೆ, ಕಂಪನಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರು ಕುಟುಂಬಸ್ಥರು ಹೂಡಿಕೆ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಇದಕ್ಕೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಕಂಪನಿಯು ಸುಮಾರು 20 ವರ್ಷಗಳಿಂದ ನಾನಾ ರೀತಿಯ ಹೈ-ಪ್ರೊಫೈಲ್ ಕಾರ್ಯಕ್ರಮಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಗುತ್ತಿಗೆ ಪಡೆಯುತ್ತಿದೆ ಎಂದು ಹೇಳಲಾಗಿದೆ. ಇದೇ ಕಂಪನಿಗೆ ಆರ್‌ಸಿಬಿ ಸಂಭ್ರಮೋತ್ಸವವನ್ನು ಆಯೋಜಿಸಲು ಸರ್ಕಾರವು 15 ಕೋಟಿ ರೂ. ಪಾವತಿಸಿತ್ತು ಎಂಬುದಾಗಿ ಗೊತ್ತಾಗಿದೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಭ್ರಮಾಚರಣೆ ಕಾರ್ಯಕ್ರಮವನ್ನು ನಿರ್ವಹಿಸುವಲ್ಲಿ ಸರ್ಕಾರ, ಪೊಲೀಸ್‌ ಇಲಾಖೆ, ಆರ್‌ಸಿಬಿ ಫ್ರಾಂಚೈಸಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಡಿಎನ್‌ಎ ಸಂಸ್ಥೆಗಳು ಎಡವಿವೆ. ಈ ಎಲ್ಲರ ನಡುವಿನ ಸಂವಹನ ಮತ್ತು ಸಮನ್ವಯದ ಕೊರತೆಯಿಂದ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ವ್ಯಕ್ತಿಚಿತ್ರ | ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಎಂಥವರು?

ಕಾಲ್ತುಳಿತ ದುರಂತದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ತಂಡವು ಡಿಎನ್‌ಎ ಕಂಪನಿಯ ಸುನಿಲ್ ಮ್ಯಾಥ್ಯು, ಕಿರಣ್ ಹಾಗೂ ಸುಮಂತ್ ಮತ್ತು ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಆರ್‌ಸಿಬಿ ಫ್ರಾಂಸೈಸಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ವಜಾಗೊಳಿಸಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು, ದುರಂತ ಘಟನೆಯ ‘ನೈತಿಕ ಹೊಣೆ’ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ್ ಮತ್ತು ಖಜಾಂಚಿ ಇ.ಎಸ್ ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...