ಏಷ್ಯಾ ಕಪ್‌ ಟಿ20: ರಿಚಾ, ಹರ್ಮನ್‌ಪ್ರೀತ್ ಸ್ಫೋಟಕ ಆಟಕ್ಕೆ ಮುಗ್ಗರಿಸಿದ ಯುಎಇ

Date:

ವಿಕೆಟ್‌ ಕೀಪರ್‌ ರಿಚಾ ಘೋಷ್‌ ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್ ಸ್ಫೋಟಕ ಆಟಕ್ಕೆ ಯುಎಇ ಮುಗ್ಗರಿಸಿದೆ. ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ‘ಎ’ ಗುಂಪಿನಲ್ಲಿ  ಯುಎಇ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ 78 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಈ ಗೆಲುವಿನೊಂದಿಗೆ ಸತತ ಎರಡನೇ ಜಯ ದಾಖಲಿಸಿರುವ ಟೀಂ ಇಂಡಿಯಾ ಸೆಮಿಫೈನಲ್‌ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಪಂದ್ಯದಲ್ಲಿ ನಾಯಕಿ ಹರ್ಮನ್‌ಪ್ರೀತ್‌ ಕೌರ್ (ಅಜೇಯ 66) ಹಾಗೂ ರಿಚಾ ಘೋಷ್ (ಅಜೇಯ 64) ಬಿರುಸಿನ ಅರ್ಧಶತಕಗಳ ನೆರವಿನಿಂದ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಐದು ವಿಕೆಟ್ ನಷ್ಟಕ್ಕೆ 201 ರನ್‌ಗಳ ಬೃಹತ್ ಮೊತ್ತ ಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸವಾಲನ್ನು ಬೆನ್ನಟ್ಟಿದ ಯುಎಇ ಏಳು ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಯುಎಇ ಪರ ಕವಿಶ ಈಗೋಡಗೆ ಅಜೇಯ 40 ಹಾಗೂ ನಾಯಕಿ ಈಶಾ ರೋಹಿತ್ ಒಝಾ 38 ರನ್ ಗಳಿಸಿದರು.

ಭಾರತದ ಪರ ದೀಪ್ತಿ ಶರ್ಮಾ ಎರಡು ವಿಕೆಟ್ ಕಬಳಿಸಿದರೆ , ಉಳಿದ ನಾಲ್ವರು ಬೌಲರ್‌ಗಳು ತಲಾ ಒಂದೊಂದು ವಿಕೆಟ್ ಕಿತ್ತರು.

ಈ ಸುದ್ದಿ ಓದಿದ್ದೀರಾ? ವಿಂಬಲ್ಡನ್ ಛಾಂಪಿಯನ್ ಕಾರ್ಲೋಸ್ ಅಲ್ಕರಾಜ್ – ವಿಶ್ವ ಟೆನಿಸ್ ಯುಗದ ಅದ್ಭುತ ಪ್ರತಿಭೆ

‘ಎ’ ಗುಂಪಿನಲ್ಲಿ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ಭಾರತ ನಾಲ್ಕು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಜುಲೈ 23ರಂದು ನೇಪಾಳದ ಸವಾಲನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ಏಳು ವಿಕೆಟ್ ಅಂತರದ ಜಯಗಳಿಸಿತ್ತು.

ಟಾಸ್‌ ಗೆದ್ದ ಯುಎಇ ಭಾರತವನ್ನು ಬ್ಯಾಟಿಂಗ್‌ ಆಹ್ವಾನಿಸಿತು. ಆರಂಭದಲ್ಲಿ ಶಫಾಲಿ ವರ್ಮಾ 18 ಎಸೆತಗಳಲ್ಲಿ 37 ರನ್ (5 ಬೌಂಡರಿ, 1 ಸಿಕ್ಸರ್) ಗಳಿಸಿ ಬಿರುಸಿನ ಆಟವಾಡಿದರು.

ಈ ಮಧ್ಯೆ ಸ್ಮೃತಿ ಮಂದಾನ (13) ಹಾಗೂ ದಯಾಲನ್ ಹೇಮಲತಾ (2) ನಿರಾಸೆ ಮೂಡಿಸಿದ ಕಾರಣ ಭಾರತ 52 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡ ತುಸು ಹಿನ್ನಡೆಗೊಳಗಾಯಿತು.

ಜೆಮಿಮಾ ರಾಡ್ರಿಗಸ್ ಸಹ 14 ರನ್ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ಆದರೆ ನಾಯಕಿ ಹರ್ಮನ್‌ಪ್ರೀತ್ ಕೌ‌ರ್ ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ ಬಿರುಸಿನ ಆಟವಾಡುವ ಮೂಲಕ ಬೃಹತ್ ಮೊತ್ತ ಪೇರಿಸಲು ನೆರವಾದರು.

ಹರ್ಮನ್‌ ಪ್ರೀತ್ ಹಾಗೂ ರಿಚಾ ಅರ್ಧಶತಕಗಳ ಸಾಧನೆಯೊಂದಿಗೆ ಐದನೇ ವಿಕೆಟ್‌ಗೆ 75 ರನ್‌ಗಳ ಅಮೂಲ್ಯ ಜೊತೆಯಾಟದಲ್ಲಿ ಭಾಗಿಯಾದರು. ಹರ್ಮನ್‌ಪ್ರೀತ್‌ ಕೌರ್ 47 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 66 ರನ್ ಗಳಿಸಿದರು.

ಮತ್ತೊಂದೆಡೆ ಸ್ಪೋಟಕ ಆಟವಾಡಿದ ರಿಚಾ ಕೇವಲ 26 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕದ ಸಾಧನೆ ಮಾಡಿದರು. ಕೇವಲ 29 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್‌ನೊಂದಿಗೆ 64 ರನ್ ಗಳಿಸಿ ಔಟಾಗದೆ ಉಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...