ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ | ರೋಹಿತ್ – ಶುಭ್‌ಮನ್ ಭರ್ಜರಿ ಶತಕ; ಭಾರತಕ್ಕೆ ಇನಿಂಗ್ಸ್ ಮುನ್ನಡೆ

Date:

ನಾಯಕ ರೋಹಿತ್ ಶರ್ಮಾ ಹಾಗೂ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್‌ ಅವರ ಭರ್ಜರಿ ಶತಕದೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 68 ರನ್‌ಗಳ ಮುನ್ನಡೆ ಸಾಧಿಸಿದೆ.

ಹಿಮಾಚಲ ಪ್ರದೇಶದ ಧರ್ಮಶಾಲದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದಾಟದಲ್ಲಿ ಟಿಂ ಇಂಡಿಯಾ ಭೋಜನ ವಿರಾಮದ ವೇಳೆಗೆ 65 ಓವರ್‌ಗಳಲ್ಲಿ ಮೂರು ವಿಕೆಟ್‌ ನಷ್ಟಕ್ಕೆ 290 ರನ್‌ ಪೇರಿಸಿದೆ. ಎರಡನೇ ವಿಕೆಟ್ ಜೊತೆಯಾಟದಲ್ಲಿ ರೋಹಿತ್ ಶರ್ಮಾ ಹಾಗೂ ಶುಭಮನ್‌ ಗಿಲ್ 164 ರನ್‌ಗಳ ಜೊತೆಯಾಟವಾಡಿದರು.

ರೋಹಿತ್‌ ಶರ್ಮಾ 161 ಚೆಂಡುಗಳಲ್ಲಿ 101 ರನ್‌ಗಳೊಂದಿಗೆ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ 12ನೇ ಶತಕ ಗಳಿಸಿದರು. ರೋಹಿತ್ ಅವರ ಸೊಗಸಾದ ಆಟದಲ್ಲಿ 13 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ನಾಯಕನಿಗೆ ಜೊತೆ ನೀಡಿದ ಶುಭಮನ್‌ಗಿಲ್ ತಮ್ಮ ಟೆಸ್ಟ್‌ ವೃತ್ತಿ ಜೀವನದ 4ನೇ ಶತಕ ಪೂರೈಸಿದರು. 150 ಎಸೆತಗಳನ್ನು ಎದುರಿಸಿದ ಅವರು 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು.

103 ರನ್‌ ಗಳಿಸಿದ ರೋಹಿತ್‌ ನಾಯಕ ಬೆನ್‌ ಸ್ಟೋಕ್ಸ್‌ ಬೌಲಿಂಗ್‌ನಲ್ಲಿ ಔಟಾದರು. ಶುಭಮನ್‌ ಗಿಲ್‌ ಆಂಡರ್‌ಸನ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು. ಕರ್ನಾಟಕದ ಆಟಗಾರ ದೇವದತ್‌ ಪಡೀಕಲ್‌(4) ಹಾಗೂ ಸರ್ಫರಾಜ್‌ ಖಾನ್ ಆಟವಾಡುತ್ತಿದ್ದಾರೆ.

ರೋಹಿತ್ ಹಲವು ದಾಖಲೆಗಳು

ಟೆಸ್ಟ್‌ ಮಾದರಿಯಲ್ಲಿ 12ನೇ ಶತಕಗಳನ್ನು ಪೇರಿಸಿರುವ ನಾಯಕ ರೋಹಿತ್ ಹಲವು ದಾಖಲೆಗಳನ್ನು ತಮ್ಮ ಮಡಿಲಿಗೆ ಸೇರಿಸಿಕೊಂಡರು. ಇಂಗ್ಲೆಂಡ್‌ ಪರ ಆರಂಭಿಕ ಆಟಗಾರನಾಗಿ 4 ಶತಕ ಗಳಿಸಿ ಸುನಿಲ್‌ ಗವಾಸ್ಕರ್‌ ದಾಖಲೆಯನ್ನು ಸರಿಗಟ್ಟಿದರು.

ಆರಂಭಿಕ ಆಟಗಾರನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 43 ಶತಕ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲೆರಡು ಸ್ಥಾನದಲ್ಲಿ ಡೇವಿಡ್ ವಾರ್ನರ್(49) ಹಾಗೂ ಸಚಿನ್‌ ತೆಂಡೂಲ್ಕರ್‌(45) ಇದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಸಂಕ್ಷಿಪ್ತ ಸ್ಕೋರ್

ಇಂಗ್ಲೆಂಡ್ ಮೊದಲ ಇನಿಂಗ್ಸ್ 218

ಭಾರತ ಮೊದಲ ಇನಿಂಗ್ಸ್ 290/3

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...