ಮೂರನೇ ಟೆಸ್ಟ್ | ರೋಹಿತ್, ಜಡೇಜಾ ಶತಕ: ಮಿಂಚಿದ ಸರ್ಫರಾಝ್ ಖಾನ್; ಟೀಮ್ ಇಂಡಿಯಾ ಉತ್ತಮ ಮೊತ್ತ

Date:

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ಆರಂಭಗೊಂಡಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿತ್ತು. ಆರಂಭದಲ್ಲೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತಾದರೂ, ರೋಹಿತ್, ಜಡೇಜಾ ಶತಕ ಹಾಗೂ ಸರ್ಫರಾಝ್ ಖಾನ್ ಅವರ ಅರ್ಧಶತಕದ ನೆರವಿನಿಂದ ಮೊದಲ ದಿನದಾಟದ ಮುಕ್ತಾಯದ ವೇಳೆ ಉತ್ತಮ ಮೊತ್ತ ದಾಖಲಿಸುವಲ್ಲಿ ಸಫಲವಾಗಿದೆ.

ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು ಟೀಮ್ ಇಂಡಿಯಾ 326 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ, ಆಲ್‌ರೌಂಡರ್ ರವೀಂದ್ರ ಜಡೇಜಾ ಶತಕ ಸಿಡಿಸಿ ಮಿಂಚಿದರೆ, ಪದಾರ್ಪಣೆ ಪಂದ್ಯದಲ್ಲೇ ಯುವ ಬ್ಯಾಟರ್ ಸರ್ಫರಾಜ್ ಖಾನ್ ಅರ್ಧ ಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್ ಶರ್ಮಾ ಅವರ 11ನೇ ಶತಕವಾಗಿದೆ. ಅವರು 131 ರನ್‌ಗಳಿಸಿ ಮಾರ್ಕ್ ವುಡ್‌ಗೆ ಔಟಾದರು. ಸರ್ಫರಾಜ್ ಖಾನ್ 62 ರನ್‌ಗಳಲ್ಲಿ ಆಡುತ್ತಿದ್ದಾಗ, ಜಡೇಜಾ ಅವರ ತಪ್ಪಿನಿಂದಾಗಿ ರನೌಟ್‌ಗೆ ಬಲಿಯಾದರು. 110 ರನ್ ಗಳಿಸಿರುವ ರವೀಂದ್ರ ಜಡೇಜಾ, ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇಂಗ್ಲೆಂಡ್ ಪರ ವೇಗಿ ಮಾರ್ಕ್ ವುಡ್ ಮೂರು ವಿಕೆಟ್ ಪಡೆದುಕೊಂಡರೆ, ಸ್ಪಿನ್ನರ್ ಹ್ಯಾಟ್ಲಿಗೆ ಒಂದು ವಿಕೆಟ್ ಗಳಿಸಿದ್ದಾರೆ.

ಆರಂಭಿಕ ಆಘಾತ ಅನುಭವಿಸಿದ್ದ ಟೀಮ್ ಇಂಡಿಯಾ

ರಾಜ್‌ಕೋಟ್‌ನಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ್ದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ಕಳೆದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ದ್ವಿಶತಕ ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ತಂಡದ ಗೆಲುವಿಗೆ ಸಹಕರಿಸಿದ್ದ ಯಶಸ್ವಿ ಜೈಸ್ವಾಲ್ (10), ಶುಭಮನ್ ಗಿಲ್ (0) ಬೇಗನೆ ಪೆವಿಲಿಯನ್ ಸೇರಿಕೊಂಡರು. ಆ ಬಳಿಕ ಬಂದ ರಜತ್ ಪಾಟೀದಾರ್ 5 ರನ್ ಗಳಿಸಿರುವಾಗಲೇ ಕ್ಯಾಚಿತ್ತು ನಿರ್ಗಮಿಸಿದರು.

202 ರನ್‌ಗಳ ಜೊತೆಯಾಟ ನಡೆಸಿದ ರೋಹಿತ್-ಜಡೇಜಾ

ರಜತ್ ಪಾಟೀದಾರ್ ಔಟಾದ ಬಳಿಕ ಕ್ರೀಸ್‌ನಲ್ಲಿದ್ದ ನಾಯಕ ರೋಹಿತ್ ಶರ್ಮಾರೊಂದಿಗೆ ಜೊತೆಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ರಕ್ಷಣಾತ್ಮಕ ಆಟವಾಡಿದರು. ಈ ಜೋಡಿಯು ನಾಲ್ಕನೇ ವಿಕೆಟ್‌ಗೆ 202 ರನ್‌ಗಳ ಜೊತೆಯಾಟ ನಡೆಸುವ ಮೂಲಕ, ತಂಡಕ್ಕೆ ಭದ್ರ ಬುನಾದಿ ಹಾಕುವಲ್ಲಿ ಸಫಲರಾದರು. ರೋಹಿತ್ ಶರ್ಮಾ 131 ರನ್ ಗಳಿಸಿ, ಔಟ್ ಆದರು.

ಜಡೇಜಾರ ಎಡವಟ್ಟಿನಿಂದ ಸರ್ಫರಾಝ್‌ ಖಾನ್‌ ರನೌಟ್‌: ಕ್ಯಾಪ್‌ ಬಿಸಾಕಿ ನಾಯಕ ರೋಹಿತ್‌ ಆಕ್ರೋಶ

ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನದ ಪದಾರ್ಪಣೆ ಪಂದ್ಯದಲ್ಲಿಯೇ ಅರ್ಧಶತಕ ಸಿಡಿಸಿ ಆಡುತ್ತಿದ್ದ ಸರ್ಫರಾಝ್ ಖಾನ್‌ ಅವರು ಸ್ಟ್ರೈಕ್‌ನಲ್ಲಿದ್ದ ರವೀಂದ್ರ ಜಡೇಜಾ ಮಾಡಿದ ಎಡವಟ್ಟಿನಿಂದ ರನ್‌ಔಟ್‌ ಆಗಬೇಕಾಯಿತು. ಆ ಮೂಲಕ ಚೊಚ್ಚಲ ಶತಕ ಸಿಡಿಸಬೇಕೆಂದು ಅಂದುಕೊಂಡಿದ್ದ ಯುವ ಬ್ಯಾಟ್ಸ್‌ಮನ್‌ಗೆ ಭಾರೀ ನಿರಾಶೆಯಾಯಿತು.

ಜಡೇಜಾರ ಎಡವಟ್ಟಿನಿಂದ ಸರ್ಫರಾಝ್‌ ಖಾನ್‌ ರನೌಟ್‌ ಆದದ್ದಕ್ಕೆ ಡ್ರೆಸ್ಸಿಂಗ್ ರೂಮಿನಲ್ಲಿದ್ದ ನಾಯಕ ರೋಹಿತ್‌ ಶರ್ಮಾ, ಜಡೇಜಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಯಿತು.

ಮತ್ತೊಂದೆಡೆ ತಮ್ಮ ಪುತ್ರನ ಪದಾರ್ಪಣೆ ಟೆಸ್ಟ್‌ ನೋಡಲು ಬಂದಿದ್ದ ಸರ್ಫರಾಝ್‌ ಖಾನ್ ತಂದೆ ನೌಶಾದ್ ಖಾನ್ ಹಾಗೂ ಪತ್ನಿ ಪತ್ನಿ ರೊಮಾನ ಝಹೂರ್ ಈ ವೇಳೆ ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...