ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

Date:

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ ಸೂಪರ್ 8ರ ಘಟ್ಟದ ಪಂದ್ಯದಲ್ಲಿ ‘ಹಿಟ್‌ಮ್ಯಾನ್’ ಖ್ಯಾತಿಯ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ ‘ಮೊದಲ ಆಟಗಾರ’ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ನಾಯಕ ಪಾತ್ರರಾಗಿದ್ದಾರೆ.

ಒಬ್ಬ ಆಟಗಾರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿರುವ ಪಟ್ಟಿಯಲ್ಲಿ ತನ್ನ ಮೊದಲ ಸ್ಥಾನವನ್ನು ಮತ್ತಷ್ಟು ವಿಸ್ತರಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ನಂತರದ ಎರಡನೇ ಸ್ಥಾನದಲ್ಲಿ 173 ಸಿಕ್ಸರ್ ಬಾರಿಸಿರುವ ನ್ಯೂಝಿಲ್ಯಾಂಡ್‌ನ ಮಾರ್ಟಿನ್ ಗಪ್ಟಿಲ್ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಇಂದಿನ ಮಹತ್ವದ ಪಂದ್ಯದಲ್ಲಿ 41 ಎಸೆತಗಳನ್ನು ಎದುರಿಸಿದ ನಾಯಕ ರೋಹಿತ್ ಶರ್ಮಾ ಭರ್ಜರಿ 8 ಸಿಕ್ಸರ್ ಹಾಗೂ 7 ಬೌಂಡರಿಯ ನೆರವಿನಿಂದ 92 ರನ್ ಗಳಿಸಿದ್ದಾಗ, ಮಿಚೆಲ್ ಸ್ಟಾರ್ಕ್‌ ಓವರ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಮೂಲಕ 8 ರನ್‌ಗಳಿಂದ ಶತಕ ವಂಚಿತರಾದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ಸಿಕ್ಸರ್‌

ರೋಹಿತ್ ಶರ್ಮಾ ಈವರೆಗೆ ಆಡಿರುವ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಜೂನ್ ತಿಂಗಳ ಆರಂಭದಲ್ಲಿ ರೋಹಿತ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ಸಿಕ್ಸರ್‌ಗಳನ್ನು ಪೂರೈಸಿದ್ದರು. 37ರ ಹರೆಯದ ಹಿಟ್‌ಮ್ಯಾನ್, ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ 52 ರನ್ ಗಳಿಸಿ ಈ ಸಾಧನೆ ಮಾಡಿದ್ದರು. ರೋಹಿತ್ ಎಲ್ಲ ಮಾದರಿಗಳಲ್ಲಿ 600 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 19 ಸಾವಿರ ರನ್ ಪೂರೈಸಿಕೊಂಡಿದ್ದಾರೆ.

2021ರಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್, ಎಲ್ಲ ಮಾದರಿಯಲ್ಲಿ 553  ಸಿಕ್ಸರ್‌ ಬಾರಿಸಿದ್ದ ಏಕೈಕ ಆಟಗಾರನಾಗಿದ್ದರು.

ಟಿ20 ಕ್ರಿಕೆಟ್‌: ಅತಿ ಹೆಚ್ಚು ಸಿಕ್ಸರ್‌ಗಳು

  1. ರೋಹಿತ್ ಶರ್ಮಾ(ಟೀಮ್ ಇಂಡಿಯಾ) – 150 ಇನ್ನಿಂಗ್ಸ್‌ಗಳಲ್ಲಿ 203*
  2. ಮಾರ್ಟಿನ್ ಗಪ್ಟಿಲ್(ನ್ಯೂಝಿಲ್ಯಾಂಡ್) – 118 ಇನ್ನಿಂಗ್ಸ್‌ಗಳಲ್ಲಿ 173
  3. ಜೋಸ್ ಬಟ್ಲರ್(ಇಂಗ್ಲೆಂಡ್) – 113 ಇನ್ನಿಂಗ್ಸ್‌ಗಳಲ್ಲಿ 137
  4. ಗ್ಲೆನ್ ಮ್ಯಾಕ್ಸ್‌ವೆಲ್(ಆಸ್ಟ್ರೇಲಿಯಾ) – 103 ಇನ್ನಿಂಗ್ಸ್‌ಗಳಲ್ಲಿ 133
  5. ನಿಕೋಲಸ್ ಪೂರನ್(ವೆಸ್ಟ್ ಇಂಡೀಸ್) – 87 ಇನ್ನಿಂಗ್ಸ್‌ಗಳಲ್ಲಿ 132

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...