ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರೋಹಿತ್ ಶರ್ಮಾ

Date:

ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ 27 ರನ್​ಗಳ ಗಡಿ ದಾಟುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20 ಸಾವಿರ ರನ್​ಗಳನ್ನು ಪೂರೈಸಿದ್ದಾರೆ.

ಈ ಮೂಲಕ ರೋಹಿತ್ ಶರ್ಮಾ ಭಾರತ ಪರ 20,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್​ಗೂ ಮೊದಲು, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ರನ್‌ಗಳ ಗಡಿಯನ್ನು ದಾಟಿದ ಭಾರತೀಯ ಕ್ರಿಕೆಟಿಗರಾಗಿದ್ದರು. ಇದೀಗ ರೋಹಿತ್ ಈ ಮೂವರು ದಿಗ್ಗಜರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇದನ್ನು ಓದಿದ್ದೀರಾ? ಇಮ್ರಾನ್ ಖಾನ್ | ಮೈದಾನದ ‘ಕಪ್ತಾನ’ನಿಂದ ಜೈಲಿನ ಕೈದಿಯವರೆಗೆ  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ 34,357 ರನ್‌ಗಳನ್ನು ಬಾರಿಸಿದ್ದರೆ, ವಿರಾಟ್ ಕೊಹ್ಲಿ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27,910 ರನ್‌ಗಳನ್ನು ದಾಖಲಿಸಿದ್ದಾರೆ. ರಾಹುಲ್ ದ್ರಾವಿಡ್ 24,208 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಈಗ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20,000 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ರೋಹಿತ್ ಕೂಡ ಸೇರಿದ್ದಾರೆ.

ರೋಹಿತ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಸಂಬಂಧಿಸಿದಂತೆ, ಅವರು 67 ಟೆಸ್ಟ್ ಪಂದ್ಯಗಳಲ್ಲಿ 12 ಶತಕಗಳು ಮತ್ತು 18 ಅರ್ಧಶತಕಗಳು ಸೇರಿದಂತೆ 4301 ರನ್‌ ಬಾರಿಸಿದ್ದಾರೆ. ಹಾಗೆಯೇ 278 ಏಕದಿನ ಪಂದ್ಯಗಳಲ್ಲಿ 33 ಶತಕಗಳು ಮತ್ತು 60 ಅರ್ಧಶತಕಗಳು ಸೇರಿದಂತೆ 11468 ರನ್ ಸಿಡಿಸಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ, ರೋಹಿತ್ 159 ಪಂದ್ಯಗಳಲ್ಲಿ 4231 ರನ್ ಗಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...