Viral Video| ಟಿ20 ವಿಶ್ವಕಪ್ ಗೆಲುವು: ಬಾರ್ಬಡೋಸ್ ಮೈದಾನದ ಮಣ್ಣು ಸವಿದ ರೋಹಿತ್ ಶರ್ಮಾ!

Date:

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ನಿಂದ ಸೋಲಿಸಿ ಭಾರತ ತಂಡವು ಚಾಂಪಿಯನ್ ಆಗುತ್ತಿದ್ದಂತೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದ ಮಣ್ಣು ಸವಿದಿದ್ದಾರೆ.

ಭಾರತ ತಂಡ ಗೆಲುವು ಕಾಣುತ್ತಿದ್ದಂತೆ ಹಲವರು ಸಂತೋಷದ ಕಣ್ಣೀರು ಹರಿಸುತ್ತಿದ್ದಂತೆ ರೋಹಿತ್ ಅವರು ತಾನು ನಾಯಕನಾಗಿ ವಿಶ್ವಕಪ್ ಅನ್ನು ಗೆದ್ದ ಪಿಚ್‌ನಿಂದ ಮಣ್ಣನ್ನು ತೆಗೆದು ಬಾಯಿಗೆ ಹಾಕಿ ಸವಿದು ತಮ್ಮ ಗೆಲುವಿನ ಕ್ಷಣಕ್ಕೆ ಮಣ್ಣನ್ನು ಭಾಗಿಯಾಗಿಸಿದ್ದಾರೆ.

ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಈ ವಿಡಿಯೋವನ್ನು ಐಸಿಸಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ರೋಹಿತ್ ಬಾರ್ಬಡೋಸ್ ಪಿಚ್‌ನಿಂದ ಮಣ್ಣನು ಎತ್ತಿ ಬಾಯಿಗೆ ಹಾಕಿರುವುದು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ವಿರಾಟ್ ಕೊಹ್ಲಿ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಾಯಕ ರೋಹಿತ್ ಶರ್ಮಾ

ಇನ್ನು ಈ ಪಂದ್ಯ ಅಂತ್ಯವಾದ ಬಳಿಕ ರೋಹಿತ್ ಪತ್ರಿಕಾಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದರು. ಅದಕ್ಕೂ ಮುನ್ನ ಟೀಮ್ ಇಂಡಿಯಾ ಚಾಂಪಿಯನ್ ಆಗುತ್ತಿದ್ದಂತೆಯೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು.

“ಟಿ20 ಪಂದ್ಯಗಳಿಂದ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ” ಎಂದು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್ ಶರ್ಮಾ ತಿಳಿಸಿದ್ದಾರೆ.

“ಇದು ನನ್ನ ಕೊನೆಯ ಪಂದ್ಯವೂ ಆಗಿತ್ತು. ಪ್ರಾಮಾಣಿಕವಾಗಿ, ನಾನು ಈ ಟಿ20 ಸ್ವರೂಪವನ್ನು ಆಡಲು ಪ್ರಾರಂಭಿಸಿದ ಸಮಯದಿಂದ ನಾನು ಸಿಕ್ಕಾಪಟ್ಟೆ ಖುಷಿಯಲ್ಲಿದ್ದೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ” ಎಂದು ಹೇಳಿದ್ದಾರೆ.

 

View this post on Instagram

 

A post shared by ICC (@icc)

“ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...