ರೋಹಿತ್-ಗಂಭೀರ್ ಡ್ರೆಸ್ಸಿಂಗ್ ರೂಂನಲ್ಲಿ ವಾಗ್ವಾದ; ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್

Date:

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 17 ರನ್ ಅಂತರದಲ್ಲಿ ಜಯ ಸಾಧಿಸಿದರೂ, ಪಂದ್ಯದ ನಂತರ ನಡೆದ ಒಂದು ದೃಶ್ಯವೇ ಹೆಚ್ಚು ಚರ್ಚೆಗೆ ಕಾರಣವಾಗಿದೆ. ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಡ್ರೆಸ್ಸಿಂಗ್ ರೂಮಿನಲ್ಲಿ ಗಂಭೀರವಾಗಿ ಮಾತನಾಡುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯದಲ್ಲಿ, ಮಾಜಿ ನಾಯಕ ರೋಹಿತ್ ಶರ್ಮಾ ತಲೆಯಾಡಿಸುತ್ತಿರುವಂತೆ ಕಾಣುತ್ತಾರೆ. ಅವರ ಎದುರು ಮುಖ್ಯ ಕೋಚ್ ಗೌತಮ್ ಗಂಭೀರ್ ಗಂಭೀರವಾಗಿ ಏನನ್ನೋ ಕೇಳುತ್ತಿರುವಂತೆ ಗೋಚರಿಸುತ್ತದೆ. ಇವರಿಬ್ಬರ ನಡುವೆ ಏನು ಚರ್ಚೆಯಾಗುತ್ತಿತ್ತು ಎಂಬುದಕ್ಕೆ ಧ್ವನಿ ಇಲ್ಲದಿದ್ದರೂ, ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದೆ.

ಇದು ತಾಂತ್ರಿಕ ಚರ್ಚೆಯೇ? ತಂಡದ ಆಯ್ಕೆಯ ಬಗ್ಗೆಯೇ? ಅಥವಾ ರೋಹಿತ್-ಕೊಹ್ಲಿ ಏಕದಿನ ಭವಿಷ್ಯದ ಬಗ್ಗೆಯೇ?” ಎಂಬ ಪ್ರಶ್ನೆಗಳು ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಟ್ರೆಂಡಿಂಗ್ ಆಗುತ್ತಿವೆ. ಆ ಒಂದು ನಿಮಿಷದ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡಿದೆ. #RohitGambhirChat, #DressingRoomDrama, #WhatHappenedInRanchi – ಈ ಹ್ಯಾಶ್‌ಟ್ಯಾಗ್‌ಗಳು ಟ್ವಿಟರ್ ಟ್ರೆಂಡ್‌ಗಳನ್ನು ಆಕ್ರಮಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವ್ಯಕ್ತಿಚಿತ್ರ | KSCA ಕ್ರೀಡಾಂಗಣದ ಶಿಲ್ಪಿ- ಎಂ ಚಿನ್ನಸ್ವಾಮಿ

ಅಭಿಮಾನಿಗಳು ತಮ್ಮ ತಮ್ಮ ಊಹೆಗಳನ್ನು ದಾಖಲಿಸಿದ್ದಾರೆ. “ತಂಡದ ಆಯ್ಕೆಯ ಬಗ್ಗೆ ಜಗಳವೇ?, “ರೋಹಿತ್ ODIನಿಂದ ರಿಟೈರ್ ಆಗ್ತಾರಾ?”, “ಗಂಭೀರ್ ಸೀಟ್ ಕೇಳ್ತಿದ್ದಾರಾ?” ಎಂಬ ಪ್ರಶ್ನೆಗಳನ್ನೂ ಕೇಳಲಾಗಿದೆ. ಇನ್ನೊಂದೆಡೆ ಕೆಲವರು “ಇದು ಕೇವಲ ತಾಂತ್ರಿಕ ಚರ್ಚೆಯಷ್ಟೇ ಎಂದು ಹೇಳುತ್ತಿದ್ದಾರೆ.

ಈ ನಡುವೆ, ಬಿಸಿಸಿಐ ದಕ್ಷಿಣ ಆಫ್ರಿಕಾ ಏಕದಿನ ಸರಣಿ ಮುಗಿದ ನಂತರ (ಡಿಸೆಂಬರ್ 6ರ ನಂತರ) ಅಹಮದಾಬಾದ್‌ನಲ್ಲಿ ಮಹತ್ವದ ಸಭೆ ಕರೆದಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಏಕದಿನ ಭವಿಷ್ಯ, 2027 ವಿಶ್ವಕಪ್ ರೋಡ್‌ಮ್ಯಾಪ್ ಈ ಸಭೆಯ ಮುಖ್ಯ ಅಜೆಂಡವಾಗಿದೆ. ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿಯ ಅಜಿತ್ ಅಗರ್ಕರ್ ಸೇರಿ ಬಿಸಿಸಿಐನ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಸಿರಬಹುದು ಎಂದು ಕೆಲವು ಅಭಿಮಾನಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...