ಐಪಿಎಲ್ 2025 | ಮತ್ತೊಂದು ದಾಖಲೆಯ ಹೊಸ್ತಿಲಲ್ಲಿ ರೋಹಿತ್‌ ಶರ್ಮಾ

Date:

ಮುಂಬೈ ಇಂಡಿಯನ್ಸ್‌ ತಂಡದ ಸ್ಟಾರ್ ಬ್ಯಾಟರ್‌ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಕಳೆದ 3 ಪಂದ್ಯಗಳಲ್ಲಿ ಉತ್ತಮ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ರೋಹಿತ್‌ ದೊಡ್ಡ ದಾಖಲೆ ಬರೆಯುವ ಸಾಧ್ಯತೆಯಿದೆ.

ಈಗಾಗಲೇ ಆಡಿದ 12 ಪಂದ್ಯಗಳಲ್ಲಿ 14 ಅಂಕಗಳನ್ನು ಕಲೆ ಹಾಕಿರುವ ಮುಂಬೈ ಇಂಡಿಯನ್ಸ್‌ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬುಧವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದದ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್‌ಗೆ ಅರ್ಹತೆ ಪಡೆಯುವ ಕನಸನ್ನು ಮುಂಬೈ ಕಾಣುತ್ತಿದೆ. ಈ ವೇಳೆ ರೋಹಿತ್ ಶರ್ಮಾ ಅಬ್ಬರಿಸುವುದು ತಂಡಕ್ಕೆ ಅನಿವಾರ್ಯವಾಗಿದೆ.

ಇತ್ತೀಚಿಗೆ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್‌ ಶರ್ಮಾ, ಈಗ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್‌ ಮಾತ್ರ ಆಡುತ್ತಾರೆ. ಇವರು ಐಪಿಎಲ್‌ನಲ್ಲಿ ಈ ಬಾರಿ ಉತ್ತಮವಾಗಿ ರನ್‌ ಕಲೆ ಹಾಕುತ್ತಿದ್ದಾರೆ. ರೋಹಿತ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 152 ಸ್ಟ್ರೈಕ್‌ರೇಟ್‌ನಲ್ಲಿ 300 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 30 ಆಗಿದೆ. ಇನ್ನು 17 ಸಿಕ್ಸರ್‌ ಹಾಗೂ 28 ಬೌಂಡರಿ ಬಾರಿಸಿರುವ ರೋಹಿತ್‌ ಶರ್ಮಾ ದೊಡ್ಡ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್‌ಗಳನ್ನು ಬಾರಿಸಿದರೆ ಐಪಿಎಲ್‌ನಲ್ಲಿ 300 ಸಿಕ್ಸರ್‌ ಬಾರಿಸಿದ ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಳ್ಳಲಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್‌ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ಐಪಿಎಲ್‌ನಲ್ಲಿ 268 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ, ಇಲ್ಲಿಯವರೆಗೆ 297 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಮೂರು ಸಿಕ್ಸರ್‌ ಸಿಡಿಸುವಲ್ಲಿ ಯಶಸ್ವಿಯಾದರೆ ದೊಡ್ಡ ದಾಖಲೆ ಬರೆಯಬಹುದು.

ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಕೀರ್ತಿ ವಿಂಡೀಸ್‌ನ ಕ್ರಿಸ್‌ ಗೇಲ್‌ ಅವರಿಗೆ ಸಲ್ಲುತ್ತದೆ. ಇವರು 142 ಪಂದ್ಯಗಳಲ್ಲಿ 357 ಸಿಕ್ಸರ್‌ ಸಿಡಿಸಿದ್ದಾರೆ. ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದಾರೆ.

ಕ್ರಿಸ್‌ ಗೇಲ್‌ 142 ಪಂದ್ಯಗಳಿಂದ 357 ಸಿಕ್ಸರ್, ರೋಹಿತ್ ಶರ್ಮಾ 268 ಪಂದ್ಯಗಳಿಂದ 297 ಸಿಕ್ಸರ್, ವಿರಾಟ್‌ ಕೊಹ್ಲಿ 263 ಪಂದ್ಯಗಳಿಂದ 290 ಸಿಕ್ಸರ್, ಎಂ ಎಸ್‌ ಧೋನಿ 277 ಪಂದ್ಯಗಳಿಂದ 264 ಸಿಕ್ಸರ್ ಹಾಗೂ ಎಬಿ ಡಿವಿಲಿಯರ್ಸ್‌ 184 ಪಂದ್ಯಗಳಿಂದ 251 ಸಿಕ್ಸರ್ ಬಾರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...