ಟೆಸ್ಟ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಮರಳಿದ ರೂಟ್

Date:

ಐಸಿಸಿ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಇತ್ತೀಚೆಗೆ ಅಗ್ರಸ್ಥಾನ ಕಳೆದುಕೊಂಡಿದ್ದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ ಅವರು ಮತ್ತೆ ಅಗ್ರಸ್ಥಾನಿಯಾಗಿ ಮರಳಿದ್ದಾರೆ. ಅದೂ ಕೇವಲ ಒಂದೇ ವಾರದಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆದಿದ್ದಾರೆ.

ದುಬೈನಲ್ಲಿ ಐಸಿಸಿ ಟೆಸ್ಟ್‌ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದೆ. ಪಟ್ಟಿಯಲ್ಲಿ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ 34ನೇ ಸ್ಥಾನಕ್ಕೆ ಏರಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್‌ ಕ್ರಿಕೆಟ್‌ ತಂಡಗಳ ನಡುವೆ ನಡೆದ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೂರನೇ ಪಂದ್ಯದಲ್ಲಿ 104 ರನ್‌ಗಳನ್ನು ಗಳಿಸಿದ ರೂಟ್ ಇಂಗ್ಲೆಂಡ್‌ ಗೆಲುವಿಗೆ ಪ್ರಧಾನ ಪಾತ್ರ ವಹಿಸಿದರು. ಮಾತ್ರವಲ್ಲದೆ, ಪಟ್ಟಿಯಲ್ಲಿ ತಮ್ಮ ಅಗ್ರಸ್ಥಾನವನ್ನು ಮರಳಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

34 ವರ್ಷದ ರೂಟ್ ಅವರು 2014ರ ಡಿಸೆಂಬರ್‌ನಲ್ಲಿ ಕುಮಾರ್‌ ಸಂಗಕ್ಕಾರ್ ಅವರ ದಾಖಲೆಯನ್ನು ಮುರಿದು, ನಂ.1 ಟೆಸ್ಟ್‌ ಬ್ಯಾಟ್ಸ್‌ಮನ್‌ ಸ್ಥಾನ ಪಡೆದುಕೊಂಡಿದ್ದರು. ಇತ್ತೀಚೆಗೆ, ಹ್ಯಾರಿ ಬ್ರೂಕ್‌ ಅವರು ರೂಟ್‌ ಅವರನ್ನು ಹಿಂದಿಕ್ಕಿ, ಅಗ್ರಸ್ಥಾನಕ್ಕೆ ಏರಿದ್ದರು. ಆದರೆ, ಒಂದೇ ವಾರದಲ್ಲಿ ರೂಟ್‌ ಮತ್ತೆ ಅಗ್ರಸ್ಥಾನ ಗಳಿಸಿದ್ದಾರೆ. ಇನ್ನು, ಕೇನ್ ವಿಲಿಯಮ್ಸನ್‌ 2ನೇ ಸ್ಥಾನಕ್ಕೆ ಜಿಗಿದಿದ್ದರೆ, ಹ್ಯಾರಿ ಬ್ರೂಕ್ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ ಪಂದ್ಯದಲ್ಲಿ 72 ರನ್ ಮತ್ತು 61 ರನ್‌ಗಳನ್ನು ಗಳಿಸಿದ ಜಡೇಜಾ ಅವರು ಐದು ಸ್ಥಾನಗಳ ಜಿಗಿತ ಕಂಡಿದ್ದು, 34ನೇ ಸ್ಥಾನಕ್ಕೆ ಏರಿದ್ದಾರೆ. 100 ಮತ್ತು 39 ರನ್‌ ಗಳಿಸಿದ್ದ ಕೆ.ಎಲ್ ರಾಹುಲ್ 35ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ವೇಗಿ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...