ನಾಲ್ಕನೇ ಟೆಸ್ಟ್ | ರೂಟ್ ಶತಕ, ಇಂಗ್ಲೆಂಡ್ 302/7; ಸ್ಪಿನ್ನರ್ ಅಶ್ವಿನ್ ಮತ್ತೊಂದು ಮೈಲಿಗಲ್ಲು

Date:

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ಜೋ ರೂಟ್ ಶತಕದ ನೆರವಿನಿಂದ ಮೊದಲ ದಿನದಾಂತ್ಯಕ್ಕೆ 90 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 302 ರನ್‌ ಗಳಿಸಿದೆ.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್‌ ಸ್ಟೋಕ್ಸ್ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಹತ್ತನೇ ಓವರ್‌ನಲ್ಲಿ ಆರಂಭಿಕ ಆಟಗಾರ ಬೆನ್‌ ಡೆಕಟ್(11) ಅವರನ್ನು ಪದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲಿಯೇ ವೇಗಿ ಆಕಾಶ್ ದೀಪ್ ಔಟ್‌ ಮಾಡಿದರು. ಭರವಸೆಯ ಆಟಗಾರ ಓಲಿ ಪೋಪ್‌ ಬ್ಯಾಟಿಂಗ್‌ ಆರಂಭಿಸಿದ ಕೂಡಲೇ ಆಕಾಶ್‌ದೀಪ್‌ಗೆ ಎಲ್‌ಬಿ ಆಗಿ ಪೆವಿಲಿಯನ್‌ಗೆ ತೆರಳಿದರು.

ಜೋರೂಟ್‌ ಅವರೊಂದಿಗೆ ಒಂದಷ್ಟು ಹೊತ್ತು ಆಟವಾಡಿದ ಜಾಕ್‌ ಕ್ರಾಲಿ 42 ರನ್‌ ಗಳಿಸಿದ್ದಾಗ ಆಕಾಶ್‌ ದೀಪ್‌ಗೆ ಬೌಲ್ಡ್‌ ಆದರು. ಒಂಚೂರು ಭರವಸೆ ಮೂಡಿಸಿದ ಜಾನಿ ಬೈರ್‌ಸ್ಟೋ 38 ರನ್‌ ಗಳಿಸಿ ಆರ್‌ ಅಶ್ವಿನ್‌ಗೆ ಎಲ್‌ಬಿ ಬಲೆಗೆ ಬಿದ್ದರು. ನಾಯಕ ಬೆನ್‌ ಸ್ಟೋಕ್ಸ್‌(3) ಹೆಚ್ಚು ಹೊತ್ತು ನಿಲ್ಲದೆ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

112 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಜೋರೂಟ್ ಹಾಗೂ ವಿಕೆಟ್ ಕೀಪರ್‌ ಬೆನ್‌ ಫೋಕ್ಸ್‌ ಅವರ 113 ರನ್‌ಗಳ ಜೊತೆಯಾಟ ಸಮಾಧಾನಕರ ಮೊತ್ತ ದಾಖಲಿಸಲು ನೆರವಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಇದೇ ಸಂದರ್ಭದಲ್ಲಿ ಜೋರೂಟ್ ತಮ್ಮ ಕ್ರಿಕೆಟ್ ವೃತ್ತಿ ಜೀವನದ 31ನೇ ಶತಕ ಬಾರಿಸಿದರು. ರೂಟ್‌ ಅವರ ಶತಕ ಭಾರತದ ವಿರುದ್ಧ 10ನೇಯದಾಗಿದೆ. 226 ಚೆಂಡುಗಳನ್ನು ಎದುರಿಸಿದ ರೂಟ್‌ 9 ಬೌಂಡರಿಗಳನ್ನು ಲೀಲಾಜಾಲವಾಗಿ ಬಾರಿಸಿ 106 ರನ್‌ಗಳೊಂದಿಗೆ ಅಜೇಯರಾಗಿ ಉಳಿದಿದ್ದಾರೆ.

4 ಬೌಂಡರಿ, ಒಂದು ಸಿಕ್ಸರ್‌ನೊಂದಿಗೆ 47 ರನ್‌ ಗಳಿಸಿದ್ದ ಫೋಕ್ಸ್ ಮೊಹಮ್ಮದ್ ಸಿರಾಜ್‌ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾಗೆ ಕ್ಯಾಚಿತ್ತು ಔಟಾದರು. ನಂತರ ಬಂದ ಟಾಮ್‌ ಹಾರ್ಟ್ಲಿ 13 ರನ್‌ ಗಳಿಸಿ ಸಿರಾಜ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು. ದಿನದಾಂತ್ಯದ ಕೊನೆಯಲ್ಲಿ 31 ರನ್‌ ಗಳಿಸಿರುವ ಓಲಿ ರಾಬಿನ್ಸನ್‌ ರೂಟ್‌ ಅವರೊಂದಿಗೆ ಆಟಗಾಡುತ್ತಿದ್ದಾರೆ.

ಚೊಚ್ಚಲ ಪಂದ್ಯದಲ್ಲಿಯೇ ವೇಗಿ ಆಕಾಶ್ ದೀಪ್ ಆಂಗ್ಲ ಪಡೆಯ ಮೊದಲ ಮೂವರು ಬ್ಯಾಟರ್‌ಗಳನ್ನು ಔಟ್ ಮಾಡಿ ನಡುಕ ಹುಟ್ಟಿಸಿದ್ದು ಕೂಡ ಮೊದಲ ದಿನದ ವಿಶೇಷವಾಗಿತ್ತು.

ಟೀಂ ಇಂಡಿಯಾ ಪರ ಆಕಾಶ್ ದೀಪ್ 70/3, ಆರ್‌ ಅಶ್ವಿನ್ 83/1, ರವೀಂದ್ರ ಜಡೇಜಾ 55/1 ಹಾಗೂ  ಸಿರಾಜ್ 60/2 ವಿಕೆಟ್ ಕಬಳಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಅಶ್ವಿನ್‌ 100 ವಿಕೆಟ್

ಜಾನಿ ಬೈರ್‌ಸ್ಟೋ ಅವರನ್ನು ಎಲ್‌ಬಿ ಬಲೆಗೆ ಕೆಡವುದರ ಮೂಲಕ ಸ್ಪಿನ್ನರ್ ಆರ್‌ ಅಶ್ವಿನ್ ಇಂಗ್ಲೆಂಡ್ ವಿರುದ್ಧ ನೂರು ವಿಕೆಟ್‌ಗಳ ಸಾಧನೆ ಮಾಡಿದರು. ಇಂಗ್ಲೆಂಡ್ ವಿರುದ್ಧ 100 ವಿಕೆಟ್ ಹಾಗೂ 1000 ಹೆಚ್ಚು ರನ್‌ ಬಾರಿಸಿದ ಐದನೇ ಆಟಗಾರನಾದ ಸಾಲಿಗೆ ಅಶ್ವಿನ್ ಸೇರ್ಪಡೆಯಾದರು. ಈ ಮೊದಲು ವಿಂಡೀಸಿನ ಗ್ಯಾರಿ ಸೋಬರ್ಸ್,ಆಸೀಸ್‌ನ ಮಾಂಟಿ ನೊಬೆಲ್ ಹಾಗೂ ಗಿಫೆನ್‌ ಈ ಸಾಧನೆ ಮಾಡಿದ್ದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...